ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

Date:

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ ‘ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ’ (ITAT) ಹೊರಡಿಸಿದ್ದ 7 ಆದೇಶಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಯಾವುದೇ ವಿವೇಚನೆ ಇಲ್ಲದೆ, ಕಣ್ಣುಮುಚ್ಚಿಕೊಂಡು ಈ ಆದೇಶಗಳನ್ನು ಹೊರಡಿಸಲಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯವು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಹೊಸ ಪೀಠಕ್ಕೆ ಸೂಚಿಸಿದೆ.

- Advertisement -

​’ಪ್ರಧಾನ ಆದಾಯ ತೆರಿಗೆ ಆಯುಕ್ತರು (ಕೇಂದ್ರ-1, ದೆಹಲಿ) ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್’ ನಡುವಿನ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ರಜನೀಶ್ ಕುಮಾರ್ ಗುಪ್ತಾ ಅವರಿದ್ದ ವಿಭಾಗೀಯ ಪೀಠವು ನಡೆಸಿತು. 2013-14 ರಿಂದ 2015-16 ಹಾಗೂ 2017-18ನೇ ಸಾಲಿನ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದ ಮೇಲ್ಮನವಿಗಳು ಇದಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

​ಆದೇಶಗಳನ್ನು ಪರಿಶೀಲಿಸಿದ ನ್ಯಾಯಪೀಠವು, ಐಟಿಎಟಿ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. “ಪ್ರಕರಣಗಳನ್ನು ಬೇಗ ವಿಲೇವಾರಿ ಮಾಡಬೇಕೆಂಬ ಅತಿ-ಆತುರದಲ್ಲಿ ಐಟಿಎಟಿ ಆದೇಶಗಳನ್ನು ಹೊರಡಿಸಿದಂತಿದೆ. ಅರ್ಜಿದಾರರ ಯಾವುದೇ ವಾದಗಳನ್ನೂ ಪರಿಗಣಿಸಿಲ್ಲ ಹಾಗೂ ಪ್ರಕರಣದ ಒಳಗಿನ ವಿಚಾರಗಳನ್ನು ಚರ್ಚಿಸಿಲ್ಲ. ಕನಿಷ್ಠ 7 ಪ್ಯಾರಾಗಳೂ ಇಲ್ಲದ ಆದೇಶವೊಂದರಲ್ಲಿ ಬರೋಬ್ಬರಿ 7 ಮೇಲ್ಮನವಿಗಳನ್ನು ವಿಲೇವಾರಿ ಮಾಡಲಾಗಿದೆ. ಆದೇಶದ ಗಾತ್ರದ ಬಗ್ಗೆ ನಮಗೆ ಚಿಂತೆಯಿಲ್ಲ, ಆದರೆ ನ್ಯಾಯಾಧೀಕರಣದ ಸದಸ್ಯರು ತೋರಿರುವ ಆತುರ ಹಾಗೂ ವಿವೇಚನೆಯಿಲ್ಲದ ನಡೆ ನಮಗೆ ಆಘಾತ ತಂದಿದೆ,” ಎಂದು ಹೈಕೋರ್ಟ್ ಕಟುವಾಗಿ ನುಡಿಯಿತು.

​ಇದೇ ವೇಳೆ, ವಿಚಾರಣೆ ಮತ್ತು ತೀರ್ಪು ಪ್ರಕಟಿಸಿದ ದಿನಾಂಕಗಳಲ್ಲೂ ಇರುವ ವಿರೋಧಾಭಾಸಗಳನ್ನು ನ್ಯಾಯಾಲಯ ಬೊಟ್ಟು ಮಾಡಿತು. “4 ಮೇಲ್ಮನವಿಗಳ ವಿಚಾರಣೆ ನಡೆಸಿ 2025ರ ಆಗಸ್ಟ್ 6ರಂದು ಆದೇಶ ಹೊರಡಿಸಲಾಗಿದೆ. ಉಳಿದ 3 ಮೇಲ್ಮನವಿಗಳ ವಿಚಾರಣೆ ನಡೆಸಿ ಆ.13ರಂದು ಆದೇಶ ಪ್ರಕಟಿಸಲಾಗಿದೆ. ಆದರೆ, ಇವೆಲ್ಲಕ್ಕೂ ಸೇರಿ ಒಂದೇ ಸಾಮಾನ್ಯ ಆದೇಶವನ್ನು ಹೇಗೆ ನೀಡಲಾಯಿತು ಎಂಬುದೇ ನಮಗೆ ಅರ್ಥವಾಗುತ್ತಿಲ್ಲ. ಇದರಲ್ಲಿ ಯಾವುದೇ ತರ್ಕ ಅಥವಾ ಕಾರಣಗಳಿಲ್ಲ,” ಎಂದು ನ್ಯಾಯಪೀಠ ಅಚ್ಚರಿ ವ್ಯಕ್ತಪಡಿಸಿತು.

​ಈ ಎಲ್ಲ ಕಾರ್ಯವಿಧಾನದ ಲೋಪಗಳ ಹಿನ್ನೆಲೆಯಲ್ಲಿ ಐಟಿಎಟಿಯ 7 ಆದೇಶಗಳನ್ನು ರದ್ದುಗೊಳಿಸಿದ ದೆಹಲಿ ಹೈಕೋರ್ಟ್, ಬೇರೊಂದು ಪೀಠದ ಮೂಲಕ ಪ್ರಕರಣದ ಮರು ವಿಚಾರಣೆಯನ್ನು ಖಚಿತಪಡಿಸುವಂತೆ ಐಟಿಎಟಿ ಅಧ್ಯಕ್ಷರಿಗೆ ನಿರ್ದೇಶನ ನೀಡಿದೆ. ಅಲ್ಲದೆ, ನ್ಯಾಯಾಧೀಕರಣದ ಈ ನಡೆಯ ಬಗ್ಗೆ ಮಾಹಿತಿ ನೀಡಲು ತನ್ನ ಆದೇಶದ ಪ್ರತಿಯನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾರ್ಯದರ್ಶಿಗೂ ರವಾನಿಸಿದೆ.

​ಆದಾಯ ತೆರಿಗೆ ಇಲಾಖೆ ಪರವಾಗಿ ಹಿರಿಯ ವಕೀಲ ಪುನೀತ್ ರಾಯ್, ಅಶ್ವಿನಿ ಕುಮಾರ್, ರಿಷಭ್ ನಂಗಿಯಾ, ನಿಖಿಲ್ ಜೈನ್ ಮತ್ತು ನ್ಯಾನ್ಸಿ ಜೈನ್ ವಾದ ಮಂಡಿಸಿದರು. ಪತಂಜಲಿ ಪರವಾಗಿ ವಕೀಲರಾದ ವೈಭವ್ ಕುಲಕರ್ಣಿ ಮತ್ತು ಸಂದೀಪ್ ನಗರ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...