ಅನಾರೋಗ್ಯದಡಿ ಜಾಮೀನು ಪಡೆಯಲು ಕೇಜ್ರಿವಾಲ್ ಮಾವು ಸೇವನೆ: ಇ.ಡಿ

Date:

ಅಸ್ತಮ ಕಾಯಿಲೆಯಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅನಾರೋಗ್ಯದ ಆಧಾರದ ಮೇಲೆ ಜಾಮೀನು ಪಡೆಯಲು ಸಕ್ಕರೆ ಅಂಶ ಹೆಚ್ಚಿರುವ ಮಾವಿನ ಹಣ್ಣು, ಆಲೂ ಪುರಿ ಹಾಗೂ ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲದ ಅಧಿಕಾರಿಗಳು ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

- Advertisement -

ಕೇಜ್ರಿವಾಲ್‌ ಅವರ ವೈದ್ಯರ ಸಮಾಲೋಚನೆಯ ನೆರವಿನ ಅರ್ಜಿಯ ವಿಚಾರಣೆಗಾಗಿ ಆಗಮಿಸಿದ್ದ ಇ.ಡಿ ವಕೀಲರು ಕೋರ್ಟ್‌ಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅರವಿಂದ್ ಕೇಜ್ರಿವಾಲ್ ಅವರು ಯಾವ ಆಹಾರ ಸೇವಿಸುತ್ತಿದ್ದಾರೆ ಎಂದು ವರದಿ ನೀಡುವಂತೆ ತಿಹಾರ್ ಜೈಲಿನ ಅಧಿಕಾರಿಗಳಿಗೆ ಕೋರ್ಟ್ ಮಾಹಿತಿ ಕೇಳಿದೆ.

ಎರಡನೇ ಹಂತದ ಅಸ್ತಮ ರೋಗಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಯಾವ ಔಷಧಿಗಳನ್ನು ಸೇವಿಸುತ್ತಿದ್ದಾರೆ ಎನ್ನುವ ಮಾಹಿತಿ ಒದಗಿಸುವಂತೆ ಕೇಜ್ರಿವಾಲ್ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್‌ಗೆ ಮಾಹಿತಿ ನೀಡಿದ ಇ.ಡಿ ಅಧಿಕಾರಿಗಳು, ಕೇಜ್ರಿವಾಲ್ ಅವರಿಗೆ ಮನೆಯಿಂದ ತಯಾರಿಸಲಾಗಿರುವ ಆಹಾರವನ್ನು ನೀಡಲಾಗುತ್ತಿದ್ದು, ಜಾಮೀನು ಪಡೆಯುವುದಕ್ಕಾಗಿ ಹೆಚ್ಚು ಸಕ್ಕರೆ ಪದಾರ್ಥವಿರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ದಾಖಲೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

“ಕೇಜ್ರಿವಾಲ್ ಅವರು ಬೇಕಂತಲೇ ಸಕ್ಕರೆ ಹೆಚ್ಚಿರುವ ಬಾಳೆಹಣ್ಣು, ಸಿಹಿತಿಂಡಿ, ಪೂರಿ, ಆಲೂ ಸಬ್ಜಿ ಮುಂತಾದ ಪದಾರ್ಥಗಳನ್ನು ಸೇವಿಸುತ್ತಿದ್ದಾರೆ. ಅಸ್ತಮ 2ನೇ ಹಂತದ ರೋಗಿಯಾಗಿರುವ ಅವರು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಈ ರೀತಿಯ ಪದಾರ್ಥಗಳನ್ನು ಸೇವಿಸುತ್ತಿದ್ದಾರೆ” ಎಂದು ಇ.ಡಿ ಪರ ಹಾಜರಾಗಿದ್ದ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದರು.

“ಇದು ಆನಾರೋಗ್ಯಕ್ಕೆ ಕಾರಣವಾಗಿ ನ್ಯಾಯಾಲಯದಿಂದ ವೈದ್ಯಕೀಯ ಆಧಾರದ ಮೇಲೆ ಚಿಕಿತ್ಸೆ ಪಡೆಯುವ ಮಾರ್ಗವಾಗಿದೆ” ಎಂದು ವಕೀಲರು ನ್ಯಾಯಾಲಯಕ್ಕೆ ವಿವರಿಸಿದರು.

ಏಪ್ರಿಲ್‌ 1 ರಂದು 139 ಎಂಜಿ ಯಷ್ಟಿದ್ದ ಕೇಜ್ರಿವಾಲ್ ಅವರ ಸಕ್ಕರೆ ಪ್ರಮಾಣ ಏಪ್ರಿಲ್ 14ರ ವೇಳೆಗೆ 276 ಎಂಜಿ ರಷ್ಟು ದಾಖಲಾಗಿದೆ ಎಂದು ಇ.ಡಿ ನ್ಯಾಯಾಲಯಕ್ಕೆ ದಾಖಲೆ ನೀಡಿತು.

ಇ.ಡಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಕೇಜ್ರಿವಾಲ್ ವಕೀಲರು” ಸಕ್ಕರೆ ಕಾಯಿಲೆಯಿರುವ ಯಾರಾದರೂ ಈ ರೀತಿ ಮಾಡುತ್ತಾರೆಯೆ? ಎಂದರು.

ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...