ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರರಕಣ; ಅಪರಾಧ ಸ್ಥಳ ಮರುಸೃಷ್ಟಿಸಿದ SIT

Date:

ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (SIT), ಶನಿವಾರ ಧರ್ಮಸ್ಥಳದ ಮಣ್ಣಸಂಕದಲ್ಲಿರುವ ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಸುದೀರ್ಘ ಸ್ಥಳ ಮಹಜರು ಹಾಗೂ ಅಪರಾಧ ಸ್ಥಳದ ಮರುಸೃಷ್ಟಿ ನಡೆಸಿದೆ.

- Advertisement -

ಕರ್ನಾಟಕ ಸರ್ಕಾರ ಹೊಸ ಎಸ್‌ಐಟಿ ರಚಿಸಿ ಮೂರು ತಿಂಗಳೊಳಗೆ ಅನುಸರಣಾ ವರದಿ ಸಲ್ಲಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ನಿರ್ದೇಶನದ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ. ಎಸ್‌ಐಟಿ ತನಿಖಾಧಿಕಾರಿ, ಹಿರಿಯ ಐಪಿಎಸ್ ಅಧಿಕಾರಿ ಲೋಕೇಶ್ ಜಗಳಸಾರ್ ಹಾಗೂ ಎಸಿಪಿ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಈ ಸ್ಥಳ ಪರಿಶೀಲನೆ ನಡೆಯಿತು. 2012ರ ಅಕ್ಟೋಬರ್ 9ರಂದು 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ನಾಪತ್ತೆಯಾಗಿದ್ದ ನೇತ್ರಾವತಿ ಸ್ನಾನಘಟ್ಟದ ಸಮೀಪದ ಮಣ್ಣಸಂಕ ಹಾಗೂ ಮರುದಿನ ಆಕೆಯ ಮೃತದೇಹ ಪತ್ತೆಯಾಗಿದ್ದ ಅರಣ್ಯ ಪ್ರದೇಶವನ್ನು ತಂಡವು ಕೂಲಂಕಷವಾಗಿ ಪರಿಶೀಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಈ ತನಿಖಾ ಪ್ರಕ್ರಿಯೆಯಲ್ಲಿ ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯ (FSL) ತಜ್ಞರು, ಅಪರಾಧ ಸ್ಥಳ ಪರಿಶೀಲನಾ (SOCO) ತಂಡ, ಸರ್ಕಾರಿ ವೈದ್ಯಾಧಿಕಾರಿಗಳು, ಸ್ಥಳೀಯ ಕಂದಾಯ ಅಧಿಕಾರಿ (VAO) ಹಾಗೂ ಲೋಕೋಪಯೋಗಿ ಇಲಾಖೆಯ (PWD) ಎಂಜಿನಿಯರ್‌ಗಳು ಜಂಟಿಯಾಗಿ ಭಾಗವಹಿಸಿದ್ದರು. ಅಪರಾಧ ಸ್ಥಳದ ಮರುಸೃಷ್ಟಿಯ ಸಂದರ್ಭದಲ್ಲಿ 2012ರಲ್ಲಿ ಸೌಜನ್ಯ ಮೃತದೇಹ ಪತ್ತೆಯಾದಾಗ ಪೊಲೀಸರಿಗೆ ಮೊದಲ ಮಾಹಿತಿ ನೀಡಿದ್ದ ಹಾಗೂ ದೂರು ದಾಖಲಿಸಿದ್ದ ಆಕೆಯ ಚಿಕ್ಕಪ್ಪ ಪುರಂದರ ಗೌಡ ಮತ್ತು ಮೂಲ ಮಹಜರು ಸಾಕ್ಷಿಗಳು ಉಪಸ್ಥಿತರಿದ್ದರು. ಘಟನೆ ನಡೆದ ಸಮಯದಲ್ಲಿನ ಸನ್ನಿವೇಶ ಮತ್ತು ಘಟನಾವಳಿಗಳ ಕ್ರಮವನ್ನು ಸಾಕ್ಷಿಗಳು ತನಿಖಾಧಿಕಾರಿಗಳಿಗೆ ವಿವರವಾಗಿ ವಿವರಿಸಿದರು.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ನಾಪತ್ತೆಯಾಗಿದ್ದು, ಅಕ್ಟೋಬರ್ 10ರಂದು ಆಕೆಯ ಮೃತದೇಹ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಅಪಹರಣ, ಅತ್ಯಾಚಾರ ಮತ್ತು ಕೊಲೆ ಆರೋಪ ಒಳಗೊಂಡಿದ್ದ ಈ ಪ್ರಕರಣದ ಆರಂಭಿಕ ತನಿಖೆಯಲ್ಲಿ ಲೋಪದೋಷಗಳಾಗಿವೆ ಎಂಬ ಆಕ್ಷೇಪಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿಷ್ಪಕ್ಷಪಾತ ಹಾಗೂ ಸಮಗ್ರ ಮರುತನಿಖೆಗೆ ಆದೇಶಿಸಿದ್ದು, 3 ತಿಂಗಳ ಗಡುವು ನೀಡಿದೆ. ಈ ಹಿಂದೆ ಪ್ರಕರಣದ ತನಿಖೆಯ ವಿವಿಧ ಹಂತಗಳಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಗೆ ಎಸ್‌ಐಟಿ ಸಮನ್ಸ್ ಜಾರಿಗೊಳಿತ್ತು.  ಸೌಜನ್ಯಾ ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಬೆಳ್ತಂಗಡಿ ಪೊಲೀಸರು ಕೈಗೊಂಡಿದ್ದರು. ಬಳಿಕ ಪ್ರಕರಣವು ಸಿಐಡಿ ಮತ್ತು ಸಿಬಿಐ ತನಿಖೆಯ ಹಂತಗಳನ್ನೂ ತಲುಪಿತ್ತು. 

ಪ್ರಕರಣದ ಆರಂಭಿಕ ತನಿಖೆ ಕೈಗೆತ್ತಿಕೊಂಡಿದ್ದ ಸ್ಥಳೀಯ ಪೊಲೀಸರು ಸಂತೋಷ್ ರಾವ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದರು. ಆದರೆ, ಸಂತೋಷ್ ರಾವ್ ನೈಜ ಅಪರಾಧಿಯಲ್ಲ; ಕೃತ್ಯದ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಹಾಗೂ ಪೊಲೀಸರು ನಿಜವಾದ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಸೌಜನ್ಯ ಅವರ ಕುಟುಂಬಸ್ಥರು ಮತ್ತು ವಿವಿಧ ಸಂಘಟನೆಗಳ ಹೋರಾಟಗಾರರು ಗಂಭೀರ ಆರೋಪ ಮಾಡಿದ್ದರು. ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಎಸ್‌ಐಟಿ ತಂಡವು, ಹೊಸ ಪುರಾವೆಗಳ ಸಂಗ್ರಹಣೆ ಹಾಗೂ ವೈಜ್ಞಾನಿಕ ಪುನರ್ರಚನೆಯ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಬೇಕಿದೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಗುಳೆ ಹೋಗಬೇಡಿ, ಊರಲ್ಲಿಯೇ ವಿಬಿ-ಜಿ ರಾಮ್‌ ಜಿ ಕೆಲಸ ಮಾಡಿ

ಕೂಲಿ ಕಾರ್ಮಿಕರು ಗುಳೆ ಹೋಗದೆ ತಮ್ಮ ಗ್ರಾಮದಲ್ಲಿಯೇ ವಿಬಿ-ಜಿ ರಾಮ್‌ ಜಿ...

ಶಿವಮೊಗ್ಗ | ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ; ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ...

ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ನ ‘ಕಾಯಿಸುವ ಧೋರಣೆ’ಗೆ ಆಕಾಶ್ ಚೋಪ್ರಾ ಕಿಡಿ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು...

ಈ ದಿನ ಸಂಪಾದಕೀಯ | ದಮನಕ್ಕೆ ಮಣಿಯದೆ ಪ್ರಜಾಪ್ರಭುತ್ವದ ಹಕ್ಕು ಗೆದ್ದ ಜಾಮಿಯಾ ಯುವಶಕ್ತಿ!

ಇಪ್ಪತ್ತು ವರ್ಷಗಳಿಂದ ಕಸಿದುಕೊಳ್ಳಲಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯ ಹಕ್ಕನ್ನು ಮರಳಿ ಪಡೆಯಲು...