ಹಿಂಸೆ, ಅಹಂಕಾರ ಪ್ರದರ್ಶನ ಇತ್ತೀಚೆಗೆ ಫ್ಯಾಷನ್ ಆಗಿದೆ: ಮಣಿಪುರ ಸಂಗೀತಗಾರನ ಕೊಲೆ ಖಂಡಿಸಿ ರಾಹುಲ್ ಗಾಂಧಿ ಆಕ್ರೋಶ

Date:

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಶಕ್ತಿ ಹಾಗೂ ಅಧಿಕಾರ ಇರುವವರು ಹಿಂಸೆ ಮತ್ತು ಅಹಂಕಾರ ಪ್ರದರ್ಶಿಸುವುದು ಒಂದು ‘ಫ್ಯಾಷನ್’ ಆಗಿ ಬದಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ದೆಹಲಿಯ ಕಿಲೋಕರಿ ಪ್ರದೇಶದಲ್ಲಿ ಇತ್ತೀಚೆಗೆ ಕ್ರೂರವಾಗಿ ಹತ್ಯೆಗೀಡಾದ ಮಣಿಪುರದ ಪ್ರಸಿದ್ಧ ಸಂಗೀತಗಾರ ಹಾಗೂ ಸಂಗೀತ ಶಿಕ್ಷಕ ಚೋಂಗ್ಥಮ್ ವಿಕ್ರಮ್ ಸಿಂಗ್ (54) ಅವರ ಸ್ಮರಣಾರ್ಥ ನವದೆಹಲಿಯ ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ರಾಹುಲ್ ಗಾಂಧಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಮೋದಿ ಮಣಿಪುರ ಭೇಟಿಗಿಂತ ವೋಟ್ ಚೋರಿ ಮುಖ್ಯ ಸಮಸ್ಯೆ: ರಾಹುಲ್ ಗಾಂಧಿ

ಸೆಪ್ಟೆಂಬರ್ 8ರಂದು ಮಧ್ಯರಾತ್ರಿ ಕಿಲೋಕರಿಯ ತಮ್ಮ ನಿವಾಸದ ಹೊರಗೆ ಗಲಾಟೆ ಮಾಡುತ್ತಿದ್ದ ಹಾಗೂ ಮದ್ಯಪಾನ ಮಾಡುತ್ತಿದ್ದ ಸ್ಥಳೀಯ ಡಾಬಾ ಸಿಬ್ಬಂದಿ ಮತ್ತು ಡೆಲಿವರಿ ಬಾಯ್‌ಗಳಿಗೆ ವಿಕ್ರಮ್ ಸಿಂಗ್ ಅವರು ಶಬ್ದ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಈ ವೇಳೆ ಉಂಟಾದ ತಕರಾರಿನಲ್ಲಿ ದುಷ್ಕರ್ಮಿಗಳ ಗುಂಪು ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದು, ಓರ್ವ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯನ್ನು ಖಂಡಿಸಿ ಮಾತನಾಡಿದ ರಾಹುಲ್ ಗಾಂಧಿ, “ನೀವು ಶಕ್ತಿಶಾಲಿಯಾಗಿದ್ದರೆ ಹಿಂಸಾಚಾರ ಮಾಡಬಹುದು, ಅಹಂಕಾರದಿಂದ ಇರಬಹುದು ಹಾಗೂ ನಿಮಗನ್ನಿಸಿದ್ದನ್ನು ಮಾಡಬಹುದು ಎನ್ನುವುದು ಇತ್ತೀಚೆಗೆ ಒಂದು ಫ್ಯಾಷನ್ ಆಗಿದೆ. ಈ ರೀತಿಯ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಹಿಂಸಾಚಾರಕ್ಕೆ ನಾವು ಹೆದರುವುದೂ ಇಲ್ಲ” ಎಂದು ಹೇಳಿದರು.

ಈ ಹತ್ಯೆಯು ಕೇವಲ ಒಬ್ಬ ವ್ಯಕ್ತಿಯ ಮೇಲಾದ ದಾಳಿಯಲ್ಲ, ಇದು ದ್ವೇಷ ಮತ್ತು ಅಹಂಕಾರದ ಸಂಕೇತವಾಗಿದೆ ಎಂದ ಅವರು, “ಹಿಂಸೆಗೆ ಹಿಂಸೆ ಅಥವಾ ದ್ವೇಷವೇ ಉತ್ತರವಾಗಬಾರದು. ನಾವು ಪ್ರೀತಿ, ಶಾಂತಿ ಮತ್ತು ಕಾನೂನಿನ ಹಾದಿಯಲ್ಲೇ ಹೋರಾಡಿ ಮೃತ ವಿಕ್ರಮ್ ಸಿಂಗ್ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲಿದ್ದೇವೆ” ಎಂದು ಭರವಸೆ ನೀಡಿದರು.

ಈ ಸಭೆಯಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಸೇರಿದಂತೆ ಈಶಾನ್ಯ ರಾಜ್ಯಗಳ ಹಲವು ನಾಯಕರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ, ಈಶಾನ್ಯ ಭಾಗದ ಜನರ ಮೇಲಾಗುತ್ತಿರುವ ಸರಣಿ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...