ವರದಕ್ಷಿಣೆ ಸಾವು ಪ್ರಕರಣ: ʼಇದು ವಧುವಿನ ಕುಟುಂಬವನ್ನು ಹಿಂಡಿ ಹಿಪ್ಪೆ ಮಾಡುವ ದುಷ್ಕೃತ್ಯʼ: ಸುಪ್ರೀಂ ಕೋರ್ಟ್

Date:

ಮದುವೆಯಾದ ಕೆಲವೇ ವರ್ಷಗಳಲ್ಲಿ ಮಹಿಳೆಯೊಬ್ಬಳು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವರದಕ್ಷಿಣೆ ಕಿರುಕುಳದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ವರದಕ್ಷಿಣೆ ಕಿರುಕುಳ ನೀಡುವವರಿಗೆ ಸಮಾಜದಲ್ಲಿ ಕಠಿಣ ಸಂದೇಶ ರವಾನೆಯಾಗಬೇಕಾದ ಅಗತ್ಯವಿದೆ ಎಂದು ನ್ಯಾಯಾಲಯ ಪ್ರತಿಪಾದಿಸಿದೆ. ವಧುವಿನ ಮನೆಯವರಿಂದ ಹಣ ವಸೂಲಿ ಮಾಡುವ ಪ್ರವೃತ್ತಿಯು ವಧು ಮತ್ತು ಆಕೆಯ ಕುಟುಂಬವನ್ನು ಹಿಂಡಿ ಹಿಪ್ಪೆ ಮಾಡುವ ಪ್ರಯತ್ನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದಲ್ಲದೆ, ಪತಿಯ ಕುಟುಂಬದ ನಡವಳಿಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ವಿಚಾರಣೆ ವೇಳೆ ಇಂದಿನ ಸಾಮಾಜಿಕ ಪರಿಸ್ಥಿತಿಯನ್ನು ಪ್ರಶ್ನಿಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, “ಯುವಕರು ಹುಡುಗಿಯರನ್ನು ಮದುವೆಯಾದ ಬಳಿಕ ಅವರನ್ನು ಮತ್ತು ಅವರ ಕುಟುಂಬದವರನ್ನು ಏಕೆ ಅವಮಾನಿಸುತ್ತಾರೆ? ವಧು ಮತ್ತು ಆಕೆಯ ಕುಟುಂಬವನ್ನು ನಿರಂತರವಾಗಿ ಅವಮಾನಿಸುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದಿದ್ದಾರೆ.

ಮದುವೆಯಾದ ಮೂರೇ ವರ್ಷಗಳಲ್ಲಿ ಮಹಿಳೆ ಸಾವನ್ನಪ್ಪಿದ ಈ ಪ್ರಕರಣದಲ್ಲಿ, ಪತಿಯ ಕುಟುಂಬದವರು ಹಣ ಮತ್ತು ಕಾರಿಗಾಗಿ ನಿರಂತರವಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದರು ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಮದುವೆಯಾದ ಏಳು ವರ್ಷಗಳ ಒಳಗಾಗಿ ಅಸಹಜ ಸಾವು ಸಂಭವಿಸಿರುವುದರಿಂದ, ಇದು ವರದಕ್ಷಿಣೆ ಸಾವು ಎಂಬ ಕಾನೂನಾತ್ಮಕ ಕಾನೂನಿನಡಿಯಲ್ಲಿ ವಿಚಾರಣೆ ನಡೆದಿತ್ತು.

ಇದನ್ನೂ ಓದಿ: ದೀರ್ಘಾಯುಷ್ಯದ ಬದುಕು, ಜೀವ ಹಿಂಡುವ ಕಾಯಿಲೆ: ಮಹಿಳಾ ಆರೋಗ್ಯದ ಸುತ್ತ…

ಮದುವೆಯಾದ ನಂತರ ವಧುವಿನ ಮನೆಯವರಿಂದ ಹಣ ವಸೂಲಿ ಮಾಡುವ ಪ್ರವೃತ್ತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿ ನಾಗರತ್ನ, “ಇದು ವಧು ಮತ್ತು ಆಕೆಯ ಕುಟುಂಬವನ್ನು ಹಿಂಡಿ ಹಿಪ್ಪೆ ಮಾಡುವ ಪ್ರಯತ್ನವಾಗಿದೆ. ಅಲ್ಲದೆ, ಪತಿಯಕುಟುಂಬದವರು ವಧುವಿನ ಮನೆಯವರನ್ನು ‘ನೀವು ಭಿಕ್ಷುಕರು, ನಿಮಗೆ ಹಣ ಕೊಡಲು ಯೋಗ್ಯತೆ ಇಲ್ಲ’ ಎಂದು ನಿಂದಿಸಿದ್ದಾರೆ. ಆದರೆ ವಧುವಿನ ತಂದೆ ತಮ್ಮ ಮಗಳನ್ನು ಉಳಿಸಿಕೊಳ್ಳಲು ₹60,000 ನೀಡುವುದಾಗಿ ಬೇಡಿಕೊಂಡರೂ ಅವರನ್ನು ಭಿಕ್ಷುಕರು ಎನ್ನಲಾಗಿದೆ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ನ್ಯಾಯಮೂರ್ತಿ ಉಜ್ಜಲ್ ಭುಯಾನ್, ಸಮಾಜದಲ್ಲಿ ಇಂತಹ ನಡವಳಿಕೆಗಳು ಸಾಮಾನ್ಯವಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿ, “ಇವರೆಲ್ಲರೂ ವಿದ್ಯಾವಂತರು” ಎಂದು ಮಾರ್ಮಿಕವಾಗಿ ನುಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...