ಭೂಕುಸಿತಕ್ಕೂ ಮುನ್ನ ಬೊಗಳಿದ ನಾಯಿ; ಉಳಿಯಿತು 67 ಜನರ ಜೀವ!

Date:

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ, ಭೂಕುಸಿತಗಳು ಸಂಭವಿಸುತ್ತಿವೆ. ಇಡೀ ರಾಜ್ಯ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ಈವರೆಗೆ ಸುಮಾರು 55 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ, ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ 67 ಮಂದಿ ಪಾರಾಗಿದ್ದಾರೆ. ಅವರು ಬದುಕುಳಿಯಲು ನಾಯಿಯೇ ಕಾರಣವೆಂದು ಹೇಳಲಾಗುತ್ತಿದೆ.

- Advertisement -

ಮಂಡಿ ಜಿಲ್ಲೆಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ರಾತ್ರಿ ವೇಳೆ ಭೂಕುಸಿತ ಸಂಭವಿಸಿದೆ. ಈ ಭೂಕುಸಿತಕ್ಕೂ ಮುನ್ನ ನಾಯಿ ಜೋರಾಗಿ ಬೊಗಳಿದೆ. ನಾಯಿಯ ಬೊಗಳುವಿಕೆಯಿಂದ ಎಚ್ಚೆತ್ತ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ನಡುರಾತ್ರಿಯಲ್ಲಿ ಇದ್ದಕ್ಕಿದ್ದಂತೆ ನಾಯಿ ಬೊಗಳಲು ಶುರು ಮಾಡಿದೆ. ನಾಯಿ ಜೋರು ಬೊಗಳುವಿಕೆಯಿಂದಾಗಿ ನಿದ್ರೆಯಲ್ಲಿದ್ದ ನರೇಂದ್ರ ಎಂಬವರು ಎಚ್ಚರಗೊಂಡು, ನಾಯಿಯ ಬಳಿ ಹೋಗಿದ್ದಾರೆ. ಆ ವೇಳೆ, ಮನೆಯ ಗೋಡೆ ಬಿರುಕುಬಿಟ್ಟು, ನೀರು ನುಗ್ಗುತ್ತಿರುವುದನ್ನು ಗಮನಿಸಿದ್ದಾರೆ.

ಕೂಡಲೇ, ಸುತ್ತಮುತ್ತಲ 20 ಕುಟುಂಬವರನ್ನು ಎಬ್ಬಿಸಿದ್ದಾರೆ. ಎಲ್ಲರನ್ನೂ ಕರೆದುಕೊಂಡು ಎತ್ತರದ ಪ್ರದೇಶದಲ್ಲಿದ್ದ ನೈನಾ ದೇವಿ ದೇವಾಲಯದ ಬಳಿಗೆ ತೆರಳಿದ್ದಾರೆ. ಅದಾದ ಕೆಲವೇ ಸಮಯದಲ್ಲಿ,ಭೂಕುಸಿತ ಸಂಭವಿಸಿದೆ. ಆ 20 ಕುಟುಂಬಗಳ 67 ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...