ಬಾಗಿಲು ಸದಾ ತೆರೆದಿರುತ್ತದೆ; ನಿತೀಶ್‌ಗೆ ಲಾಲು ಮತ್ತೆ ಆಹ್ವಾನ

Date:

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಬಾಗಿಲು ಸದಾ ತೆರೆದಿರುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಒಕ್ಕೂಟ ಸೇರ್ಪಡೆಗೆ ಮತ್ತೆ ಆಹ್ವಾನಿಸಿದ್ದಾರೆ. ಇತ್ತೀಚಿಗಷ್ಟೆ ನಿತೀಶ್ ಕುಮಾರ್ ಅವರು ಆರ್‌ಜೆಡಿ ಸಖ್ಯ ಬಿಟ್ಟು ಬಿಜೆಪಿ ಜೊತೆ ಸೇರಿ ಪುನಃ ಸರ್ಕಾರ ರಚಿಸಿದ್ದರು.

ಜೆಡಿಯು ಹಾಗೂ ಆರ್‌ಜೆಡಿ ಮೈತ್ರಿಕೂಟ ಸರ್ಕಾರ ಬಿದ್ದ ನಂತರದಿಂದ ಲಾಲು ಪ್ರಸಾದ್ ಯಾದವ್‌ ಅವರು ಮೌನಕ್ಕೆ ಜಾರಿದ್ದರು. ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ.

ಇಬ್ಬರು ನಾಯಕರು ಗುರುವಾರ ಬಿಹಾರ ವಿದಾನಸೌಧದ ಆವರಣದಲ್ಲಿ ಸಾಂಪ್ರದಾಯಿಕವಾಗಿ ಹಸ್ತಲಾಘವ ಮಾಡಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಮೂತ್ರಕೋಶ ಕಸಿ ಚಿಕಿತ್ಸೆಯ ನಂತರ ಲಾಲು ಪ್ರಸಾದ್ ಯಾದವ್ ಅವರು ಹೆಚ್ಚಾಗಿ ಮನೆಯಲ್ಲಿಯೇ ಇರುತ್ತಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುತ್ತಿರುವ ಮನೋಜ್‌ ಝಾ ಹಾಗೂ ಸಂಜಯ್ ಯಾದವ್ ಅವರಿಗೆ ನೈತಿಕ ಸ್ಥೈರ್ಯ ತುಂಬುವುದಕ್ಕಾಗಿ ನಾಮಪತ್ರ ಸಲ್ಲಿಕೆಯ ದಿನದಂದು ಅವರ ಜೊತೆ ಕಾಣಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಪತ್ರಕರ್ತರು ಲಾಲು ಅವರನ್ನು ವಿಧಾನಸಭೆ ಆವರಣದಲ್ಲಿ ಪ್ರಶ್ನಿಸಿದಾಗ ಅವರು ವಾಪಸ್ ಬರಲಿ,ಆನಂತರ ನಾವು ನೋಡೋಣ ಎಂದಿದ್ದರು.

ನಿತೀಶ್ ಅವರು ಆರ್‌ಜೆಡಿ ಮೈತ್ರಿ ಬಿಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಲಾಲು ಪ್ರಸಾದ್ ಯಾದವ್‌ ಅವರ ಪುತ್ರ ತೇಜಸ್ವಿ ಯಾದವ್‌ ಜೆಡಿಯು ದೂರವಾದ ನಂತರ ಎರಡು ಬಾರಿಯು ಡಿಸಿಎಂ ಸ್ಥಾನ ಕಳೆದುಕೊಂಡಿದ್ದರು.

ಲಾಲು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ವಕ್ತಾರ ನೀರಜ್ ಕುಮಾರ್, ಲಾಲು ಅವರು ಬಾಗಿಲು ತೆರೆದಿದೆ ಎಂದು ಹೇಳುತ್ತಾರೆ. ನಮ್ಮ ನಾಯಕ ನಿತೀಶ್ ಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ ಆರ್‌ಜೆಡಿಯೊಂದಿಗೆ ಅಧಿಕಾರ ಹಂಚಿಕೊಂಡರೆ ಭ್ರಷ್ಟಚಾರದೊಂದಿಗೆ ಭಾಗಿಯಾಗಬೇಕಾಗುತ್ತದೆ. ವಾಪಸ್‌ ಹೋಗುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...