ಧನರಾಜ್ ಹತ್ಯೆ ಪ್ರಕರಣ: ಮೂವರು RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ; 16 ಮಂದಿ ಖುಲಾಸೆ!

Date:

2016ರಲ್ಲಿ ಪಯ್ಯನ್ನೂರಿನಲ್ಲಿ ನಡೆದ ಸಿಪಿಐ(ಎಂ) ಸ್ಥಳೀಯ ಮುಖಂಡ ಹಾಗೂ ಡಿವೈಎಫ್‌ಐ ನಾಯಕ ಸಿ.ವಿ. ಧನರಾಜ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತಳಿಪರಂಬ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ ಪ್ರಮುಖ ಮೂವರು ಅಪರಾಧಿಗಳಾದ RSS ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹15 ಲಕ್ಷ ದಂಡ ವಿಧಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಇನ್ನುಳಿದ 16 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ.

- Advertisement -

ನ್ಯಾಯಾಧೀಶ ಕೆ.ಎನ್. ಪ್ರಶಾಂತ್ ಈ ತೀರ್ಪು ನೀಡಿದ್ದು, ಮೊದಲನೇ ಆರೋಪಿ ಟಿ.ಪಿ. ಬೈಜು (34), ಎರಡನೇ ಆರೋಪಿ ಎಂ. ವಿಪಿನ್ (34) ಹಾಗೂ ಮೂರನೇ ಆರೋಪಿ ಎಂ. ವೈಶಾಖ್ (31) (ವಿಪಿನ್ ಮತ್ತು ವೈಶಾಖ್ ಸಹೋದರರು) ದೋಷಿಗಳೆಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್...

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ ಸ್ವಾವಲಂಬನೆ, ಮಹಿಳೆಯರಿಗೆ ಉದ್ಯೋಗಾವಕಾಶ, ಗ್ರಾಮೀಣ ಜನರಿಗೆ ಬದುಕಿನ ಭದ್ರತೆ ಹಾಗೂ ದೇಶಕ್ಕೆ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ದೊರಕಿಸಿಕೊಟ್ಟ ದೂರದೃಷ್ಟಿಯ ನಾಯಕರು. ಭಾರತದ...

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಜೀವಾವಧಿ ಶಿಕ್ಷೆಯ ಜೊತೆಗೆ, ಇತರ ಅಪರಾಧಗಳಿಗಾಗಿ ಒಟ್ಟು 5 ವರ್ಷ 4 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ನ್ಯಾಯಾಲಯದ ಆದೇಶದಂತೆ, ಅಪರಾಧಿಗಳು ಮೊದಲು 5 ವರ್ಷ 4 ತಿಂಗಳ ಶಿಕ್ಷೆಯನ್ನು ಅನುಭವಿಸಬೇಕು. ಆ ಬಳಿಕ ಅವರ ಜೀವಾವಧಿ ಶಿಕ್ಷೆ ಆರಂಭವಾಗಲಿದೆ.

ಶಸ್ತ್ರಾಸ್ತ್ರಗಳಿಂದ ಹಲ್ಲೆ/ಬೆದರಿಕೆ (ಸೆಕ್ಷನ್ 506)ಗೆ 4 ವರ್ಷ ಜೈಲು, ಧನರಾಜ್ ತಾಯಿಯ ಮೇಲೆ ಹಲ್ಲೆ (ಸೆಕ್ಷನ್ 323)ಗೆ1 ವರ್ಷ ಜೈಲು, ಮನೆಗೆ ಅಕ್ರಮ ಪ್ರವೇಶ (ಸೆಕ್ಷನ್ 447)ಗೆ 3 ತಿಂಗಳು ಜೈಲು ಮತ್ತು ಪತ್ನಿ ಮತ್ತು ತಾಯಿಯನ್ನು ಅಕ್ರಮವಾಗಿ ತಡೆದಿದ್ದಕ್ಕೆ (ಸೆಕ್ಷನ್ 341)ಗೆ 1 ತಿಂಗಳು ಜೈಲುವಾಸ ವಿಧಿಸಲಾಗಿದೆ. 

ಮೂವರು ಅಪರಾಧಿಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹15 ಲಕ್ಷ ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲರಾದಲ್ಲಿ ಹೆಚ್ಚುವರಿ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ವಸೂಲಾದ ಸಂಪೂರ್ಣ ದಂಡದ ಮೊತ್ತವನ್ನು ಮೃತ ಧನರಾಜ್ ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡಲು ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ಕುಟುಂಬದ ಆರ್ಥಿಕ ಹಿನ್ನೆಲೆಯನ್ನು ಪರಿಗಣಿಸಿ, ಸಂತ್ರಸ್ತರ ಪರಿಹಾರ ಯೋಜನೆಯಡಿ ಹೆಚ್ಚುವರಿ ನೆರವು ನೀಡುವಂತೆ ತಲಶ್ಶೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದೆ.

ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂಬ ಪ್ರಾಸಿಕ್ಯೂಷನ್ ವಾದವನ್ನು ನ್ಯಾಯಾಲಯ ತಿರಸ್ಕರಿಸಿತು. “ಕುಟುಂಬದ ಸದಸ್ಯರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಅತ್ಯಂತ ಕ್ರೂರ ಕೃತ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಯಾವುದೇ ಕ್ಷಮೆಯಿಲ್ಲ. ಆದರೆ, ಅಪರಾಧಿಗಳ ವಯಸ್ಸು, ಸಾಮಾಜಿಕ-ಆರ್ಥಿಕ ಹಿನ್ನೆಲೆ ಹಾಗೂ ಅವರಲ್ಲಿ ಸುಧಾರಣೆಯಾಗುವ ಸಾಧ್ಯತೆಗಳನ್ನು ಪರಿಗಣಿಸಿದಾಗ, ಇದು ‘ಅಪರೂಪದಲ್ಲಿ ಅಪರೂಪದ’ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ” ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.

ಇನ್ನು ಪ್ರಕರಣದ ಮೊದಲ ಪ್ರಾಸಿಕ್ಯೂಷನ್ ಸಾಕ್ಷಿ ಪ್ರಜೀಶ್ ಅವರ ಹೇಳಿಕೆಗಳಲ್ಲಿ ಗೊಂದಲಗಳಿದ್ದು, ಅವರು ಸಕ್ರಿಯ ಸಿಪಿಐ(ಎಂ) ಕಾರ್ಯಕರ್ತರಾಗಿರುವುದರಿಂದ ಅವರ ಸಾಕ್ಷ್ಯ ವಿಶ್ವಾಸಾರ್ಹವಲ್ಲ ಎಂದು ನ್ಯಾಯಾಲಯ ಪರಿಗಣಿಸಿತು. ಇದೇ ವೇಳೆ, ಧನರಾಜ್ ಅವರ ತಾಯಿಯ ಸಾಕ್ಷ್ಯವನ್ನು ನ್ಯಾಯಾಲಯ ಸಂಪೂರ್ಣವಾಗಿ ಪುರಸ್ಕರಿಸಿತು. ಘಟನೆಯ ಆಘಾತದಲ್ಲಿದ್ದ ಕಾರಣ ಅವರಿಗೆ ಎಲ್ಲಾ ಆರೋಪಿಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಒಪ್ಪಿಕೊಂಡಿತು. ವಿದ್ಯುತ್ ದೀಪದ ಬೆಳಕಿನಲ್ಲಿ ಆರೋಪಿಗಳನ್ನು ಗುರುತಿಸಲಾಗಿದೆ ಎಂಬ ಪ್ರಾಸಿಕ್ಯೂಷನ್ ವಾದಕ್ಕೆ ಮನ್ನಣೆ ಸಿಕ್ಕಿತು.

2016ರ ಜುಲೈನಲ್ಲಿ ರಾಮಂತಳಿಯ ತಮ್ಮ ನಿವಾಸದ ಬಳಿ ಬೈಕ್‌ಗಳಲ್ಲಿ ಹಿಂಬಾಲಿಸಿ ಬಂದ ತಂಡವೊಂದು ಪತ್ನಿ ಮತ್ತು ತಾಯಿಯ ಎದುರೇ ಧನರಾಜ್ ಅವರನ್ನು ಹತ್ಯೆ ಮಾಡಿತ್ತು. ಒಟ್ಟು 20 ಆರೋಪಿಗಳ ಪೈಕಿ 12ನೇ ಆರೋಪಿ ಪ್ರತ್ಯೇಕ ಘಟನೆಯೊಂದರಲ್ಲಿ ಮೃತಪಟ್ಟಿದ್ದರಿಂದ 19 ಮಂದಿಯ ವಿರುದ್ಧ 2025ರ ಸೆಪ್ಟೆಂಬರ್‌ನಲ್ಲಿ ವಿಚಾರಣೆ ಆರಂಭವಾಗಿತ್ತು.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ.ಕೆ. ಶ್ರೀಧರನ್, ತೀರ್ಪು ಸಮಾಧಾನ ತಂದಿದೆ ಎಂದಿದ್ದಾರೆ. ಆದರೆ, 16 ಆರೋಪಿಗಳನ್ನು ಖುಲಾಸೆಗೊಳಿಸಿರುವುದಕ್ಕೆ ಧನರಾಜ್ ಕುಟುಂಬ ಹಾಗೂ ಪಕ್ಷದ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇದರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಗ್ಗುತ್ತಿರುವ ಸಂಸತ್ ಕಲಾಪ: ಮೋದಿ ಸರ್ಕಾರದ ಅವಧಿಯಲ್ಲಿ ಕಡಿಮೆಯಾದ ಸದನದ ದಿನಗಳು

ಮುಂದಿನ ಸಂಸತ್ ಅಧಿವೇಶನವನ್ನು ಯಾವಾಗ ಕರೆಯಬೇಕು ಎಂಬ ಬಗ್ಗೆ ನರೇಂದ್ರ ಮೋದಿ...

ನಂದಿನಿ ಮೊಸರಿನ ದರ ಇಳಿಕೆ

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ...

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...