ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

Date:

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42 ಲೋಕಸಭಾ ಕ್ಷೇತ್ರದಲ್ಲಿಯೂ ಟಿಎಂಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘ಚುನಾವಣೆಯಲ್ಲಿ ಮೈತ್ರಿಗಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಇಂದಿಗೂ ಬಾಗಿಲು ತೆರೆದಿದೆ’ ಎಂದು ಹೇಳಿದ್ದಾರೆ.

- Advertisement -

ಪಾಟ್ನಾದಲ್ಲಿ ಪ್ರತಿಪಕ್ಷಗಳ ರ‍್ಯಾಲಿಗೆ ಮುನ್ನ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಜೈರಾಮ್ ರಮೇಶ್, ನಾವು ಇನ್ನೂ ಭರವಸೆ ಹೊಂದಿದ್ದೇವೆ. ಬಿಜೆಪಿಯನ್ನು ಸೋಲಿಸುವುದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆದ್ಯತೆಯಾಗಿದೆ. ಹಾಗಿದ್ದಾಗ ಭಾರತದ ಮೈತ್ರಿಯಲ್ಲಿ ನಾನು ಸೇರುತ್ತೇನೆ ಎಂದು ಅವರು ಹೇಳುವ ಭರವಸೆಯಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಟಿಎಂಸಿ

“ನಾವು ಇಂದಿಗೂ ಮೈತ್ರಿಯ ಬಾಗಿಲನ್ನು ಮುಚ್ಚಿಲ್ಲ. ಮಮತಾರ ಟಿಎಂಸಿ ಎಲ್ಲಾ 42 ಸ್ಥಾನಗಳಲ್ಲಿ (ಪಶ್ಚಿಮ ಬಂಗಾಳದಲ್ಲಿ) ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿದೆ, ಆದರೆ ಅವರು ಎಲ್ಲಿ ಸ್ಪರ್ಧಿಸುತ್ತಾರೆ ಎಂಬ ಘೋಷಣೆ ಮಾಡಿಲ್ಲ. ಮೈತ್ರಿಯ ಮಾತುಕತೆ ಮುಂದುವರೆದಿದೆ, ಟಿಎಂಸಿಗೆ ಬಾಗಿಲು ತೆರೆದಿದೆ. ಮಮತಾ ಅಂತಿಮ ಮಾತು ಹೇಳುವವರೆಗೂ ನಾವು ಅಂತಿಮವಾಗಿ ಏನು ಹೇಳಲಾಗದು,” ಎಂದು ಹೇಳಿದರು.

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆಯಲಿರುವ ರ‍್ಯಾಲಿಯ ಬಗ್ಗೆ ಈ ಸಂದರ್ಭದಲ್ಲೇ ಮಾತನಾಡಿದ ರಮೇಶ್, ಇದು ಜಂಟಿ ವಿರೋಧ ಪಕ್ಷದ ರ‍್ಯಾಲಿಯಾಗಿದ್ದು, ಶನಿವಾರ ಪ್ರಧಾನಿ ಪಾಟ್ನಾಗೆ ಹೋದ ಬಳಿಕವೇ ಶುರುವಾಗಲಿದೆ. ಇದು ಬಹಳ ಮಹತ್ವದ ರಾಜಕೀಯ ರ‍್ಯಾಲಿಯಾಗಿದೆ ಮತ್ತು ಇದು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳನ್ನು ಸೋಲಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರದರ್ಶನವಾಗಿದೆ ಎಂದರು.

ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ವಯನಾಡು ಸಂಸದ ರಾಹುಲ್ ಗಾಂಧಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ ಭಾರತ್ ಜೋಡೋ ಯಾತ್ರೆಗೆ ವಿರಾಮ ನೀಡಿದ್ದಾರೆ ಎಂದು ರಮೇಶ್ ತಿಳಿಸಿದರು. ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ರ‍್ಯಾಲಿಗಾಗಿ ಪಾಟ್ನಾಗೆ ಹೋಗಬೇಕಾಗಿದೆ. ಆದ್ದರಿಂದ ಸ್ವಲ್ಪ ಬದಲಾವಣೆಯಾಗಿದೆ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಅದರಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಲೋಕದಳದ ಭಾಗವಹಿಸುವಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರಮೇಶ್, ಅಲಿಗಢದಲ್ಲಿ ನಡೆದ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರನ್ನು ‘ನಿಜವಾದ’ ಲೋಕದಳ ಸ್ವಾಗತಿಸಿತು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಇಂದಿರಾ ಗಾಂಧಿ ಮತ್ತು ಲೋಕದಳದ ಪೋಸ್ಟರ್‌ಗಳು, ಬ್ಯಾನರ್‌ಗಳು ಮತ್ತು ಹೋರ್ಡಿಂಗ್‌ಗಳು ಅಲ್ಲಿದ್ದವು ಎಂದರು.

“ಅದು ನಿಜವಾದ ಲೋಕದಳ, ಅಸಲಿ ಲೋಕದಳ, ಆರ್‌ಎಲ್‌ಡಿ (ರಾಷ್ಟ್ರೀಯ ಲೋಕದಳ) ನಕಲಿ ಲೋಕದಳ,” ಎಂದು ಪ್ರತಿಪಾದಿಸಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ ಗೌರವಿಸಿದ ನಂತರ ಆರ್‌ಎಲ್‌ಡಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರ್ಪಡೆಗೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...