ನನ್ನ ವೋಟರ್ ಐಡಿ ಡಿಲೀಟ್ ಮಾಡಲು ನಾಟಕ: ಚುನಾವಣಾ ಆಯೋಗ, ಮಾಧ್ಯಮಗಳ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ

Date:

ತಮ್ಮ ಮತದಾರರ ಗುರುತಿನ ಚೀಟಿಯಯನ್ನು ‘ಪರ್ಮನೆಂಟ್ಲಿ ಶಿಫ್ಟೆಡ್’ ಎಂದು ಉಲ್ಲೇಖಿಸಿ, ಮತದಾನದ ಹಕ್ಕನ್ನು ಕಸಿಯಲು ಯತ್ನಿಸಲಾಗುತ್ತಿದೆ ಎಂದು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಚುನಾವಣಾ ಆಯೋಗದ (ECI) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಯೋಗದ ನಡವಳಿಕೆ ಹಾಗೂ ಮಾಧ್ಯಮಗಳ ಏಕಪಕ್ಷೀಯ ವರದಿಗಾರಿಕೆಯನ್ನು ಕಟುವಾಗಿ ಪ್ರಶ್ನಿಸಿದ್ದಾರೆ.

- Advertisement -

ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ನಟ ಪ್ರಕಾಶ್ ರಾಜ್, “ನನ್ನ ಮತದಾರರ ಗುರುತಿನ ಚೀಟಿಯನ್ನು ‘ಪರ್ಮನೆಂಟ್ಲಿ ಶಿಫ್ಟೆಡ್’ ಎಂದು ನಮೂದಿಸಿರುವುದರ ಹಿಂದಿನ ಉದ್ದೇಶವೇನು? ಇದರರ್ಥ ಮತದಾನದ ಹಕ್ಕನ್ನು ಡಿಲೀಟ್ ಮಾಡಲಾಗಿದೆಯೇ? ಹೊಸ ವೋಟರ್ ಐಡಿಗಾಗಿ ಮತ್ತೆ ಫಾರ್ಮ್ 6 ಭರ್ತಿ ಮಾಡಲು ಹೇಳುತ್ತಿರುವುದು ಎಷ್ಟು ಸಮಂಜಸ” ಎಂದು ಆಯೋಗವನ್ನು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ನಾಪತ್ತೆ: ತಾವೇ ಸ್ಪರ್ಧಿಸಿದ್ದ ಕ್ಷೇತ್ರದಲ್ಲಿ ಮತದಾನದ ಹಕ್ಕಿಲ್ಲ ಎಂದ ನಟ

ಈ ಹಿಂದೆ ಈ ವಿಚಾರವನ್ನು ಬಹಿರಂಗಪಡಿಸಿ ವಿಡಿಯೋ ವೈರಲ್ ಆದಾಗ, ತಪ್ಪುಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿ, ಆಯೋಗದಿಂದಲೇ ಸರಿಪಡಿಸಲಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕುವಂತೆ ಅಧಿಕಾರಿಗಳೇ ಹೇಳಿದ್ದರೆಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಕರೆಗಳ ಧ್ವನಿಮುದ್ರಿಕೆ (Recording) ತಮ್ಮ ಬಳಿ ಇದೆ ಎಂದು ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ.

ಆದರೆ ಸಂಜೆಯ ವೇಳೆ ಪತ್ರಿಕಾಗೋಷ್ಠಿ ನಡೆಸಿ ‘ಪರ್ಮನೆಂಟ್ಲಿ ಶಿಫ್ಟೆಡ್’ ಬದಲಿಗೆ ‘ಶಿಫ್ಟೆಡ್’ ಎಂದು ಬದಲಾಯಿಸಲಾಗಿದೆ ಹಾಗೂ ಸ್ಥಳ ಪರಿಶೀಲನೆ (ಮಹಜರು) ಮಾಡಲಾಗಿದೆ ಎಂದು ಆಯೋಗ ಹೇಳಿತ್ತು. ಆದರೆ ವಿಷಯ ಕೈತಪ್ಪಿ ಹೋಗುತ್ತಿದೆ ಎಂದು ತಿಳಿಯುತ್ತಿದ್ದಂತೆ ರಾತ್ರಿ 8:30ರ ಸುಮಾರಿಗೆ ಬಿಎಲ್‌ಒ (BLO) ಅವರನ್ನು ಹಳೆಯ ವಿಳಾಸಕ್ಕೆ ಕಳುಹಿಸಿ ಮತ್ತೆ ಮಹಜರು ಮಾಡುವ ನಾಟಕವಾಡಿದೆ ಎಂದು ಪ್ರಕಾಶ್ ರಾಜ್ ದೂರಿದ್ದಾರೆ.

ಆಯೋಗವು ಈ ವಿಚಾರವನ್ನು ಕೆಲವು ಮಾಧ್ಯಮಗಳಿಗೆ ನೀಡಿ ತಮ್ಮ ವಿರುದ್ಧ ತಪ್ಪು ವರದಿಗಳನ್ನು ಪ್ರಸಾರ ಮಾಡಿಸುತ್ತಿದೆ ಎಂದು ಆರೋಪಿಸಿದ ಅವರು, “ನಾನು ಸೆಲೆಬ್ರಿಟಿಯಾಗಿದ್ದರೂ ಒಬ್ಬ ಸಾಮಾನ್ಯ ಪ್ರಜೆಯಾಗಿ ಎಲ್ಲರಂತೆ ಸಮಾನ. ಸಾಮಾನ್ಯ ಜನರಿಗೂ ಆಯೋಗ ಹೀಗೆಯೇ ಮಾಡುತ್ತದೆಯೇ? ಇದು ಪ್ರತಿಯೊಬ್ಬ ನಾಗರಿಕನ ಘನತೆಗೆ ಸಂಬಂಧಿಸಿದ ಹೋರಾಟ” ಎಂದಿದ್ದಾರೆ.

ಐದು ವರ್ಷಕ್ಕೊಮ್ಮೆ ಮತಕ್ಕಾಗಿ ಮನೆ ಬಾಗಿಲಿಗೆ ಬರುವವರು, ಈಗ ನಾಗರಿಕರು ತಮ್ಮ ಮತದ ಹಕ್ಕಿಗಾಗಿ ಸಾಲಿನಲ್ಲಿ ನಿಂತು ಬೇಡುವಂತೆ ಮಾಡುತ್ತಿದ್ದಾರೆ. ಇದರ ಹಿಂದಿರುವ ಅಜೆಂಡಾ ಏನು ಎಂದು ತಮ್ಮ ‘ಜಸ್ಟ್ ಆಸ್ಕಿಂಗ್’ (Just Asking) ಶೈಲಿಯಲ್ಲಿ ಪ್ರಕಾಶ್ ರಾಜ್ ಪ್ರಶ್ನಿಸಿದ್ದಾರೆ.

ಈ ವೀಡಿಯೋ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...