RSS ಕಚೇರಿಗೆ ಜಿಲ್ಲಾಧಿಕಾರಿ ಭೇಟಿ; ಡಿಸಿಯನ್ನು ‘ಬಿಜೆಪಿ ಕಾರ್ಯಕರ್ತ’ ಎಂದ ಕಾಂಗ್ರೆಸ್‌

Date:

ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿ ಇಂದೋರ್‌ನ ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಆರ್‌ಎಸ್‌ಎಸ್‌ನ ಸ್ಥಳೀಯ ಕಚೇರಿಗೆ ಭೇಟಿ ನೀಡಿರುವ ಸಂಗತಿಯು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಜಿಲ್ಲಾಧಿಕಾರಿ ಶಿವಂ ವರ್ಮಾ ಅವರನ್ನು ‘ಬಿಜೆಪಿಯ ಕಾರ್ಯಕರ್ತ’ನೆಂದು ಕಾಂಗ್ರೆಸ್‌ ಟೀಕಿಸಿದೆ.

- Advertisement -

ಇಂದೋರ್‌ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ 17 ಸಾವುಗಳು ಸಂಭವಿಸಿವೆ. ಹಲವಾರು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದುರಂತ ಘಟನೆಯಿಂದಾಗಿ ಇಡೀ ಇಂದೋರ್‌ ಆತಂಕದಲ್ಲಿದೆ. ಇದೇ ಸಮಯದಲ್ಲಿ, ಜಿಲ್ಲಾಧಿಕಾರಿ ಶಿವಂ ವರ್ಮಾ ಅವರು ಬುಧವಾರ ರಾತ್ರಿ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ್ದು, ಆರ್‌ಎಸ್‌ಎಸ್‌ ಸ್ಥಳೀಯ ಪ್ರಚಾರಕ ರಾಜ್‌ ಮೋಹನ್ ಸಿಂಗ್‌ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಭೇಟಿಯ ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸರ್ಕಾರಿ ಅಧಿಯೊಬ್ಬರು ಸಂಘದ ಕಚೇರಿಗೆ ಭೇಟಿ ನೀಡಿ, ಅದರ ಮುಖಂಡರೊಂದಿಗೆ ಚರ್ಚಿಸಿರುವುದು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಶಿವಂ ವರ್ಮಾ ಅವರು ಬಿಜೆಪಿ ಕಾರ್ಯಕರ್ತನಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಜಿತು ಪಟ್ವಾರಿ ಟೀಕಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ದೇವರಾಜ ಅರಸು-ಸಿದ್ದರಾಮಯ್ಯ | ಸಾಮಾಜಿಕ ನ್ಯಾಯದ ನಿಜ ಹರಿಕಾರ ಯಾರು?

“ಶಿವಂ ವರ್ಮಾ ಅವರನ್ನು ಭಾರ್ಗವ್ ವರ್ಮಾ ಆರ್‌ಎಸ್‌ಎಸ್ ಕಚೇರಿಗೆ ಕರೆದೊಯ್ದರು. ಸಂಘದ ಕಚೇರಿಗೆ ಭೇಟಿ ನೀಡಿರುವ ಶಿವಂ ವರ್ಮಾ ಅವರು ತಾವು ಆಡಳಿತ ಅಧಿಕಾರಿಯಲ್ಲ ಎಂಬುದನ್ನು ತೋರಿಸಿದ್ದಾರೆ. ಅವರು ಬಿಜೆಪಿ ಸದಸ್ಯನಂತೆ ಕೆಲಸ ಮಾಡುತ್ತಿದ್ದಾರೆ. ನೀವು ಕರ್ತವ್ಯದಲ್ಲಿರುವಾಗ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಹೋದರೆ, ಕಾಂಗ್ರೆಸ್ ಕಾರ್ಯಕರ್ತರು ನಿಮ್ಮ ಕಾರ್ಯಶೈಲಿಯನ್ನು ಸರಿಪಡಿಸುತ್ತಾರೆ, ”ಎಂದು ಪಟ್ವಾರಿ ಹೇಳಿದ್ದಾರೆ.

“ಜಿಲ್ಲಾಧಿಕಾರಿ ತಮ್ಮ ಕಚೇರಿಯಲ್ಲಿ ಕೆಲಸ ಮಾಡಬೇಕು, ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಬೇಕು ಹಾಗೂ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಷಯಗಳನ್ನು ಚರ್ಚಿಸಬೇಕು. ಇಂದೋರ್‌ನಲ್ಲಿ ಜನರು ಸಾಯುತ್ತಿದ್ದಾರೆ, ಎಲ್ಲೆಡೆ ಕಲುಷಿತ ನೀರು ತುಂಬಿದೆ. ಆದರೂ, ಜಿಲ್ಲಾಧಿಕಾರಿ ಕೆಲಸ ಮಾಡುತ್ತಿಲ್ಲ. ಅವರು ಬಿಜೆಪಿಗಾಗಿ ಆರ್‌ಎಸ್‌ಎಸ್ ಕಚೇರಿಗೆ ಹೋಗುತ್ತಿದ್ದಾರೆ” ಎಂದು ಪಟ್ವಾರಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...