ಶೈಕ್ಷಣಿಕ ವರ್ಷದ ಮಧ್ಯ ತ್ರಿಭಾಷಾ ನೀತಿ ಜಾರಿಗೆ ತಡೆ ನೀಡಿ: ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಪತ್ರ

Date:

ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಸಿಬಿಎಸ್‌ಇ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸಲು ಉದ್ದೇಶಿಸಿರುವ ತ್ರಿಭಾಷಾ ನೀತಿಯ ಜಾರಿಗೆ ತಕ್ಷಣವೇ ತಡೆ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಪತ್ರ ಬರೆದಿದ್ದಾರೆ.

- Advertisement -

ಶಿಕ್ಷಣ, ಮಹಿಳೆ, ಮಕ್ಕಳ ಕಲ್ಯಾಣ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆಗಿರುವ ದಿಗ್ವಿಜಯ್ ಸಿಂಗ್ ಅವರು, ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಈ ನೀತಿಯನ್ನು ಜಾರಿಗೊಳಿಸುವುದರಿಂದ ದೇಶಾದ್ಯಂತ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗಳಿಗೆ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಇದನ್ನು ಓದಿದ್ದೀರಾ? BREAKING NEWS | ತ್ರಿಭಾಷಾ ನೀತಿ ಕುರಿತ ನಿರ್ಣಯ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಪ್ರಸ್ತುತ ಶೈಕ್ಷಣಿಕ ವರ್ಷದ ಮಧ್ಯಾವಧಿಯಲ್ಲಿಯೇ ಈ ನೀತಿಯನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿರುವುದು ದೇಶಾದ್ಯಂತ ಗೊಂದಲ ಮತ್ತು ಗಂಭೀರ ಅಡಚಣೆಯನ್ನು ಉಂಟುಮಾಡುತ್ತದೆ. ಅಷ್ಟು ಮಾತ್ರವಲ್ಲದೆ ಶಾಲೆಗಳಲ್ಲಿ ಅಗತ್ಯವಿರುವಷ್ಟು ಭಾಷಾ ಶಿಕ್ಷಕರು, ಪಠ್ಯಪುಸ್ತಕಗಳು ಹಾಗೂ ಪೂರ್ವ ಸಿದ್ಧತೆಗಾಗಿ ಸೂಕ್ತ ಸಮಯದ ಕೊರತೆಯೂ ಇದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹೇಳಿದ್ದಾರೆ. ಹಾಗೆಯೇ ಸಿಬಿಎಸ್‌ಇಯ ಆನ್-ಸ್ಕ್ರೀನ್ ಮಾರ್ಕಿಂಗ್ (OSM) ವ್ಯವಸ್ಥೆಯ ಆತುರದ ಅನುಷ್ಠಾನದ ಸಮಯದಲ್ಲಿ ಕಂಡುಬಂದ ಅವ್ಯವಸ್ಥೆಯ ಪ್ರಸ್ತಾಪವನ್ನೂ ಮಾಡಿದ್ದಾರೆ.

ಇನ್ನು ಸಿಬಿಎಸ್‌ಇ 9ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಗುಂಪೊಂದು ಈ ನೀತಿಯನ್ನು ವಿರೋಧಿಸಿ ಸಲ್ಲಿಸಿದ ಮನವಿಯನ್ನು ಆಧರಿಸಿ ದಿಗ್ವಿಜಯ್ ಸಿಂಗ್ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. “ಪೋಷಕರು ಕಳವಳ ನಿಜವಾದದು. ಈ ಕೂಡಲೇ ನಿಮ್ಮ ಗಮನಕ್ಕೆ ತರುವುದು ಅಗತ್ಯ ಎಂದೆನಿಸಿತು. ಸಾಕಷ್ಟು ಶಿಕ್ಷಕರು, ಪಠ್ಯಪುಸ್ತಕಗಳು ಅಥವಾ ಪಠ್ಯದ ಬದಲಾವಣೆಗೆ ಸಮಯವಿಲ್ಲದೆ ಈ ನೀತಿಯನ್ನು ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಜಾರಿಗೊಳಿಸಿವುದು ಗಂಭೀರ ಸಮಸ್ಯೆ ಉಂಟು ಮಾಡುತ್ತದೆ” ಎಂದೂ ಉಲ್ಲೇಖಿಸಿದ್ದಾರೆ.

ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ

ಇನ್ನು ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಿಕೆ ಮಾಡುವುದನ್ನು ಈಗಾಗಲೇ ಕರ್ನಾಟಕ ಸೇರಿದಂತೆ ಹಲವು ದಕ್ಷಿಣ ಭಾರತದ ರಾಜ್ಯಗಳು ವಿರೋಧಿಸಿವೆ. ಮಾತೃಭಾಷೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ಹಿಂದಿಯೇತರ ರಾಜ್ಯಗಳ ಮೇಲೆ ಯಾವುದೇ ನಿರ್ದಿಷ್ಟ ಭಾಷೆಯನ್ನು ಬಲವಂತವಾಗಿ ಹೇರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತದೆ ಎಂದು ವಿವಿಧ ರಾಜ್ಯಗಳು ಹೇಳಿವೆ. ಇನ್ನು ಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿಯ (NEP) ನೆಪದಲ್ಲಿ ಹಿಂದಿಯನ್ನು ಪರೋಕ್ಷವಾಗಿ ಅಥವಾ ಪ್ರತ್ಯಕ್ಷವಾಗಿ ಹೇರುತ್ತಿರುವುದರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ಇದನ್ನು ಓದಿದ್ದೀರಾ? ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ: ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಸಮಸ್ಯೆಯ ಪ್ರಸ್ತಾಪ

ಇನ್ನು ಕೆಲವು ದಿನಗಳ ಹಿಂದೆ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪ್ರಧಾನಿ ಮೋದಿಗೆ ಸಿಂಗ್ ಪತ್ರ ಬರೆದಿದ್ದರು. ಕಳೆದ ಎಂಟು ವರ್ಷಗಳಲ್ಲಿ ಎನ್‌ಟಿಎ ನಡೆಸಿದ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಅಕ್ರಮಗಳ ಪ್ರಕರಣಗಳು, ಪ್ರತಿ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮವನ್ನು ದಾಖಲಿಸುವ ಶ್ವೇತಪತ್ರವನ್ನು ಹೊರಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು.

ಮೇ 3ರಂದು ಎನ್‌ಟಿಎ ನಡೆಸಿದ ನೀಟ್ (ಯುಜಿ) ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 12ರಂದು ರದ್ದುಗೊಳಿಸಲಾಗಿದೆ. ಈ ಸಂಬಂಧ ಪ್ರಸ್ತುತ ಸಿಬಿಐ ತನಿಖೆ ನಡೆಯುತ್ತಿದೆ. ಸದ್ಯ ಜೂನ್ 21ರಂದು ಮರು ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕ್ರಮ; ಸರ್ಕಾರದ ಧೋರಣೆ ವಿರುದ್ಧ 20 ದೇಶಗಳಲ್ಲಿ ಪ್ರತಿಭಟನೆ

ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ...

ದೆಹಲಿ ಏರ್‌ಪೋರ್ಟ್‌ನಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ 3 ಗಂಟೆ ವಶಕ್ಕೆ, 50 ಸಾವಿರ ರೂ.ದಂಡ!

ಪ್ಯಾರಿಸ್‌ನಿಂದ ಹಿಂದಿರುಗುತ್ತಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭಾನುವಾರ ದೆಹಲಿ...

SBI ಮೇಲೆ ಸೈಬರ್ ದಾಳಿ: ಸಾವಿರಾರು ಗ್ರಾಹಕರ ಸೂಕ್ಷ್ಮ ವಿವರ ಡಾರ್ಕ್ ವೆಬ್‌ನಲ್ಲಿ ಬಹಿರಂಗ!

ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮೇಲೆ ಸೈಬರ್ ದಾಳಿ ನಡೆದಿದ್ದು, ಸುಮಾರು...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...