ವಿಶ್ವಸಂಸ್ಥೆ ನಮಗೆ ಪಾಠ ಹೇಳುವ ಅಗತ್ಯವಿಲ್ಲ: ವಿದೇಶಾಂಗ ಸಚಿವ ಜೈಶಂಕರ್

Date:

ಭಾರತದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯಬೇಕು ಎಂಬ ವಿಶ್ವಸಂಸ್ಥೆ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ಜಾಗತಿಕ ಸಂಸ್ಥೆ ನಮ್ಮ ದೇಶದ ಚುನಾವಣೆಯ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

- Advertisement -

ತಿರುವನಂತಪುರಂನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಜೈಶಂಕರ್, ಕಳೆದ ವಾರ ವಿಶ್ವಸಂಸ್ಥೆಯ ವಕ್ತಾರರು ಭಾರತದ ಚುನಾವಣೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ತುಂಬ ಭಾವನಾತ್ಮಕವಾಗಿ ಪರಿಣಾಮ ಬೀರುವ ವಿಚಾರದ ಬಗ್ಗೆ ಮಾತನಾಡಿದ್ದಾರೆ. ವಿಶ್ವಸಂಸ್ಥೆಯು ನಮ್ಮ ಚುನಾವಣೆಗಳು ಮುಕ್ತ ಹಾಗೂ ನ್ಯಾಯಸಮ್ಮತ ನಡೆಯಬೇಕೆಂದು ಹೇಳುವ ಅಗತ್ಯವಿಲ್ಲ. ನಮಗೆ ಭಾರತದ ಜನರಿದ್ದಾರೆ. ಭಾರತದ ಜನರು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ಬಗ್ಗೆ ಖಾತ್ರಿಪಡಿಸುತ್ತಾರೆ. ಆದ್ದರಿಂದ ಇದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

ಕಳೆದ ವಾರ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ವಕ್ತಾರರಾದ ಸ್ಟೀಫೆನ್ ದುಜಾರಿಕ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಹಾಗೂ ಕಾಂಗ್ರೆಸ್ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯುತ್ತಿರುವ ರಾಜಕೀಯ ಅಶಾಂತಿಯ ಬಗ್ಗೆ ಮಾತನಾಡಿದ್ದರು.

“ಚುನಾವಣೆಗಳು ನಡೆಯುವ ಯಾವುದೇ ದೇಶದಲ್ಲಿ ರಾಜಕೀಯ ನಾಯಕರು ಹಾಗೂ ನಾಗರಿಕರ ಹಕ್ಕುಗಳನ್ನು ಒಳಗೊಂಡು ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸಬೇಕಾಗಿದೆ.ಪ್ರತಿಯೊಬ್ಬರಿಗೂ ಮತದಾನ ಮಾಡಲು ಮುಕ್ತ ಮತ್ತು ನ್ಯಾಯಸಮ್ಮತ ವಾತಾವರಣವನ್ನು ಕಲ್ಪಿಸಬೇಕು. ಇದನ್ನು ನಾವು ಭಾರತದಲ್ಲೂ ಕೂಡ ಆಶಿಸುತ್ತೇವೆ” ಎಂದು ಹೇಳಿದ್ದರು.

ವಿಶ್ವಸಂಸ್ಥೆ ಹೇಳಿಕೆಗೂ ಮೊದಲು ಜರ್ಮನಿ ಹಾಗೂ ಅಮೆರಿಕ ಕೂಡ ಭಾರತದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಆದರೆ ಭಾರತ ಇವೆರೆಡೂ ದೇಶಗಳ ಹೇಳಿಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...