​ನರವಣೆ ಪುಸ್ತಕ ವಿವಾದ | ‘ಮಾಜಿ ಸೇನಾ ಮುಖ್ಯಸ್ಥರು ಸುಳ್ಳು ಹೇಳುವುದಿಲ್ಲ’: ರಾಹುಲ್

Date:

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಅವರ ‘ಪ್ರಕಟವಾಗದ ಆತ್ಮಕಥೆ’ಯ ಪ್ರಸರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿರುವುದು ಮತ್ತು ಪ್ರಕಾಶಕ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನೀಡಿರುವ ಸ್ಪಷ್ಟನೆಯ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

- Advertisement -

​ಪುಸ್ತಕ ಇನ್ನೂ ಪ್ರಕಟವಾಗಿಲ್ಲ ಎಂಬ ಪೆಂಗ್ವಿನ್ ಸಂಸ್ಥೆಯ ಹೇಳಿಕೆಯನ್ನು ಪ್ರಶ್ನಿಸಿರುವ ರಾಹುಲ್, ಪ್ರಕಾಶಕರ ನಿಲುವು ಮತ್ತು ಜನರಲ್ ನರವಣೆ ಅವರು ಹಿಂದೆ ನೀಡಿದ್ದ ಹೇಳಿಕೆಗಳ ನಡುವೆ ಸ್ಪಷ್ಟ ವಿರೋಧಾಭಾಸಗಳಿವೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನನ್ನ ಪುಸ್ತಕದ ಲಿಂಕ್ ಅನ್ನು ಅನುಸರಿಸಿ ಎಂದು ಸ್ವತಃ ನರವಣೆ ಅವರೇ ಟ್ವೀಟ್ ಮಾಡಿದ್ದಾರೆ. ಇಲ್ಲಿ ನರವಣೆ ಅವರು ಸುಳ್ಳು ಹೇಳುತ್ತಿರಬೇಕು ಅಥವಾ ಪೆಂಗ್ವಿನ್ ಸಂಸ್ಥೆ ಸುಳ್ಳು ಹೇಳುತ್ತಿರಬೇಕು. ಆದರೆ, ಮಾಜಿ ಸೇನಾ ಮುಖ್ಯಸ್ಥರು ಸುಳ್ಳು ಹೇಳುತ್ತಾರೆ ಎಂದು ನಾನಂದುಕೊಳ್ಳುವುದಿಲ್ಲ” ಎಂದು ಮಾರ್ಮಿಕವಾಗಿ ನುಡಿದರು.

​ಪುಸ್ತಕ ಬಿಡುಗಡೆಯಾಗಿಲ್ಲ ಎಂದು ಪೆಂಗ್ವಿನ್ ಹೇಳುತ್ತಿದೆ. ಆದರೆ, ಈ ಹಿಂದೆ ಅಮೆಜಾನ್‌ನಲ್ಲಿ ಪುಸ್ತಕ ಲಭ್ಯವಿತ್ತು ಮತ್ತು 2023ರಲ್ಲೇ ನರವಣೆ ಅವರು ‘ದಯವಿಟ್ಟು ನನ್ನ ಪುಸ್ತಕವನ್ನು ಖರೀದಿಸಿ’ ಎಂದು ಟ್ವೀಟ್ ಮಾಡಿದ್ದರು. “ನಾನು ಪೆಂಗ್ವಿನ್‌ಗಿಂತ ನರವಣೆ ಜೀ ಅವರನ್ನು ನಂಬುತ್ತೇನೆ. ನೀವು ಯಾರನ್ನು ನಂಬುತ್ತೀರಿ?” ಎಂದು ರಾಹುಲ್ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಪೀಕರ್ ನಡೆನುಡಿ ತಟಸ್ಥವಾಗಿರಬೇಕೆಂಬ ಸಂವಿಧಾನದ ಆಶಯದ ಸಾರಾಸಗಟು ಉಲ್ಲಂಘನೆಯಿದು!

ಈ ವಿವಾದದ ಹಿಂದೆ ರಾಜಕೀಯ ಕಾರಣಗಳಿವೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ. “ನರವಣೆ ಜೀ ಅವರು ತಮ್ಮ ಪುಸ್ತಕದಲ್ಲಿ ಭಾರತ ಸರ್ಕಾರ ಮತ್ತು ಪ್ರಧಾನ ಮಂತ್ರಿಯವರಿಗೆ ಮುಜುಗರ ಉಂಟುಮಾಡುವಂತಹ ಕೆಲವು ಸತ್ಯ ಸಂಗತಿಗಳನ್ನು ಉಲ್ಲೇಖಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ. ಹೀಗಾಗಿಯೇ ಈ ಗೊಂದಲ ಸೃಷ್ಟಿಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಜನರಲ್ ನರವಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕೃತಿಯ ಪ್ರಕಟಣೆಯ ಏಕೈಕ ಹಕ್ಕನ್ನು ತಾನು ಹೊಂದಿರುವುದಾಗಿ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸೋಮವಾರ ಸ್ಪಷ್ಟಪಡಿಸಿತ್ತು. “ಪುಸ್ತಕವು ಇನ್ನೂ ಅಧಿಕೃತವಾಗಿ ಪ್ರಕಟಣೆಗೊಂಡಿಲ್ಲ ಮತ್ತು ಯಾವುದೇ ಸ್ವರೂಪದಲ್ಲಿ ಪ್ರತಿಗಳು ಲಭ್ಯವಿಲ್ಲ” ಎಂದು ಸಂಸ್ಥೆ ತಿಳಿಸಿದೆ.

ಅಲ್ಲದೆ, ಚಲಾವಣೆಯಲ್ಲಿರುವ ಯಾವುದೇ ಡಿಜಿಟಲ್ ಅಥವಾ ಮುದ್ರಿತ ಪ್ರತಿಯು ಹಕ್ಕುಸ್ವಾಮ್ಯ ಉಲ್ಲಂಘನೆಯಾಗಲಿದ್ದು, ಇದರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದೆ. ​ಇದಕ್ಕೂ ಮುನ್ನ, ಕರಡು ಪ್ರತಿಯ ಸೋರಿಕೆ ಮತ್ತು ಪ್ರಸರಣದ ಆರೋಪದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ವಿಶೇಷ ತಂಡಕ್ಕೆ ತನಿಖೆಯ ಜವಾಬ್ದಾರಿ ವಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...