ದಿಹುಲೀ ದಲಿತ ಹತ್ಯಾಕಾಂಡ: 24 ದಲಿತರನ್ನು ಕೊಂದಿದ್ದ ಮೂವರಿಗೆ ಮರಣದಂಡನೆ

Date:

Advertisements

1981ರಲ್ಲಿ, ಉತ್ತರ ಪ್ರದೇಶದ ಫಿರೋಜಾಬಾದ್‌ನ ದಿಹುಲೀ ಗ್ರಾಮದಲ್ಲಿ 24 ಮಂದಿ ದಲಿತರನ್ನು ಗುಂಡಿಟ್ಟು ಕೊಂದು ಹತ್ಯಾಕಾಂಡ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಮೂವರಿಗೂ ಮರಣದಂಡನೆ ಶಿಕ್ಷೆ ವಿಧಿಸಿದೆ.

ನರಮೇಧ ನಡೆದು 44 ವರ್ಷಗಳ ಬಳಿಕ ಪ್ರಕರಣದಲ್ಲಿ ನ್ಯಾಯ ದೊರೆತಿದೆ. ದಲಿತರನ್ನು ಹತ್ಯೆಗೈದಿದ್ದ 17 ಮಂದಿ ಆರೋಪಿಗಳಲ್ಲಿ ಈಗಾಗಲೇ 13 ಮಂದಿ ಮೃತಪಟ್ಟಿದ್ದಾರೆ. ಓರ್ವ ನಾಪತ್ತೆಯಾಗಿದ್ದಾನೆ. ಪ್ರಕರಣದಲ್ಲಿ ಉಳಿದಿದ್ದ ಮೂವರು ಆರೋಪಿಗಳಿಗೆ ಈಗ ಶಿಕ್ಷೆ ವಿಧಿಸಿ ಉತ್ತರ ಪ್ರದೇಶದ ಮೈನ್‌ಪುರಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ವರದಿ ಪ್ರಕಾರ, 1981ರ ನವೆಂಬರ್ 18ರಂದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 24 ಮಂದಿಯನ್ನು ಗುಂಡಿಟ್ಟು ಕೊಲ್ಲಲಾಗಿತ್ತು. ಅಂದು ರಾತ್ರಿ, ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ದಿಹುಲೀ ಗ್ರಾಮದ ದಲಿತ ಕಾಲೋನಿಗೆ ನುಗ್ಗಿ ಗುಂಡಿನ ದಾಳಿ ನಡೆಸಿತ್ತು. ಮೂರು ಗಂಟೆಗಳ ಕಾಲ ನಡೆದ ನಿರಂತರ ದಾಳಿಯಲ್ಲಿ, 23 ಜನರು ಸ್ಥಳದಲ್ಲೇ ಸಾವನ್ನಪ್ಪಿದರು. ಮತ್ತೋರ್ವ ವ್ಯಕ್ತಿ ಫಿರೋಜಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆದರು.

Advertisements

ಹತ್ಯಾಕಾಂಡ ನಡೆದ ಮರುದಿನ, (ನವೆಂಬರ್ 19) ಗ್ರಾಮದ ನಿವಾಸಿ ಲಯಕ್ ಸಿಂಗ್ ಎಂಬವರು ಜಸ್ರಾನಾ ಪೊಲೀಸರಿಗೆ ದೂರು ನೀಡಿದ್ದರು. ರಾಧೇಶ್ಯಾಮ್ ಅಲಿಯಾಸ್ ರಾಧೆ, ಸಂತೋಷ್ ಚೌಹಾಣ್ ಅಲಿಯಾಸ್ ಸಂತೋಷ, ರಾಮಸೇವಕ್, ರವೀಂದ್ರ ಸಿಂಗ್, ರಾಂಪಾಲ್ ಸಿಂಗ್ ಸೇರಿದಂತೆ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಜಿಲ್ಲಾ ನ್ಯಾಯಾಲಯದಲ್ಲಿ ಆರಂಭಿಕ ವಿಚಾರಣೆ ನಡೆದು ಬಳಿಕ, ಪ್ರಕರಣವನ್ನು ಪ್ರಯಾಗ್‌ರಾಜ್‌ಗೆ ವರ್ಗಾಯಿಸಲಾಯಿತು. ಮತ್ತೆ ಅಲ್ಲಿಂದ, ಪ್ರಕರಣವನ್ನು ಮೈನ್‌ಪುರಿ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ಈ ವರದಿ ಓದಿದ್ದೀರಾ?: ದಿಹುಲೀ ದಲಿತ ಹತ್ಯಾಕಾಂಡ; 44 ವರ್ಷ ನಡೆದ ಕೇಸಿನ ಬೆವರು-ನೆತ್ತರು-ಕಂಬನಿಯ ಕತೆಯೇನು?

ಈ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಿರಂತರ 15 ವರ್ಷಗಳ ಕಾಲ ನಡೆದಿದೆ. ಸುದೀರ್ಘ ವಿಚಾರಣೆಯ ಬಳಿಕ, ಮಾರ್ಚ್‌ 11ರಂದು ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಸಿಂಗ್ ಅವರು ಮೂವರು ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದ್ದರು. ಮಂಗಳವಾರ (ಮಾರ್ಚ್‌ 18) ಶಿಕ್ಷೆಯ ಪ್ರಮಾಣವನ್ನು ಘೋಷಿಸಿದ್ದು, ಕಪ್ತಾನ್ ಸಿಂಗ್, ರಾಮಸೇವಕ್ ಹಾಗೂ ರಾಮ್ ಪಾಲ್‌ಗೆ ಮರಣದಂಡನೆ ವಿಧಿಸಿದೆ. ಇನ್ನು, ಜ್ಞಾನಚಂದ್ರ ಎಂಬ 4ನೇ ಆರೋಪಿ ಪರಾರಿಯಾಗಿದ್ದಾನೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X