ಯಾವುದೇ ಪ್ರದೇಶವನ್ನು ವಶಕ್ಕೆ ಪಡೆಯಲು ಅದರ ಭಾಷೆ, ಸಂಸ್ಕೃತಿ ನಾಶ ಮಾಡಬೇಕು: ಉಪ ರಾಷ್ಟ್ರಪತಿ ಧನಕರ್

Date:

ಒಂದು ಪ್ರದೇಶವನ್ನು ತೆಕ್ಕೆಗೆ ತೆಗೆದುಕೊಳ್ಳಲು ಇರುವ ಉತ್ತಮ ಮಾರ್ಗವೆಂದರೆ ಆ ಪ್ರದೇಶದ ಸಂಸ್ಕೃತಿಯನ್ನು ಅಳಿಸಿ, ಭಾಷೆಯನ್ನು ನಾಶ ಮಾಡುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.

- Advertisement -

ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸಿರುವ ಧನಕರ್, “ಶತಮಾನಗಳ ಹಿಂದೆ ಭಾರತಕ್ಕೆ ಬಂದ ಆಕ್ರಮಣಕಾರರು ನಮ್ಮ ಭಾಷೆ, ಸಂಸ್ಕೃತಿ, ಧಾರ್ಮಿಕ ಸ್ಥಳಗಳನ್ನು ಬುಡಮೇಲು ಮಾಡಿ, ಅವರ ಭಾಷೆ-ಸಂಸ್ಕೃತಿಗಳನ್ನು ಹೇರಿ ದಬ್ಬಾಳಿಕೆ ನಡೆಸುತ್ತಿದ್ದರು. ಅನಾಗರಿಕತೆ ಮತ್ತು ಸೇಡಿನ ಮನೋಭಾವವು ವಿಪರೀತವಾಗಿತ್ತು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಸರ್ಕಾರಿ ವೆಬ್‌ಸೈಟ್‌ನಲ್ಲಿ ‘ಮೊಘಲ್ ಸಾಮ್ರಾಜ್ಯವು ಶ್ರೇಷ್ಠವಾದದ್ದು’ ಎಂಬ ಹೇಳಿಕೆಯನ್ನು ತೆಗೆದುಹಾಕಲಾಗಿದೆ. ಅವರು ನಮ್ಮ ಭಾಷೆ, ಸಂಸ್ಕೃತಿ ಹಾಗೂ ಧಾರ್ಮಿಕ ಸ್ಥಳಗಳ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಅವರು ನಮ್ಮನ್ನು ನೋಯಿಸಲು ನಮ್ಮ ಭಾಷೆಗಳನ್ನು ನಾಶ ಮಾಡಲು ಯತ್ನಿಸಿದರು. ನಮ್ಮ ಭಾಷೆ ಪ್ರವರ್ಧಮಾನಕ್ಕೆ ಬರದಿದ್ದರೆ, ನಮ್ಮ ಇತಿಹಾಸವೂ ಪ್ರವರ್ಧಮಾನಕ್ಕೆ ಬರುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ಧನಕರ್ ಅವರು ಭಾರತದ ಮೇಲಿನ ಇತರ ಆಕ್ರಮಣಗಳ ಬಗ್ಗೆ ಮಾತ್ರವೇ ಮಾತನಾಡಿದ್ದಾರೆ. ಆದರೆ, ಅವರ ಹೇಳಿಕೆಯು, ಅವರದ್ದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳನ್ನು ತನ್ನ ವಶಕ್ಕೆ ಪಡೆಯಲು ಯತ್ನಿಸುತ್ತಿರುವ, ಹಿಂದಿ ಹೇರಿಕೆಗೆ ಹವಣಿಸುತ್ತಿರುವುದನ್ನೂ ಪ್ರತಿನಿಧಿಸುತ್ತದೆ. ಧನಕರ್ ಹೇಳುವಂತೆಯೇ, ಬಿಜೆಪಿಯು ಉತ್ತರ ಹಿಂದಿ ಭಾಷೆಯನ್ನು ದಕ್ಷಿಣದ ರಾಜ್ಯಗಳ ಮೇಲೆ ಹೇರಲು ನಾನಾ ರೀತಿಯಲ್ಲಿ ಯತ್ನಿಸುತ್ತಿದೆ ಎಂದು ವಿಶ್ಲೇಷಕರು ಹೇಳುತ್ತಾರೆ.

ಇದೀಗ, ಕೇಂದ್ರ ಸರ್ಕಾರ ಮತ್ತು ದಕ್ಷಿಣ ಭಾರತದ ರಾಜ್ಯಗಳ ನಡುವೆ ಮತ್ತೆ ಎನ್‌ಇಪಿ ಮತ್ತು ಹಿಂದಿ ಹೇರಿಕೆ ತಿಕ್ಕಾಟ ಮುನ್ನೆಲೆಗೆ ಬಂದಿದೆ. ಯುಜಿಸಿ ನಿಯಮಗಳ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳು ಜಂಟಿ ನಿರ್ಣಯ ಕೈಗೊಂಡಿವೆ.

ಈ ನಡುವೆ, ಕೇಂದ್ರ ಸರ್ಕಾರವು ಸಮಗ್ರ ಶಿಕ್ಷಾ ಅಭಿಯಾನದಡಿ ತಮಿಳುನಾಡಿಗೆ ಬಿಡುಗಡೆ ಮಾಡಬೇಕಿದ್ದ ಅನುದಾನದಲ್ಲಿ 1,152 ಕೋಟಿ ರೂ. ಅನುದಾನವನ್ನು ತಡೆಹಿಡಿದಿದೆ. ತಮಿಳುನಾಡು ಸರ್ಕಾರ ‘ಎನ್‌ಇಪಿ’ಯನ್ನ ಜಾರಿಗೆ ತಂದರೆ ಮಾತ್ರವೇ ಉಳಿದ ಹಣವನ್ನು ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಹೀಗಾಗಿ, ಎನ್‌ಇಪಿ ಜಾರಿ ಮಾಡಬೇಕು ಅಂತ ಒತ್ತಾಯಿಸುತ್ತಿರುವುದು ರಾಜ್ಯಗಳ ಮೇಲೆ ಹಿಂದಿ ಹೇರಿಕೆಯ ಹುನ್ನಾರದ ಭಾಗವಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಎನ್‌ಇಪಿ ಜಾರಿ ಮಾಡುವುದಿಲ್ಲ ಎಂದು ಕಡಾಖಂಡಿತವಾಗಿ ಹೇಳಿದೆ. ಅಲ್ಲದೆ, ತಮಿಳುನಾಡಿನಲ್ಲಿ ಹಿಂದಿ ಬೋರ್ಡ್‌ಗಳಿಗೆ ಕಪ್ಪು ಮಸಿ ಬಳಿಯುವ ಅಭಿಯಾನವೂ ನಡೆಯುತ್ತದೆ. ಚೆನ್ನೈ ಬಳಿಯ ಪೊಲ್ಲಾಚಿ ರೈಲು ನಿಲ್ದಾಣದಲ್ಲಿ ತಮಿಳು ಕಾರ್ಯಕರ್ತರು ಹಿಂದಿಯಲ್ಲಿದ್ದ ಬೋರ್ಡ್‌ಗಳಿಗೆ ಕಪ್ಪು ಮಸಿ ಬಳಿದು, ಹಿಂದಿ ಹೇರಿಕೆ ವಿರುದ್ಧ ಮತ್ತೊಮ್ಮೆ ಹೋರಾಟದ ಕಿಡಿ ಹೊತ್ತಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...