‘ಡಬಲ್ ಸ್ಟ್ಯಾಂಡ್’ | ನೆಟ್ಟಿಗರ ಟ್ರೋಲ್‌ಗೆ ಗುರಿಯಾದ ಗೌತಮ್ ಗಂಭೀರ್

Date:

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ‘ಫ್ಯಾಂಟಸಿ ಕ್ರಿಕೆಟ್ ಅಪ್ಲಿಕೇಶನ್’ನ ಜಾಹೀರಾತನ್ನು ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಯಲ್ಲಿ ಹಂಚಿಕೊಂಡ ಬಳಿಕ ಭಾರೀ ಟ್ರೋಲ್‌ಗೆ ಗುರಿಯಾಗಿದ್ದಾರೆ. ಬಿಜೆಪಿಯ ಮಾಜಿ ಸಂಸದರೂ ಆಗಿರುವ ಗಂಭೀರ್ ನೆಟ್ಟಿಗರ ಟ್ರೋಲ್‌ನಿಂದ ಮುಜುಗರಕ್ಕೆ ಸಿಲುಕಿದ್ದಾರೆ.

- Advertisement -

ಬೆಟ್ಟಿಂಗ್ ಅಪ್ಲಿಶೇಷನ್‌ ಆಗಿರುವ ‘ರಿಯಲ್ 11’ನ ಪ್ರಚಾರಕ್ಕಾಗಿ ಅದರ ಜಾಹೀರಾತನ್ನು ಇನ್ಸ್‌ಟಾಗ್ರಾಂ, ಎಕ್ಸ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಗಂಭೀರ್ ಹಂಚಿಕೊಂಡಿದ್ದಾರೆ. ಅವರು ಜಾಹೀರಾತನ್ನು ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ ಅವರ ಅಭಿಮಾನಿಗಳು ‘ಬೆಟ್ಟಿಂಗ್ ಅಪ್ಲಿಕೇಶನ್’ಅನ್ನು ಪ್ರಚಾರ ಮಾಡುತ್ತಿರುವ ಗಂಭೀರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟೀಕೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಜಾಹೀರಾತನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಗಂಭೀರ್, “ಆಶಾದಾಯಕವಾಗಿ, ಭಾರತವು T20 ಕ್ರಿಕೆಟ್‌ ಸರಣಿಯಲ್ಲಿ ಬಾಂಗ್ಲಾದೇಶದ ವಿರುದ್ಧ ತಮ್ಮ ಪ್ರಾಬಲ್ಯವನ್ನು ಮುಂದುವರೆಸುತ್ತದೆ. Real11official ಜೊತೆಗೆ ಟಿ20ಯ ಮೂರು ಪಂದ್ಯಗಳ ಸರಣಿಯನ್ನು ನೋಡಿ, ಆನಂದಿಸಿರಿ. ಭಾರತ ತಂಡವು 3-0 ಅಂತರದಲ್ಲಿ ಸರಳಿಯನ್ನು ಗೆಲ್ಲುತ್ತದೆಯೇ? ನಿಮ್ಮ ಅಭಿಪ್ರಾಯವನ್ನು ಹೌದು/ಇಲ್ಲವೆಂದು ಹಂಚಿಕೊಳ್ಳಿ ಹಾಗೂ ತ್ವರಿತ ನಗದು ಬಹುಮಾನಗಳನ್ನು ಪಡೆಯಿರಿ” ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಹಿಂದೆ, ಇದೇ ಗಂಭೀರ್‌ ಅವರು ಪಾನ್ ಮಸಾಲಾ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ ಮಾಜಿ ಕ್ರಿಕೆಟಿಗರನ್ನು ಟೀಕಿಸಿದ್ದರು. ಇದೀಗ, ಅವರೇ ‘ಬೆಟ್ಟಿಂಗ್ ಅಪ್ಲಿಕೇಶನ್‌’ಅನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ಗಂಭೀರ್ ಅವರ ‘ಡಬಲ್ ಸ್ಟ್ಯಾಂಡ್‌’ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...