ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

Date:

Advertisements

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದೌರ್ಜನ್ಯದ ಘಟನೆ ವರದಿಯಾಗಿದೆ. ಗರ್ಭಿಣಿಯೊಬ್ಬರನ್ನು ಆಕೆಯ ಪತಿ ಮತ್ತು ಅತ್ತೆ-ಮಾವ ಹೊಡೆದು ಹೊಂದಿದ್ದಾರೆ.

ಉತ್ತರ ಪ್ರದೇಶದ ಮೈನ್‌ಪುರಿಯ ಗೋಪಾಲ್‌ಪುರ ಗ್ರಾಮದಲ್ಲಿ ಘಟನೆ ನಡೆದಿದೆ. ರಜನಿ ಕುಮಾರಿ (21) ಎಂಬವರನ್ನು ವರದಕ್ಷಿಣೆಗಾಗಿ ಆಕೆಯ ಪತಿ ಸಚಿನ್ ಮತ್ತು ಆತನ ಕುಟುಂಬಸ್ಥರು ಹೊಡೆದು ಕೊಲೆ ಮಾಡಿದ್ದಾರೆ.

ರಜನಿ ಕುಮಾರಿ ಮತ್ತು ಸಚಿನ್ ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ವಿವಾಹವಾಗಿದ್ದರು. ರಜನಿ ಅವರಿಗೆ ಆಕೆಯ ಪತಿ ಸಚಿನ್, ಸಹೋದರರಾದ ಪ್ರಾಂಶು ಮತ್ತು ಸಹಬಾಗ್, ಸಂಬಂಧಿಗಳಾದ ರಾಮ್‌ ನಾಥ್, ದಿವ್ಯಾ ಹಾಗೂ ಟೀನಾ ಅವರು ಟೆಂಟ್‌ ಹೌಸ್‌ ತೆರೆಯಲು 5 ಲಕ್ಷ ರೂ. ಹೆಚ್ಚುವರಿ ವರದಕ್ಷಿಣೆ ತರುವಂತೆ ಒತ್ತಡ ಹೇರಿದ್ದರು ಎಂದು ಮೈನ್‌ಪುರಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಹುಲ್ ಮಿಥಾಸ್ ತಿಳಿಸಿದ್ದಾರೆ.

Advertisements

“ಸಚಿನ್ ಮತ್ತು ಆತನ ಕುಟುಂಬಸ್ಥರ ಬೇಡಿಕೆಯಂತೆ ರಜನಿ ಅವರು ಹಣ ತರದೇ ಇದ್ದಾಗ, ಆಕೆಗೆ ಚಿತ್ರಹಿಂಸೆ ನೀಡಲು ಆರಂಭಿಸಿದ್ದಾರೆ. ಶುಕ್ರವಾರ, ರಜನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಂದಿದ್ದಾರೆ. ಸಾಕ್ಷ್ಯಗಳನ್ನು ನಾಶಮಾಡಲು ತಮ್ಮ ಹೊಲದಲ್ಲಿಯೇ ಆಕೆಯ ಮೃತದೇಹವನ್ನು ಮುಚ್ಚಿಹಾಕಿದ್ದಾರೆ” ಎಂದು ವಿವರಿಸಿದ್ದಾರೆ.

ಘಟನೆಯ ಬಗ್ಗೆ ತಿಳಿದ ನಂತರ, ರಜನಿ ಅವರ ತಾಯಿ ಸುನೀತಾ ದೇವಿ ಅವರು ಸಚಿನ್ ಮತ್ತು ಆತನ ಆರು ಮಂದಿ ಕುಟುಂಬಸ್ಥರ ವಿರುದ್ಧ ಒಂಚಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಥಾಸ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

ಅಮೆರಿಕ: ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನ ಡೆಂಟನ್‌ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ....

Download Eedina App Android / iOS

X