ರಾಮಮಂದಿರ ನಿರ್ಮಾಣದಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

Date:

ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

- Advertisement -

ಪುಣೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಗುರು ಭಾರತ್ ಎಂಬ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುಗಯುಗಾಂತರಗಳಿಂದ ವಿವಿಧ ಧರ್ಮ, ಜಾತಿ, ಮತ, ಸಿದ್ಧಾಂತಗಳ ಜನರು ಸೌಹಾರ್ದತೆಯಿಂದ ಬಾಳುತ್ತಿದ್ದಾರೆ. ಅದಕ್ಕಾಗಿಯೇ ನಾವು ವಿಭಜನೆಯ ಭಾಷೆಯನ್ನು ಬಿಟ್ಟು, ಅಲ್ಪಸಂಖ್ಯಾತ-ಬಹುಸಂಖ್ಯಾತ ತಾರತಮ್ಯ ಮರೆತು ಹೋರಾಡಬೇಕು. ನಮ್ಮ ಅಂತರ್ಗತ ಸಂಸ್ಕೃತಿಯ ಅಡಿಯಲ್ಲಿ ನಾವು ಒಂದಾಗಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಳಿಕ, ಹೊಸ ಮಂದಿರ-ಮಸೀದಿ ವಿವಾದಗಳನ್ನು ಉದ್ದೇಶಪೂರ್ವಕವಾಗಿ ಹುಟ್ಟುಹಾಕಲಾಗುತ್ತಿದೆ. ಇಂತಹ ವಿವಾದಗಳನ್ನು ಸೃಷ್ಟಿಸುವ ಮೂಲಕ ಕೆಲವರು ತಾವು ಹಿಂದೂ ನಾಯಕ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದರಿಂದ ಸಮಾಜಕ್ಕಾಗುವ ಹಾನಿಯನ್ನು ನಾವು ಅರಿಯಬೇಕಿದೆ. ರಾಮಮಂದಿರ ಕಟ್ಟುವ ಮೂಲಕ ಹಿಂದೂ ನಾಯಕನಾಗಲು ಸಾಧ್ಯವಿಲ್ಲ. ರಾಮಮಂದಿರ ಭಾರತೀಯರ ನಂಬಿಕೆ, ಹಿಂದೂಗಳ ನಂಬಿಕೆಯ ವಿಷಯವಾಗಿದೆ ಎಂದಿದ್ದಾರೆ.

ದೇಶವು ಸಾಮರಸ್ಯದಿಂದ ಬದುಕಬಹುದು ಎಂಬುದನ್ನು ನಾವು ಜಗತ್ತಿಗೆ ತೋರಿಸಬೇಕಾಗಿದೆ. ಭಾರತೀಯ ಸಮಾಜದ ಬಹುತ್ವವನ್ನು ಎತ್ತಿ ಹಿಡಿಯುವ ಕೆಲಸ ಸಮಸ್ತ ಭಾರತೀಯರದ್ದಾಗಿದೆ. ಮಂದಿರ-ಮಸೀದಿ ವಿವಾದಗಳು ಈ ಪ್ರಯತ್ನಕ್ಕೆ ಮುಳುವಾಗಿವೆ. ರಾಮ ಮಂದಿರ ಹಿಂದೂಗಳ ನಂಬಿಕೆಯ ವಿಷಯವಾಗಿದ್ದರಿಂದ, ಅದರ ನಿರ್ಮಾಣಕ್ಕಾಗಿ ಸಂಘವು ಅವಿರತ ಪ್ರಯತ್ನ ನಡೆಸಿತು. ಆದರೆ ಈಗ ರಾಜಕೀಯ ಲಾಭಕ್ಕಾಗಿ ಹೊಸದಾಗಿ ಸೃಷ್ಟಿಸಲಾಗುತ್ತಿರುವ ಮಂದಿರ-ಮಸೀದಿ ವಿವಾದಗಳು ಆರ್‌ಎಸ್‌ಎಸ್‌ಗೆ ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...