ಅಲಿಖಾನ್ ಮಹ್ಮದಾಬಾದ್ ವಿರುದ್ಧದ ತನಿಖಾ ವ್ಯಾಪ್ತಿ ವಿಸ್ತರಣೆಯ ವಿರುದ್ಧ ಎಸ್‌ಐಟಿಗೆ ಸುಪ್ರೀಂ ಎಚ್ಚರಿಕೆ

Date:

ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿಖಾನ್ ಮಹ್ಮದಾಬಾದ್ ವಿರುದ್ಧದ ತನಿಖಾ ವ್ಯಾಪ್ತಿ ಅವರ ಫೇಸ್‌ಬುಕ್ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಅರ್ ವ್ಯಾಪ್ತಿಯೊಳಗೇ ಇರಬೇಕೇ ಹೊರತು, ಆ ವ್ಯಾಪ್ತಿಯನ್ನು ಇಷ್ಟ ಬಂದಂತೆ ವಿಸ್ತರಿಸಬಾರದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

- Advertisement -

ತಮಗೆ ಬಂಧನದ ವಿರುದ್ಧ ರಕ್ಷಣೆ ಮಂಜೂರು ಮಾಡಲು ವಿಧಿಸಿರುವ ಷರತ್ತುಗಳನ್ನು ಸಡಿಲಿಸಬೇಕು ಎಂದು ಆಕ್ಷೇಪಿಸಿ ಪ್ರಾಧ್ಯಾಪಕ ಅಲಿಖಾನ್ ಮಹ್ಮದಾಬಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ದೀಪಂಕರ್ ದತ್ ಅವರನ್ನೊಳಗೊಂಡ ನ್ಯಾಯಪೀಠ, “ನಿಮ್ಮ ತನಿಖೆಯನ್ನು ಎಡ, ಬಲ, ಮಧ್ಯ ಎಂದು ಬದಲಿಸಬೇಡಿ. ಕೇವಲ ಎರಡು ಎಫ್‌ಐಅರ್‌ಗಳಿಗೆ ಸಂಬಂಧಿಸಿದಂತೆ ಮಾತ್ರ ನಿಮ್ಮ ಗಮನ ಕೇಂದ್ರೀಕರಿಸಿ” ಎಂದು ಸ್ಪಷ್ಟವಾಗಿ ಸೂಚಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ ಬಗ್ಗೆ ಪೋಸ್ಟ್; ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಮಧ್ಯಂತರ ಜಾಮೀನು

ಪ್ರಾಧ್ಯಾಪಕ ಅಲಿಖಾನ್ ಮಹ್ಮದಾಬಾದ್ ಅವರ ನಿವಾಸ ಮತ್ತಿತರ ಸ್ಥಳಗಳ ಶೋಧ ನಡೆಸಬೇಕು ಎಂದು ರಾಜ್ಯ ಸರಕಾರ ಹೇಳಿಕೆ ನೀಡಿದ ಬೆನ್ನಿಗೇ ನ್ಯಾಯಾಲಯ ಈ ನಿರ್ದೇಶನ ನೀಡಿದೆ.

“ತನಿಖೆಯು ಕೇವಲ ಎರಡು ಎಫ್‌ಐಆರ್‌ಗಳಿಗೆ ಮಾತ್ರ ಸೀಮಿತವಾಗಿರಬೇಕು. ತನಿಖಾ ವರದಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಮಧ್ಯಂತರ ರಕ್ಷಣೆ ಮುಂದುವರಿಯಲಿದೆ ಎಂದು ನಾವು ಆದೇಶಿಸುತ್ತಿದ್ದೇವೆ” ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ.

ಈ ನಡುವೆ, ತನಗೆ ಬಂಧನದಿಂದ ರಕ್ಷಣೆ ಮಂಜೂರು ಮಾಡುವ ವೇಳೆ, ನಾನು ಯಾವುದೇ ಸಾಮಾಜಿಕ ಪೋಸ್ಟ್‌ಗಳನ್ನು ಮಾಡಬಾರದು ಎಂದು ವಿಧಿಸಲಾಗಿರುವ ಷರತ್ತನ್ನು ಸಡಿಲಿಸಬೇಕು ಎಂದು ಪ್ರಾಧ್ಯಾಪಕ ಅಲಿಖಾನ್ ಮಾಡಿದ ಮನವಿಯನ್ನು ತಳ್ಳಿ ಹಾಕಿದ ನ್ಯಾಯಪೀಠ, “ಈ ಆದೇಶವು ನಿಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಯಾವುದೇ ಪೋಸ್ಟ್ ಮಾಡುವಂತಿಲ್ಲ ಎಂಬ ಷರತ್ತಿಗೆ ಒಳಪಟ್ಟಿದೆಯೇ ಹೊರತು, ನೀವು ಸಾಮಾನ್ಯ ಪೋಸ್ಟ್‌ಗಳನ್ನು ಮಾಡಲು ಯಾವುದೇ ನಿರ್ಬಂಧವನ್ನು ಒಳಗೊಂಡಿಲ್ಲ” ಎಂದು ಸ್ಪಷ್ಟಪಡಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...