‘ನನ್ನ ಪ್ರಾಮಾಣಿಕತೆಯನ್ನು ಸಾಬೀತುಪಡಿಸಲು ಇನ್ನೇನು ಮಾಡಬೇಕು?’: ಸರ್ಕಾರದೊಂದಿಗೆ ‘ಡೀಲ್’ ಆರೋಪ ತಳ್ಳಿಹಾಕಿದ ವಾಂಗ್‌ಚುಕ್

Date:

ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕಳೆದ 26 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಸರ್ಕಾರದೊಂದಿಗೆ ‘ಡೀಲ್’ (ಒಪ್ಪಂದ) ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳನ್ನು ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರು ಬಲವಾಗಿ ತಳ್ಳಿಹಾಕಿದ್ದಾರೆ. ಸತತ 26 ದಿನಗಳ ಕಾಲ ಉಪವಾಸವಿದ್ದರೂ ನನ್ನ ಪ್ರಾಮಾಣಿಕತೆಯನ್ನು ಸಾಬೀತುಪಡಿಸಲು ಇನ್ನೇನು ಮಾಡಬೇಕು ಎಂದು ಅವರು ಟೀಕಾಕಾರರನ್ನು ಪ್ರಶ್ನಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ವಿಡಿಯೊ ಸಂದೇಶವೊಂದನ್ನು ಹಂಚಿಕೊಂಡಿರುವ ಅವರು, ಸರ್ಕಾರದೊಂದಿಗೆ ರಾಜಿ ಮಾಡಿಕೊಳ್ಳಲಾಗಿದೆ ಎಂಬ ವದಂತಿಗಳ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “26 ದಿನಗಳ ಸುದೀರ್ಘ ಉಪವಾಸದ ನಂತರವೂ ನಾನು ನನ್ನ ಪ್ರಾಮಾಣಿಕತೆಯನ್ನು ಸಾಬೀತುಪಡಿಸುವ ಅಗತ್ಯವಿದೆಯೇ?” ಎಂದು ಅಸಮಾಧಾನ ಹೊರಹಾಕಿರುವ ಅವರು, ಉಪವಾಸ ಕೈಬಿಡುವ ತಮ್ಮ ನಿರ್ಧಾರವನ್ನು ಕೇವಲ ರಾಜಕೀಯ ಊಹಾಪೋಹಗಳ ದೃಷ್ಟಿಕೋನದಿಂದ ನೋಡಬಾರದು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಯಾವುದೇ ನಿರ್ಣಯಕ್ಕೆ ಬರುವ ಮುನ್ನ ಯೂಟ್ಯೂಬ್‌ನಲ್ಲಿ ಲಭ್ಯವಿರುವ 22 ನಿಮಿಷಗಳ ಸಂಪೂರ್ಣ ವಿಡಿಯೊವನ್ನು ವೀಕ್ಷಿಸಿ ಮತ್ತು ಈ ಸಂದೇಶವನ್ನು ಎಲ್ಲರಿಗೂ ತಲುಪಿಸಲು ನೆರವಾಗಿ ಎಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದಕ್ಕೂ ಮುನ್ನ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೊ ಅವರು ಮಾತನಾಡಿ, “ಉಪವಾಸದ ಪರಿಣಾಮ ವಾಂಗ್‌ಚುಕ್ ಅವರು ಬರೋಬ್ಬರಿ 11 ಕೆ.ಜಿ. ತೂಕ ಕಳೆದುಕೊಂಡಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಯವಿಟ್ಟು ಯಾರೂ ಕೂಡ ಅವರನ್ನು ತಪ್ಪಾಗಿ ನಿರ್ಣಯಿಸಬಾರದು” ಎಂದು ಟೀಕಾಕಾರರಲ್ಲಿ ಮನವಿ ಮಾಡಿದ್ದರು. ಕೇಂದ್ರ ಸರ್ಕಾರದೊಂದಿಗಿನ ಸರಣಿ ಮಾತುಕತೆಗಳ ಬಳಿಕ ಶುಕ್ರವಾರ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ವಾಂಗ್‌ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...