ತಮಿಳುನಾಡು ಕಲಾಪದಲ್ಲಿ ಹೈಡ್ರಾಮಾ: ಸ್ಟಾಲಿನ್ ಅಣಕಿಸಿದ ಸಿಎಂ ವಿಜಯ್, ಡಿಎಂಕೆ ಸಭಾತ್ಯಾಗ

Date:

ತಮಿಳುನಾಡು ವಿಧಾನಸಭೆಯಲ್ಲಿ ಇಂದು (ಜೂನ್ 23) ತೀವ್ರ ಜಟಾಪಟಿ ಹಾಗೂ ಹೈಡ್ರಾಮಾ ನಡೆದಿದೆ. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ‘ಪಕ್ಷದ ನಿಧಿ’ಯ ಹೆಸರಿನಲ್ಲಿ ನಡೆದ ಭ್ರಷ್ಟಾಚಾರದ ಕುರಿತು ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೈ ಸನ್ನೆಯನ್ನು ಸಿಎಂ ವಿಜಯ್ ಅಣಕಿಸಿದ್ದು, ಇದರಿಂದ ಕೆರಳಿದ ಡಿಎಂಕೆ ಶಾಸಕರು ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದ್ದಾರೆ.

- Advertisement -

ಆಡಳಿತಾರೂಢ ತಮಿಳು ವೆಟ್ರಿ ಕಳಗಂ (ಟಿವಿಕೆ) ಹಾಗೂ ಪ್ರಮುಖ ಪ್ರತಿಪಕ್ಷವಾದ ಡಿಎಂಕೆ ನಡುವೆ ನೇರ ವಾಕ್ಸಮರಕ್ಕೆ ಸದನ ಸಾಕ್ಷಿಯಾಯಿತು. ಡಿಎಂಕೆ ಆಡಳಿತಾವಧಿಯನ್ನು ಕಟುವಾಗಿ ಟೀಕಿಸಿದ ಮುಖ್ಯಮಂತ್ರಿ ವಿಜಯ್, “ಒಂದರ ಹಿಂದೊಂದು ಭ್ರಷ್ಟಾಚಾರ ಎಸಗಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದೇ ಆಡಳಿತಾತ್ಮಕ ದಕ್ಷತೆ ಎಂದಾದರೆ, ನಮ್ಮ ಸರ್ಕಾರ ಎಂದಿಗೂ ಅಂತಹ ಭ್ರಷ್ಟ ಆಡಳಿತಾತ್ಮಕ ಅಭ್ಯಾಸಗಳಲ್ಲಿ ತೊಡಗುವುದಿಲ್ಲ. ಪಕ್ಷದ ನಿಧಿಯ ಹೆಸರಿನಲ್ಲಿ ಟಾಸ್ಮ್ಯಾಕ್‌ನಿಂದ (TASMAC) ಲೂಟಿ ಮಾಡಿದ ಹಣವನ್ನು ಈಗ ಸರ್ಕಾರದ ಬೊಕ್ಕಸಕ್ಕೆ ಮರಳಿ ತರಲಾಗುತ್ತಿದೆ,” ಎಂದು ಗುಡುಗಿದರು. ಸಾರ್ವಜನಿಕರ ಹಣವನ್ನು ಲೂಟಿ ಮಾಡಲು ಬಿಡುವುದಿಲ್ಲ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಇದನ್ನು ಓದಿದ್ದೀರಾ? WhatsApp ಜಾಗತಿಕ ಮುಖ್ಯಸ್ಥರಾಗಿ ‘ಕ್ರೆಡ್’ ಸಂಸ್ಥಾಪಕ ಕುನಾಲ್ ಶಾ ನೇಮಕ

ಮುಖ್ಯಮಂತ್ರಿಯವರ ಈ ಗಂಭೀರ ಆರೋಪಗಳ ಬೆನ್ನಲ್ಲೇ, ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಡಿಎಂಕೆ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಸಿಎಂ ಭಾಷಣದ ನಡುವೆಯೇ ಎದ್ದುನಿಂತ ಡಿಎಂಕೆ ನಾಯಕರು, ‘ಪಾಯಿಂಟ್ ಆಫ್ ಆರ್ಡರ್’ ಅಡಿ ಉದಯನಿಧಿ ಸ್ಟಾಲಿನ್ ಅವರಿಗೆ ಮಾತನಾಡಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದರು. ಇದೇ ವೇಳೆ, ವಿಜಯ್ ಅವರು ಮಾಜಿ ಸಿಎಂ ಎಂ.ಕೆ. ಸ್ಟಾಲಿನ್ ಅವರ ವೈರಲ್ ಆಗಿದ್ದ ಕೈಸನ್ನೆಯನ್ನು ಅಣಕಿಸಿದ್ದು ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುವಂತೆ ಮಾಡಿತು. ಸಭಾಧ್ಯಕ್ಷ ಜೆ.ಸಿ.ಡಿ. ಪ್ರಭಾಕರ್ ಅವರು, “ಮುಖ್ಯಮಂತ್ರಿಯವರ ಭಾಷಣ ಮುಗಿದ ನಂತರ ಪ್ರತಿಪಕ್ಷ ನಾಯಕರಿಗೆ ಅವಕಾಶ ನೀಡಲಾಗುವುದು, ದಯವಿಟ್ಟು ಭಾಷಣ ಪೂರ್ಣಗೊಳಿಸಲು ಬಿಡಿ,” ಎಂದು ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಡಿಎಂಕೆ ಸದಸ್ಯರು, ತಮಗೆ ತಕ್ಷಣವೇ ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಕೊನೆಗೆ ಸಭಾತ್ಯಾಗ ಮಾಡಿದರು.

ಇದೇ ವೇಳೆ, ಆಡಳಿತ ಪಕ್ಷವು ಮಿತ್ರಪಕ್ಷಗಳನ್ನು ಸೆಳೆಯಲು ‘ಕುದುರೆ ವ್ಯಾಪಾರ’ ನಡೆಸಿದೆ ಎಂಬ ಡಿಎಂಕೆ ಆರೋಪಗಳನ್ನೂ ಮುಖ್ಯಮಂತ್ರಿ ವಿಜಯ್ ಸಾರಾಸಗಟಾಗಿ ತಳ್ಳಿಹಾಕಿದರು. “ಸಿಪಿಐ(ಎಂ) ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷಗಳು ಸ್ವತಂತ್ರವಾಗಿ ತಮ್ಮ ನಿರ್ಧಾರಗಳನ್ನು ತೆಗೆದುಕೊಂಡಿವೆ,” ಎಂದು ಅವರು ಸ್ಪಷ್ಟಪಡಿಸಿದರು. ಜೊತೆಗೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಮಾದಕವಸ್ತು ಹಾವಳಿಯ ಬಗ್ಗೆ ಡಿಎಂಕೆ ಮಾಡುತ್ತಿರುವ ಟೀಕೆಗಳು ಸಂಪೂರ್ಣ ‘ರಾಜಕೀಯ ಪ್ರೇರಿತ’. ಮಹಿಳೆಯರ ರಕ್ಷಣೆ ಮತ್ತು ಮಾದಕ ದ್ರವ್ಯಗಳ ಜಾಲವನ್ನು ಮಟ್ಟಹಾಕಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ವಿಜಯ್ ಸದನದಲ್ಲಿ ಸಮರ್ಥಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯುಕ್ತರ ನೇಮಕ ಕಾಯ್ದೆ: ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಕುರಿತು ಸುಪ್ರೀಂ ಭಿನ್ನಮತದ ತೀರ್ಪು

ಚುನಾವಣಾ ಆಯುಕ್ತರ ನೇಮಕ ಕಾಯ್ದೆ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ...

ವಿಜಯಪುರ | ಬರ ಘೋಷಣೆ ಮಾಡದ್ದಕ್ಕೆ ಅಸಮಾಧಾನ: ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ...

ರಾಜ್ಯದ 30% ಕಾಫಿ ತೋಟಗಳು ಅರಣ್ಯ ಭೂಮಿ ಒತ್ತುವರಿ? – ಸರ್ಕಾರದ ನೂತನ ಸರ್ವೆ ಆದೇಶದಿಂದ ಬೆಳೆಗಾರರಲ್ಲಿ ಆತಂಕ!

ರಾಜ್ಯದಲ್ಲಿರುವ ಒಟ್ಟು ಕಾಫಿ ಎಸ್ಟೇಟ್‌ಗಳ ಪೈಕಿ ಸುಮಾರು ಶೇಕಡ 30ರಷ್ಟು ಭಾಗವು...

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ ತಂತ್ರವೋ?

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್...