ಸ್ವತಂತ್ರ ಮಾಧ್ಯಮ, ನಾಗರಿಕ ಸಂಘಟನೆಗಳು, ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮೋದಿಯೊಂದಿಗೆ ಪ್ರಸ್ತಾಪ: ಜೋ ಬೈಡನ್

Date:

ಒಂದು ಸಮೃದ್ಧ ಮತ್ತು ಬಲಿಷ್ಠ ದೇಶವನ್ನು ಕಟ್ಟಬೇಕಾದರೆ ಮಾನವ ಹಕ್ಕುಗಳನ್ನು ಗೌರವಿಸುವುದು, ಸ್ವತಂತ್ರ ಮಾಧ್ಯಮ ಮತ್ತು ನಾಗರಿಕ ಸಂಘಟನೆಗಳ ಪಾತ್ರ ಮಹತ್ತರವಾದುದು ಎಂದು ತಾನು ಭಾರತದ ಪ್ರಧಾನ ಮಂತ್ರಿ ಮೋದಿಯವರೊಂದಿಗೆ ಪ್ರಸ್ತಾಪಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ತಿಳಿಸಿದ್ದಾರೆ.  

ಜಿ-20 ಸಮಾವೇಶದಲ್ಲಿ ಭಾಗವಹಿಸಿದ ನಂತರ ದೆಹಲಿಯಿಂದ ವಿಯೆಟ್ನಾಂಗೆ ಹಾರಿದ ಅಮೆರಿಕದ ಅಧ್ಯಕ್ಷ ಬೈಡನ್, ತಾವು ನರೇಂದ್ರ ಮೋದಿ ಅವರೊಂದಿಗೆ ಭಾರತ-ಅಮೆರಿಕ ಬಾಂಧವ್ಯವನ್ನು ಬಲಗೊಳಿಸುವ ಬಗ್ಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದರು. ಜಿ-20 ಶೃಂಗಸಭೆಯ ಆತಿಥ್ಯ ಮತ್ತು ಭಾರತದ ನಾಯಕತ್ವಕ್ಕಾಗಿ ಅವರು ಮೋದಿಯವರಿಗೆ ಧನ್ಯವಾದ ಸಲ್ಲಿಸಿದರು.

ಅಮೆರಿಕದ ಅಧ್ಯಕ್ಷರಾದ ನಂತರ ಜೋ ಬೈಡನ್ ಅವರ ಮೊದಲ ಭಾರತ ಭೇಟಿ ಇದಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದ್ವಿಪಕ್ಷೀಯ ರಕ್ಷಣಾ ಸಹಭಾಗಿತ್ವವನ್ನು ಇನ್ನಷ್ಟು ಆಳ ಮತ್ತು ವಿಸ್ತೃತಗೊಳಿಸುವ ನಿಟ್ಟಿನಲ್ಲಿ 31 ಡ್ರೋನ್‌ಗಳನ್ನು ತರಿಸಿಕೊಳ್ಳಲು ಮತ್ತು ಜೆಟ್ ಇಂಜಿನ್‌ಗಳ ಜಂಟಿ ಅಭಿವೃದ್ಧಿಗೆ ಭಾರತ ಮುಂದಾಗಿರುವುದನ್ನು ಅವರು ಸ್ವಾಗತಿಸಿದರು.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಮಾತುಕತೆಯ ನಂತರ ಪ್ರಶ್ನೆಗಳನ್ನು ಕೇಳಲು ಅವಕಾಶ ನೀಡುವಂತೆ ವೈಟ್ ಹೌಸ್ ಮೂಲಕ ಅಮೆರಿಕದ ಪತ್ರಕರ್ತರು ಹಲವು ಬಾರಿ ಮನವಿ ಮಾಡಿದ್ದರು. ಆದರೆ, ರಕ್ಷಣೆಯ ಕಾರಣದಿಂದ ಪತ್ರಕರ್ತರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರು ತಿಳಿಸಿದ್ದಾಗಿ ಸಿಎನ್‌ಎನ್‌ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಕೇಂದ್ರಾಡಳಿತ ಪ್ರದೇಶ ಘೋಷಿಸದಿದ್ದರೆ ಹಿಂದೂಗಳು ಕಣ್ಮರೆ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು...

ಭಾರತದ ಕೆಲ ಪ್ರದೇಶಗಳಿಗೆ ತೆರಳಬೇಡಿ ಎಂದ ಅಮೆರಿಕ; ಮೋದಿ ನೇತೃತ್ವದ ಭಾರತಕ್ಕೆ ಇದೆಂಥಾ ಅಪಮಾನ?

ಇತ್ತೀಚಿನ ದಿನಗಳಲ್ಲಿ ಜಗತ್ತು ನಾನಾ ರೀತಿಯ ಘಟನೆಗಳು, ಬೆಳವಣಿಗೆಗಳು ಮತ್ತು ವಿದ್ಯಮಾನಗಳಿಗೆ...

ಇ ತ್ಯಾಜ್ಯ ಟೆಂಡರ್ ಅಕ್ರಮ: ಶಿಕ್ಷಣ ಇಲಾಖೆ ನಿರ್ದೇಶಕಿ ಸುಮಂಗಲಾ ಅಮಾನತು

ಬಹುಕೋಟಿ ಇ ತ್ಯಾಜ್ಯ ಟೆಂಡರ್ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ...