ದೆಹಲಿ ಪೊಲೀಸರು ಸಾಮಾನ್ಯ ನಾಗರಿಕರನ್ನು ಹೆದರಿಸಲಷ್ಟೇ ಇದ್ದಾರೆಯೇ?; ಬಾಲಕಿಯ ಅತ್ಯಾಚಾರ, ಕೊಲೆ ಖಂಡಿಸಿ ರಾಹುಲ್ ಗಾಂಧಿ ವಾಗ್ದಾಳಿ

Date:

ದೆಹಲಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆಯನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. “ದೇಶದ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಯ ಹೊಣೆ ಯಾರದ್ದು? ದೆಹಲಿ ಪೊಲೀಸರ ಕೆಲಸ ಕೇವಲ ಸಾಮಾನ್ಯ ನಾಗರಿಕರನ್ನು ಬೆದರಿಸುವುದಕ್ಕೆ ಸೀಮಿತವಾಗಿದೆಯೇ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಹುಲ್‌ ಗಾಂಧಿ ನೇರವಾಗಿ ಪ್ರಶ್ನಿಸಿದ್ದಾರೆ.

- Advertisement -

ಬಾಲಕಿಯ ಅಮಾನುಷ ಹತ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ‘ಎಕ್ಸ್’ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, “ದೆಹಲಿ ಇಂದು ಮಹಿಳೆಯರ ಪಾಲಿಗೆ ಅತ್ಯಂತ ಭಯಾನಕ ವಾತಾವರಣವನ್ನು ಸೃಷ್ಟಿಸುತ್ತಿದೆ. ಪ್ರತಿದಿನ ಇಂತಹ ಘಟನೆಗಳು ವರದಿಯಾಗುತ್ತಿರುವುದು ದುರದೃಷ್ಟಕರ. ದೇಶದ ರಾಜಧಾನಿಯಲ್ಲೇ ಇಂತಹ ಭೀಕರ ಮತ್ತು ಅಮಾನುಷ ಕೃತ್ಯ ನಡೆದಿದ್ದರೂ, ಹಲವು ದಿನಗಳ ಕಾಲ ಪೊಲೀಸರಿಗೆ ಈ ಬಗ್ಗೆ ಯಾವುದೇ ಸುಳಿವು ಸಿಗದೇ ಇರುವುದು ಗಂಭೀರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

“ದೇಶದಲ್ಲಿ ಅಪರಾಧಿಗಳು ಯಾವುದೇ ಭಯವಿಲ್ಲದೆ ಮುಕ್ತವಾಗಿ ಓಡಾಡುತ್ತಿದ್ದಾರೆ. ದೆಹಲಿ ಪೊಲೀಸರು ನೇರವಾಗಿ ಕೇಂದ್ರ ಗೃಹ ಸಚಿವಾಲಯದ ನಿಯಂತ್ರಣದಲ್ಲಿದ್ದಾರೆ. ಹೀಗಿರುವಾಗ ಮಹಿಳೆಯರ ಭದ್ರತೆಯ ಅಂತಿಮ ಹೊಣೆಯನ್ನು ಯಾರು ಹೊರಬೇಕು” ಎಂದು ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೆ, ಮಹಿಳೆಯರ ಸುರಕ್ಷತೆ ಇಲ್ಲದೆ ಭಾರತವು ಅಭಿವೃದ್ಧಿಯ ಹಾದಿಯಲ್ಲಿ ಮುಂದೆ ಸಾಗಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

“ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಕ್ರೂರಿಗಳನ್ನು ತಕ್ಷಣವೇ ಬಂಧಿಸಿ, ಅತ್ಯಂತ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಈ ಕ್ರಿಮಿನಲ್ ನಿರ್ಲಕ್ಷ್ಯಕ್ಕೆ ಕಾರಣ ಯಾರು ಎಂಬುದಕ್ಕೆ ಹೊಣೆಗಾರಿಕೆಯನ್ನು ತಕ್ಷಣವೇ ನಿಗದಿಪಡಿಸಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ದೆಹಲಿಯ ಕುಶಕ್ ರಸ್ತೆಯ ಜೈಪಾಲ್ ರಾಣಾ ಅವರ ಜಮೀನಿನ ಬಳಿ ಸೆಪ್ಟೆಂಬರ್ 13 ರಂದು 17 ವರ್ಷದ ಬಾಲಕಿಯ ಶವ ಅತ್ಯಂತ ವಿಕೃತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯನ್ನು ಟೆಂಪೋ ಒಂದರಲ್ಲಿ ಕರೆದೊಯ್ದು, ಮದ್ಯಪಾನ ಮಾಡಿಸಿ, ಅತ್ಯಾಚಾರ ಎಸಗಿದ ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿ ಶವವನ್ನು ಬಯಲು ಜಾಗದಲ್ಲಿ ಎಸೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶವವು ಸಂಪೂರ್ಣವಾಗಿ ಕೊಳೆತುಹೋಗಿದ್ದು, ಬೀದಿ ನಾಯಿಗಳು ಕಡಿದು ಕರುಣಾಜನಕ ಸ್ಥಿತಿಯಲ್ಲಿದ್ದ ಕಾರಣ ತಕ್ಷಣಕ್ಕೆ ಮೃತದೇಹದ ಗುರುತು ತಿಳಿಯಲು ಸಾಧ್ಯವಾಗಿರಲಿಲ್ಲ.

ಪೊಲೀಸರ ಪ್ರಕಾರ, ಮೃತ ಬಾಲಕಿ ಮತ್ತು ಆರೋಪಿಗಳು ಪರಸ್ಪರ ಪರಿಚಿತರಾಗಿದ್ದರು. ಈ ಸಂಬಂಧ ಬಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಆರೋಪಿಗಳನ್ನು ಗುರುತಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು ಬಲ್ಲಿರಾ?

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು,...

ಬಿಆರ್‌ಎಸ್ ಶಾಸಕ ಅನರ್ಹ; ಸ್ಪೀಕರ್ ಆದೇಶ ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್

ಬಿಆರ್‌ಎಸ್ (BRS) ಟಿಕೆಟ್‌ನಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಖೈರತಾಬಾದ್ ಕ್ಷೇತ್ರದಿಂದ ಗೆದ್ದು,...