ಪುರಿ ಜಗನ್ನಾಥನ ಬಹುದಾ ಯಾತ್ರೆಯಲ್ಲಿ ಭಾರಿ ಜನಸಂದಣಿ: ಉಸಿರುಗಟ್ಟಿ ಭಕ್ತನೊಬ್ಬ ಸಾವು

Date:

ಒಡಿಶಾದ ಪುರಿಯಲ್ಲಿ ಶುಕ್ರವಾರ ನಡೆದ ಭಗವಾನ್ ಜಗನ್ನಾಥನ ‘ಬಹುದಾ ಯಾತ್ರೆ’ಯಲ್ಲಿ (ರಥ ಹಿಂದಿರುಗುವ ಮೆರವಣಿಗೆ) ಉಂಟಾದ ಭಾರಿ ಜನಸಂದಣಿಯ ನಡುವೆ ಉಸಿರುಗಟ್ಟಿ ಭಕ್ತರೊಬ್ಬರು ಸಾವನ್ನಪ್ಪಿ, ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.

- Advertisement -

ಶುಕ್ರವಾರ ಬಹುದಾ ಯಾತ್ರೆಯ ವೇಳೆ ಉಂಟಾದ ಭಾರಿ ಜನದಟ್ಟಣೆ ಹಾಗೂ ಸೆಖೆಯ ವಾತಾವರಣದಿಂದಾಗಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 16ರಂದು ನಡೆದ ಗುಂಡಿಚಾ ಯಾತ್ರೆಯ ವೇಳೆಯೂ ಉಂಟಾದ ಭಾರಿ ಜನಸಂದಣಿಯಿಂದಾಗಿ ಇಬ್ಬರು ಭಕ್ತರು ಸಾವನ್ನಪ್ಪಿದ್ದರು. ಆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ತಲಾ 10 ಲಕ್ಷ ರೂ. ಪರಿಹಾರವನ್ನು ಈಗಾಗಲೇ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ದೇವತೆಗಳಾದ ಜಗನ್ನಾಥ, ಬಲಭದ್ರ ಮತ್ತು ಸುಭದ್ರಾ ದೇವಿಯು ತಮ್ಮ ಜನ್ಮಸ್ಥಳವಾದ ಗುಂಡಿಚಾ ದೇವಸ್ಥಾನದಲ್ಲಿ ಒಂಬತ್ತು ದಿನಗಳ ಕಾಲ ನೆಲೆಸಿದ ನಂತರ, ಬಹುದಾ ಯಾತ್ರೆಯ ಮೂಲಕ 12ನೇ ಶತಮಾನದ ಪುರಿ ದೇವಾಲಯಕ್ಕೆ ಮರಳುತ್ತಾರೆ ಎಂಬುದು ಭಕ್ತರ ನಂಬಿಕೆಯಾಗಿದೆ.

ರಾಜ್ಯ ಸರ್ಕಾರ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಕಾರಣ ನೂಕುನುಗ್ಗಲಿನಂತಹ ಪರಿಸ್ಥಿತಿ ನಿರ್ಮಾಣವಾಗಿ ಭಕ್ತರು ಸಾವನ್ನಪ್ಪಿದ್ದಾರೆ ಎಂದು ವಿರೋಧ ಪಕ್ಷವಾದ ಬಿಜು ಜನತಾ ದಳ ಆರೋಪಿಸಿದೆ. ಅಧಿಕಾರಿಗಳ ಅವ್ಯವಸ್ಥೆಯಿಂದಾಗಿ 25ಕ್ಕೂ ಹೆಚ್ಚು ಗಾಯಾಳುಗಳು ಪುರಿ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನಲ್ಲಿ ದಾಖಲಾಗಿದ್ದಾರೆ ಎಂದು ಹಿರಿಯ ಬಿಜೆಡಿ ನಾಯಕ ಸಂಜಯ್ ದಾಸ್ ಬರ್ಮಾ ದೂರಿದ್ದಾರೆ.

ಶನಿವಾರ ನಡೆಯಲಿರುವ ‘ಸುನಾ ಬೇಶ’ (ಚಿನ್ನದ ಅಲಂಕಾರ) ವಿಧಿವಿಧಾನಗಳಿಗಾಗಿ ರಾಜ್ಯ ಸರ್ಕಾರ ವಿಶೇಷ ಸಂಚಾರ ನಿಯಂತ್ರಣ ಮತ್ತು ಜನಸಂದಣಿ ನಿರ್ವಹಣಾ ಯೋಜನೆಗಳನ್ನು ರೂಪಿಸಿದೆ. ಈ ಕುರಿತು ಮಾಹಿತಿ ನೀಡಿರುವ ಎಡಿಜಿ ಸೌಮೇಂದ್ರ ಪ್ರಿಯದರ್ಶಿ, “ಶನಿವಾರ ಸಂಜೆ ದೇವತೆಗಳ ‘ಸುನಾ ಬೇಶ’ ಕಣ್ತುಂಬಿಕೊಳ್ಳಲು ಸುಮಾರು 10 ಲಕ್ಷ ಭಕ್ತರು ಪುರಿಗೆ ಆಗಮಿಸುವ ನಿರೀಕ್ಷೆಯಿದೆ. ಈ ವೇಳೆ ಜನಸಂದಣಿಯನ್ನು ನಿರ್ವಹಿಸುವುದು ಒಂದು ದೊಡ್ಡ ಸವಾಲಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...