ಯೆಚೂರಿ, ದೇವರಾಜನ್ ಭಾಷಣದ ಸರ್ವಾಧಿಕಾರಿ-ಮುಸ್ಲಿಂ ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

Date:

ದೂರದರ್ಶನ ಹಾಗೂ ಆಲ್‌ ಇಂಡಿಯಾ ರೇಡಿಯೋ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹಾಗೂ ಆಲ್‌ ಇಂಡಿಯಾ ಫಾರ್ವರ್ಡ್ ಬ್ಲಾಕ್ ನಾಯಕ ಜಿ ದೇವರಾಜನ್‌ ಅವರ ಕೇಂದ್ರ ಸರ್ಕಾರವನ್ನು ಟೀಕಿಸುವ ಭಾಷಣದ ತುಣುಕುಗಳನ್ನು ಸೆನ್ಸಾರ್‌ ಮಾಡಿದೆ.

- Advertisement -

ಈ ಇಬ್ಬರು ನಾಯಕರು ತಮ್ಮ ಭಾಷಣಗಳಲ್ಲಿ ಬಳಸಿದ್ದ ‘ಕೋಮುವಾದಿ ಸರ್ವಾಧಿಕಾರಿ ಆಡಳಿತ’, ‘ಕಠಿಣ ಕಾನೂನುಗಳು’ ಹಾಗೂ ‘ಮುಸ್ಲಿಂ’ ಪದಗಳನ್ನು ಸೆನ್ಸಾರ್‌ಗೊಳಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚುನಾವಣಾ ಆಯೋಗದ ನಿರ್ದೇಶನಗಳ ಅನುಸಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೂರದರ್ಶನದ ಅಧಿಕಾರಿಗಳು ತಿಳಿಸಿದ್ದಾರೆ. ಭಾಷಣಕ್ಕೂ ಮೊದಲು ಸೀತಾರಾಮ್‌ ಯೆಚೂರಿ ಅವರಿಗೆ ಕೋಮುವಾದಿ ಸರ್ವಾಧಿಕಾರಿ ಆಡಳಿತ ಪದವನ್ನು ಬಳಸದಂತೆ ಕೇಂದ್ರ ಸರ್ಕಾರದ ಮಾಧ್ಯಮಗಳು ಸಲಹೆ ನೀಡಿದ್ದವು.

ಅದೇ ರೀತಿ ಜಿ ದೇವರಾಜನ್‌ ಅವರಿಗೆ ಮುಸ್ಲಿಮರು ಪದ ಬಳಸದಂತೆ ಕೂಡ ಎಐಆರ್‌ ಹಾಗೂ ದೂರದರ್ಶನ ಸೂಚನೆ ನೀಡಿತ್ತು.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಚುನಾವಣಾ ಚಿಹ್ನೆಗಳ(ಮೀಸಲು ಮತ್ತು ಹಂಚಿಕೆ) ನಿಬಂಧನೆಗಳ ಆದೇಶ 1968ರಡಿ 6 ರಾಷ್ಟ್ರೀಯ ಪಕ್ಷಗಳು ಹಾಗೂ 59 ರಾಜ್ಯ ಪಕ್ಷಗಳಿಗೆ ಚುನಾವಣಾ ಪ್ರಚಾರ ಸುದ್ದಿ ಪ್ರಸಾರವಾಗುವ ಅರ್ಹತೆ ಹೊಂದಿವೆ. ರಾಷ್ಟ್ರ ಹಾಗೂ ರಾಜ್ಯಗಳನ್ನು ಪ್ರತಿನಿಧಿಗಳ ಚುನಾವಣಾ ಪ್ರಚಾರವನ್ನು ಪ್ರಸಾರ ಮಾಡಲು ಅನುಮತಿಸಲಾಗಿರುವುದನ್ನು ಏಪ್ರಿಲ್‌ನಲ್ಲಿ ಹೊರಡಿಸಿರುವ ಚುನಾವಣಾ ಆಯೋಗದ ಆದೇಶದಲ್ಲಿ ತಿಳಿಸಲಾಗಿತ್ತು.

ಈ ಬಗ್ಗೆ ಮಾತನಾಡಿರುವ ಸೀತಾರಾಂ ಯೆಚೂರಿ, ನಾನು ಮಾತನಾಡಿರುವ ಹಿಂದಿ ಆವೃತ್ತಿಯಲ್ಲಿ ಯಾವುದೇ ಸಮಸ್ಯೆಗಳು ಇರಲಿಲ್ಲ. ಇಂಗ್ಲಿಷ್‌ಗೆ ತರ್ಜುಮೆ ಮಾಡಿದ ನಂತರ ನನ್ನ ಪದಗಳನ್ನು ಅಳಿಸಿದ್ದಾರೆ ಎಂದು ಹೇಳಿದರು.

ದೇವರಾಜನ್‌ ಕೂಡ ಈ ಬಗ್ಗೆ ಮಾತನಾಡಿ, ನಾನು ನನ್ನ ಭಾಷಣದಲ್ಲಿ ಸಿಎಎ ವಿವಾದದಲ್ಲಿನ ತಾರತಮ್ಯದ ಷರತ್ತುಗಳ ಬಗ್ಗೆ ಉಲ್ಲೇಖಿಸಿದ್ದೆ. ಅವರು ಮುಸ್ಲಿಂ ಪದವನ್ನು ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ನಾನು ಸಿಎಎ ಕಾನೂನಿನಲ್ಲಿ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸರ್ಕಾರದ ಮಾಧ್ಯಮಗಳಿಗೆ ಮನವರಿಕೆ ಮಾಡಿದರೂ ಪದವನ್ನು ಉಳಿಸಿಕೊಳ್ಳದೆ ಅಳಿಸಿದ್ದಾರೆ ಎಂದು ತಿಳಿಸಿದರು.

ಈ ಇಬ್ಬರು ನಾಯಕರು ಮಾತನಾಡಿದ ಭಾಷಣವು ಏ.16ರಂದು ದೂರದರ್ಶನದಲ್ಲಿ ಪ್ರಸಾರವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...