‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

Date:

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ ನಕ್ಸಲ್’ಅಥವಾ ದೇಶವಿರೋಧಿಗಳೆಂದು ಕರೆದು ಅವರ ಧ್ವನಿಯನ್ನು ಅಡಗಿಸಲು ಯತ್ನಿಸಲಾಗುತ್ತದೆ. ಆದರೆ ಇಂತಹ ಟೀಕೆಗಳಿಗೆ ಕಿವಿಗೊಡದೆ, ತಮ್ಮ ಪರಿಸರ ಕಾಳಜಿಯ ಹೋರಾಟವನ್ನು ಪರಿಸರವಾದಿಗಳು ಧೈರ್ಯವಾಗಿ ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಅಭಯ್ ಎಸ್. ಓಕಾ ಕರೆ ನೀಡಿದ್ದಾರೆ.

- Advertisement -

ಮುಂಬೈನಲ್ಲಿ ಪರಿಸರ ಸಂರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳ ಕುರಿತು ನಡೆದ ಉಪನ್ಯಾಸ ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುವ ಹೋರಾಟಗಾರರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಇದನ್ನೂ ಓದಿ: ‘ದಿಮಾಗಿ ನಕ್ಸಲ್’ ಎಂದ ಮೋದಿ; ಇದು ಪ್ರಧಾನಿಯ ‘ಹತಾಶೆಯ ಪರಮಾವಧಿ’ ಎಂದು ಕಾಂಗ್ರೆಸ್ ತಿರುಗೇಟು

ಪರಿಸರ ಯೋಜನೆಗಳು ಅಥವಾ ಸರ್ಕಾರದ ನೀತಿಗಳನ್ನು ಪ್ರಶ್ನಿಸುವವರನ್ನು ಸುಲಭವಾಗಿ ‘ದಿಮಾಗಿ ನಕ್ಸಲ್’ ಅಥವಾ ‘ಅರ್ಬನ್ ನಕ್ಸಲ್’ ಎಂದು ಹಣೆಪಟ್ಟಿ ಹಚ್ಚಿ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ನಿಂದನಾತ್ಮಕ ಪದಗಳಿಗೆ ಹೆದರದೆ ಪರಿಸರವಾದಿಗಳು ಪರಿಸರ ರಕ್ಷಣೆಯ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮುಂದುವರಿಸಬೇಕು ಎಂದು ಜಸ್ಟಿಸ್ ಓಕಾ ಪ್ರತಿಪಾದಿಸಿದ್ದಾರೆ.

ಭಾರತೀಯ ಸಂವಿಧಾನದ ವಿಧಿ 51A(h) ಪ್ರಕಾರ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವುದು ಹಾಗೂ ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಕರ್ತವ್ಯವಾಗಿದೆ. ಸಂವಿಧಾನವು ಕೇವಲ ಪುಸ್ತಕವಲ್ಲ, ಅದು ನಮ್ಮ ಜೀವನದ ದಾರಿ ಎಂದು ಜಸ್ಟಿಸ್ ಓಕಾ ಕಿವಿಮಾತು ಹೇಳಿದ್ದಾರೆ.

ಇನ್ನು ಪ್ರಜಾಸತ್ತಾತ್ಮಕವಾಗಿ ಭಿನ್ನಾಭಿಪ್ರಾಯ ಅಥವಾ ಪ್ರತಿಭಟನೆ ವ್ಯಕ್ತಪಡಿಸುವ ನಾಗರಿಕರ ಧ್ವನಿಯನ್ನು ಅಡಗಿಸಲು ದಾಖಲಿಸುವ ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯಾಂಗ ನ್ಯಾಯಾಲಯಗಳು ರದ್ದುಗೊಳಿಸಬೇಕು ಮತ್ತು ಮೂಲಭೂತ ಹಕ್ಕುಗಳ ರಕ್ಷಣೆಗೆ ನಿಲ್ಲಬೇಕು ಎಂದು ಅವರು ಈ ಹಿಂದೆ ಪ್ರತಿಪಾದಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ.20ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

ಕುಮಟಾ, ಗೋಕರ್ಣ ಹಾಗೂ ಹೊನ್ನಾವರ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಹೆಸ್ಕಾಂ ವತಿಯಿಂದ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣೆ ಹಾಗೂ ತುರ್ತು ಕಾಮಗಾರಿ...

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಕಾಂಗ್ರೆಸ್‌ಗೆ ಮರಳುವುದಿಲ್ಲ: ಚರಣ್‌ಜಿತ್‌ ಸಿಂಗ್‌ ಚನ್ನಿ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ವಿರುದ್ಧ ಹಲವಾರು...

ವಿಜಯಪುರ |ಜೀವನಶೈಲಿ ಬದಲಾವಣೆಯಿಂದ ಮಧುಮೇಹ ಹೆಚ್ಚಳ;ಡಾ. ತೇಜಶ್ವಿನಿ ವಲ್ಲಭ

ಬದಲಾಗುತ್ತಿರುವ ಜೀವನಶೈಲಿಯಿಂದ ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದ್ದು, ಕಾಯಿಲೆ ಬಂದ ನಂತರ...