ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

Date:

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌, ಎನ್‌ಡಿಎ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಶುರು ಮಾಡಿದೆ. ಇದರ ನಡುವೆ ಬಂಡಾಯ, ಭಿನ್ನಮತವೂ ಕಾಡುತ್ತಿದೆ. ಆದರೆ ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ ಎಂದು ಸಿಪಿಐಎಂ ಹೇಳಿದೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂ ವಿ ಗೋವಿಂದನ್, “ಭಿನ್ನಮತೀಯರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಎಡರಂಗದ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಪಕ್ಷಾಂತರಿಗಳ ಸಂಖ್ಯೆ ಅತಿ ಕಡಿಮೆ. ಆಡಳಿತಾರೂಢ ಎಲ್‌ಡಿಎಫ್ ಮುಂಬರುವ ಚುನಾವಣೆಯಲ್ಲಿ 110 ಸ್ಥಾನಗಳನ್ನು ಗುರಿಯಾಗಿಸಿಕೊಂಡಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಸಿಪಿಐಎಂನಲ್ಲಿ ಬಿಕ್ಕಟ್ಟು; ಮಾಜಿ ಶಾಸಕ ಪಿಕೆ ಸಸಿ ಉಚ್ಚಾಟನೆ

ಜಿ ಸುಧಾಕರನ್ ಸೇರಿದಂತೆ ನಾಲ್ವರು ಹಿರಿಯ ನಾಯಕರು ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ. ಸ್ವತಂತ್ರರಾಗಿ ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಇದರಿಂದಾಗಿ ಎಲ್‌ಡಿಎಫ್ ತನ್ನ ಮತಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ಚರ್ಚೆಗಳು ನಡೆಯುತ್ತಿದೆ. ಆದರೆ ಸಿಪಿಐಎಂ ನಾಯಕರು ಇದನ್ನು ಅಲ್ಲಗಳೆದಿದ್ದಾರೆ.

“ನಮಗೆ ಕೇರಳದಲ್ಲಿ 5.5 ಲಕ್ಷ ಸದಸ್ಯರಿದ್ದಾರೆ. ಸುಮಾರು 2.5 ಲಕ್ಷ ಸಹಾನುಭೂತಿದಾರರು ಇದ್ದಾರೆ. ಇದರಲ್ಲಿ, ಐದು ಅಥವಾ ಆರು ಜನರು ತೊರೆದರೆ ಅವರು ಕಮ್ಯುನಿಸ್ಟ್ ಚಳುವಳಿಯನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಬಹುದೇ” ಎಂದು ಪ್ರಶ್ನಿಸಿದರು. ಹಾಗೆಯೇ ಕಾಂಗ್ರೆಸ್‌ನಂತೆ ಸಿಪಿಐ (ಎಂ) ಒಳಗೆ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ ಎಂದು ಸಮರ್ಥಿಸಿಕೊಂಡರು.

“ನಮ್ಮ ಪಕ್ಷದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೆಲವರು ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸಬಹುದು. ಅಂತಹ ವಿಷಯಗಳನ್ನು ಪಕ್ಷದೊಳಗೆ ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ

ಇನ್ನು ಪಾಲಕ್ಕಾಡ್‌ನಂತಹ ಕ್ಷೇತ್ರಗಳಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಸಿಪಿಐ(ಎಂ) ನಡುವೆ ರಾಜಿ ನಡೆದಿದೆ ಎಂಬ ಕಾಂಗ್ರೆಸ್ ನಾಯಕ ವಿ ಡಿ ಸತೀಸನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರೋಪವನ್ನು ಆಧಾರರಹಿತ” ಎಂದು ತಳ್ಳಿಹಾಕಿದರು. “ವಿರೋಧ ಪಕ್ಷದ ನಾಯಕರು ಪ್ರತಿದಿನ ಇಂತಹ ಆರೋಪಗಳನ್ನು ಮಾಡುತ್ತಾರೆ. ಅಂತಹ ಹೇಳಿಕೆಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ” ಎಂದು ಗೋವಿಂದನ್ ತಿಳಿಸಿದರು.

ಕೇರಳದ 140 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದ ಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಮೇ 4ರಂದು ಎಣಿಕೆ ನಡೆಯಲಿದೆ. ಒಂದು ದಶಕದ ಆಡಳಿತದ ನಂತರ ಎಡರಂಗವು ಸತತ ಮೂರನೇ ಅವಧಿಗೆ ಅಧಿಕಾರ ಪಡೆಯಲು ತಯಾರಿ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...