‘ನಮ್ಮನ್ನು ಪದೇಪದೆ ಅವಮಾನಿಸಬೇಡಿ’: J-Kಗೆ ರಾಜ್ಯ ಸ್ಥಾನಮಾನ ನೀಡದ ಕೇಂದ್ರದ ವಿರುದ್ಧ ಸಿಎಂ ಒಮರ್ ಅಬ್ದುಲ್ಲಾ ಆಕ್ರೋಶ

Date:

ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ಧೋರಣೆಯ ವಿರುದ್ಧ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕೂರುವವರೆಗೆ ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿಯೇ ರಾಜ್ಯ ಸ್ಥಾನಮಾನವನ್ನು ಮುಂದೂಡುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

- Advertisement -

ಪೂಂಚ್ ಜಿಲ್ಲೆಯ ಮೆಂಧರ್ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. “ಸರಿಯಾದ ಸಮಯದಲ್ಲಿ ರಾಜ್ಯ ಸ್ಥಾನಮಾನ ಮರಳಿ ನೀಡುವುದಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಪುನರಾವರ್ತಿತ ಭರವಸೆಗಳು ಈಗ ಅರ್ಥಹೀನವಾಗಿವೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ತನ್ನದೇ ಸ್ವಂತ ಮುಖ್ಯಮಂತ್ರಿಯನ್ನು ಹೊಂದುವವರೆಗೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಬಾರದು ಎಂಬುದು ನಿಮ್ಮ ಇಚ್ಛೆಯಾಗಿದ್ದರೆ, ಅದನ್ನು ಮುಕ್ತವಾಗಿ ಹೇಳಿ. ಜನರನ್ನು ಯಾವುದೇ ಭ್ರಮೆಯಲ್ಲಿ ಇಡಬೇಡಿ. ನಮ್ಮನ್ನು ಈ ರೀತಿ ಪದೇಪದೆ ಅವಮಾನಿಸಬೇಡಿ” ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಕಳೆದ ತಿಂಗಳು ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಒಮರ್ ಅಬ್ದುಲ್ಲಾ ನೇತೃತ್ವದ ಸರ್ಕಾರವು ತಕ್ಷಣವೇ ಪೂರ್ಣ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಕೋರಿ ನಿರ್ಣಯವನ್ನು ಅಂಗೀಕರಿಸಿತ್ತು. ಆ ಸಂದರ್ಭದಲ್ಲಿಯೂ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನವನ್ನು ಮರಳಿ ಪಡೆಯುವುದು ಎಷ್ಟು ತುರ್ತು ಎಂಬುದನ್ನು ಅಬ್ದುಲ್ಲಾ ಹಲವು ಉದಾಹರಣೆಗಳೊಂದಿಗೆ ವಿವರಿಸಿದ್ದರು. ‘ಕ್ಷೇತ್ರ ಮರುವಿಂಗಡಣೆ’ ಪ್ರಕ್ರಿಯೆ ಮತ್ತು ವಿಧಾನಸಭಾ ಚುನಾವಣೆಗಳು ಮುಗಿದ ತಕ್ಷಣ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವುದಾಗಿ ಕೇಂದ್ರ ಸರ್ಕಾರ ಈ ಹಿಂದೆ ಭರವಸೆ ನೀಡಿತ್ತು. ಆದರೆ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಕಳೆದಿದ್ದರೂ, ಕೇಂದ್ರವು ತನ್ನ ಮಾತನ್ನು ಉಳಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಅಬ್ದುಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಜಿಟಲ್ ಅರೆಸ್ಟ್‌ಗಿಂತ ಭಯಾನಕ ‘ಎಐ ವಾಯ್ಸ್ ಕ್ಲೋನಿಂಗ್’ ವಂಚನೆ; ನಿಮ್ಮ ಆತ್ಮೀಯರ ಧ್ವನಿಯಲ್ಲೇ ಕರೆ ಬರುತ್ತದೆ ಎಚ್ಚರ!

ಸೈಬರ್ ವಂಚಕರು ಜನರನ್ನು ವಂಚಿಸಲು ದಿನಕ್ಕೊಂದು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಇತ್ತೀಚಿನ...

2024ರ ಚುನಾವಣೆ: 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಚಲಾವಣೆಯಾದ ಮತಗಳ ದಾಖಲೆಯೇ ಆಯೋಗದ ಬಳಿಯಿಲ್ಲ!

ಕಳೆದ 10 ವರ್ಷಗಳಿಂದ ಚುನಾವಣಾ ಆಯೋಗದ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳು...

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವದಂತಿ; ಡಾ. ಜಿ ಪರಮೇಶ್ವರ್ ಸ್ಪಷ್ಟನೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ....

ಗೃಹಲಕ್ಷ್ಮಿ | ಹಳ್ಳಿ ಮಹಿಳೆಯರ ಬದುಕು ಬದಲಿಸುತ್ತಿದೆ ‘ಗ್ರಾಮೀಣ ಮೈಕ್ರೋ-ಉದ್ಯಮ’!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಜೀವನದಲ್ಲಿ...