ಮಹಿಳಾ ಮೀಸಲಾತಿ ತಕ್ಷಣ ಜಾರಿಗೊಳಿಸಲು ಖಾಸಗಿ ಮಸೂದೆಯನ್ನು ಮಂಡಿಸಿದ ಡಿಎಂಕೆ ಸಂಸದ

Date:

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯಸಭಾ ಸಂಸದ ವಿಲ್ಸನ್ ಅವರು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರುವಂತೆ ಕೋರಿ ಖಾಸಗಿ ಮಸೂದೆಯನ್ನು ಮಂಡಿಸಿದ್ದಾರೆ.

- Advertisement -

ಮಹಿಳಾ ಮೀಸಲಾತಿ ಪ್ರಕ್ರಿಯೆಯನ್ನು ಕ್ಷೇತ್ರ ಮರುವಿಂಗಡಣೆಗೆ ಜೋಡಿಸದೆಯೇ ಈ ಮಸೂದೆಯನ್ನು ಮಂಡಿಸಿದ್ದಾರೆ. ಹಾಗೆಯೇ ಕ್ಷೇತ್ರ ಮರುವಿಂಗಡಣೆಯನ್ನು 2051ರವರೆಗೆ ಅಂದರೆ 25 ವರ್ಷಗಳ ಅವಧಿಗೆ ಮುಂದೂಡುವಂತೆಯೂ ವಿಲ್ಸನ್ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಶ್ಚಿಮ ಪದವೀದರರ ಕ್ಷೇತ್ರ ಸಮರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್...

ಪಶ್ಚಿಮ ಪದವೀದರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀದರರ ಕ್ಷೇತ್ರವೀಗ ಬಿಜೆಪಿಯ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಇದನ್ನು ಓದಿದ್ದೀರಾ? ‘ಮಹಿಳೆಯರೆಂಬ’ ಭಾವನೆಗಳ ಮೇಲೆ ರಾಜಕೀಯ ಮಾಡುವುದನ್ನು ಬಿಜೆಪಿ ಮೊದಲು ನಿಲ್ಲಿಸಲಿ

ಸದ್ಯ ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. 2023ರಲ್ಲೇ ಮಸೂದೆಯನ್ನು ಸರ್ವಪಕ್ಷಗಳು ಅಂಗೀಕಾರಗೊಳಿಸಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿ, ಪರೋಕ್ಷವಾಗಿ ಕ್ಷೇತ್ರ ಮರುವಿಂಗಡಣೆಯನ್ನೂ ಜಾರಿಗೆ ತರಲು ಪ್ರಯತ್ನಿಸಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ವಿಫಲಗೊಂಡಿದೆ.

ಸದ್ಯ ವಿಪಕ್ಷಗಳು 2023ರ ಮಸೂದೆಯನ್ನೇ ಜಾರಿಗೊಳಿಸುವಂತೆ ಆಗ್ರಹಿಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಮಸೂದೆ ಜಾರಿಗೆ ವಿಪಕ್ಷಗಳು ಅಡ್ಡಿಪಡಿಸಿದೆ ಎಂದು ದೂರುತ್ತಿದ್ದಾರೆ. ಈ ನಡುವೆ ಮಹಿಳಾ ಮೀಸಲಾತಿ ತಕ್ಷಣ ಜಾರಿಗೊಳಿಸಲು ಖಾಸಗಿ ಮಸೂದೆಯನ್ನು ಡಿಎಂಕೆ ಸಂಸದರು ಮಂಡಿಸಿದ್ದಾರೆ.

“ಕ್ಷೇತ್ರ ಮರುವಿಂಗಡಣೆ ಅಥವಾ ಜನಗಣತಿಗೆ ಕಾಯದೆ, ಅಸ್ತಿತ್ವದಲ್ಲಿರುವ ಸ್ಥಾನಗಳ ಬಲದೊಳಗೆ ಜನರ ಸದನ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಜನಸಂಖ್ಯಾ ಸ್ಥಿರೀಕರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳಿಗೆ ಶಿಕ್ಷೆಯಾಗುವುದನ್ನು ತಪ್ಪಿಸಲು 2051ರವರೆ ಕ್ಷೇತ್ರ ಮರುವಿಂಗಡಣೆಯನ್ನು ನಿಲ್ಲಿಸಬೇಕು” ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಜನಸಂಖ್ಯೆಯ ಆಧಾರದ ಮೇಲೆ ಪ್ರಾತಿನಿಧ್ಯದ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಈ ಹಿಂದೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಲಾಗಿದೆ. ಆದರೆ ಕಾಲಾನಂತರದಲ್ಲಿ, ರಾಜ್ಯಗಳ ನಡುವೆ ಗಮನಾರ್ಹ ಜನಸಂಖ್ಯಾ ಅಸಮತೋಲನಗಳು ಕಂಡುಬಂದಿದೆ ಎಂಬುದನ್ನೂ ವಿಲ್ಸನ್ ಹೇಳಿದ್ದಾರೆ.

“ಸಂವಿಧಾನ (ನೂರ ಆರನೇ ತಿದ್ದುಪಡಿ) ಕಾಯ್ದೆ, 2023 ರ ಮೂಲಕ ಸಂಸತ್ತು ಈಗಾಗಲೇ ಜಾರಿಗೆ ತಂದಿರುವ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ನಿಜವಾಗಿಯೂ ಗಂಭೀರವಾಗಿದ್ದರೆ, ಅದನ್ನು ಕ್ಷೇತ್ರ ಮರುವಿಂಗಡಣೆ ಅಥವಾ ಜನಗಣತಿಯೊಂದಿಗೆ ಜೋಡಿಸುವ ಅಗತ್ಯವಿಲ್ಲ. ಸದನದ ಅವಧಿ ಮುಗಿದ ನಂತರ, ಸದನದ ಪ್ರಸ್ತುತ ಬಲದಲ್ಲಿ ಇದನ್ನು ತಕ್ಷಣವೇ ಕಾರ್ಯಗತಗೊಳಿಸಬಹುದು” ಎಂದೂ ಡಿಎಂಕೆ ಸಂಸದ ವಿಲ್ಸನ್ ಮಂಡಿಸಿದ ಖಾಸಗಿ ಮಸೂದೆ ಹೇಳುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ 5 ವರ್ಷದ ಶ್ರಮ ಕಳವು’: ಬ್ಲಾಕ್‌ಮೇಲ್‌ಗೆ ಬೇಸತ್ತು ಯೂಟ್ಯೂಬರ್ ಹರೀಶ್ ಆತ್ಮಹತ್ಯೆ

ಸೋಷಿಯಲ್ ಮೀಡಿಯಾದಲ್ಲಿ 'ಫೈನಾನ್ಸ್ ವಿತ್ ಹರೀಶ್' ಹೆಸರಿನಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಡಿಯೋಗಳನ್ನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...