ಯೂಟ್ಯೂಬ್ ನೋಡಿ ಚಿಕಿತ್ಸೆ; ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕ ಸಾವು !

Date:

ಖಾಸಗಿ ಕ್ಲಿನಿಕ್‌ನ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದರಿಂದ ಸರ್ಕಾರಿ ಕೆಲಸಕ್ಕೆ ಸೇರಬೇಕಿದ್ದ ಯುವಕರೊಬ್ಬರು ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

- Advertisement -

ಮೃತ ಯುವಕನನ್ನು ದೀಪಕ್ ಪಾಸ್ವಾನ್ (24) ಎಂದು ಗುರುತಿಸಲಾಗಿದ್ದು, ಆತ ಕೇಂದ್ರೀಯ ಕೈಗಾರಿಕಾ ಭದ್ರತೆ ಪಡೆಗೆ ಉದ್ಯೋಗಕ್ಕೆ ಸೇರ್ಪಡೆಯಾಗಬೇಕಿತ್ತು. ಆದರೆ,ಆತನಿಗೆ ಶನಿವಾರ ಸಂಜೆ ವಾಂತಿ ಕಾಣಿಸಿಕೊಂಡಿದ್ದರಿಂದ, ಇಲ್ಲಿನ ಕದಮ್ ಕ್ವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೇಂದ್ರ ನಗರ ರಸ್ತೆ ಸಂಖ್ಯೆ 3ರಲ್ಲಿರುವ ಖಾಸಗಿ ಕ್ಲಿನಿಕ್ ಒಂದಕ್ಕೆ ದಾಖಲಾಗಿದ್ದರು. ಆದರೆ, ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದೀಪಕ್ ಪಾಸ್ವಾನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೆ ಕ್ಲಿನಿಕ್ ಅನ್ನು ಧ್ವಂಸಗೊಳಿಸಿರುವ ಆತನ ಸಂಬಂಧಿಕರು, ವೈದ್ಯರು ಯೂಟ್ಯೂಬ್ ವಿಡಿಯೊ ನೋಡಿಕೊಂಡು ಚಿಕಿತ್ಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ನಂತರದಲ್ಲಿ ಪಾಸ್ವಾನ್ ಕುಟುಂಬದ ಸದಸ್ಯರು ಕದಮ್ ಕ್ವಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಈ ಕುರಿತು ಪ್ರತಿಕ್ರಿಯಿಸಿದ ಪಾಸ್ವಾನ್ ಸಹೋದರ, ಒಂದು ವೇಳೆ ಅಲ್ಲಿ ವೈದ್ಯರಿದ್ದು, ಆತನಿಗೆ ಸೂಕ್ತ ಚಿಕಿತ್ಸೆ ಒದಗಿಸಿದ್ದರೆ, ಆತ ಬದುಕುಳಿದಿರುತ್ತಿದ್ದ. ನನ್ನ ಸಹೋದರ ಪಾಸ್ವಾನ್ ಇನ್ನು 24 ಗಂಟೆಯೊಳಗೆ ಗುಣಮುಖವಾಗಲಿದ್ದಾನೆ ಎಂದು ಕ್ಲಿನಿಕ್‌ನ ವೈದ್ಯರು ಭರವಸೆ ನೀಡಿದ್ದರು ಎಂದೂ ಅವರು ದೂರಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಧಾವಿಸಿದ ಕದಮ್ ಕ್ವಾನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ವರದಿಯನ್ನು ಸಿದ್ಧಪಡಿಸಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸದರ್ ಉಪ ವಿಭಾಗ ಪೊಲೀಸ್ ಅಧಿಕಾರಿ ದೀಕ್ಷಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...