ದೃಶ್ಯಂ ಸಿನಿಮಾ ಪ್ರೇರಣೆ | ಗಂಡನನ್ನು ಕೊಲೆ ಮಾಡಿ ಶವವನ್ನು ಮನೆಯಲ್ಲೇ ಹೂತಿಟ್ಟ ಪತ್ನಿ

Date:

ಜೀತು ಜೋಸೆಫ್‌ ನಿರ್ದೇಶನದಲ್ಲಿ 2013ರಲ್ಲಿ ಮಲಯಾಳಂ ಸಿನಿಮಾ ದೃಶ್ಯಂ ತೆರೆಗೆ ಬಂದಿತ್ತು. ಈ ಚಿತ್ರ ಸೂಪರ್‌ ಹಿಟ್‌ ಆದ ನಂತರ ದಕ್ಷಿಣ ಭಾರತ ಹಾಗೂ ಹಿಂದಿಯಲ್ಲಿ ರಿಮೇಕ್‌ಗಳಾಗಿ ಸೂಪರ್‌ ಹಿಟ್‌ ಆಗಿದ್ದವು. ಕೊಲೆ ಮಾಡಿ ಶವವನ್ನು ಹೂತ್ತಿಟ್ಟದ ಕತೆ ಅದಾಗಿತ್ತು. ಈಗ ಅದೇ ಸಿನಿಮಾ ರೀತಿಯಲ್ಲಿ ಮಹಾರಾಷ್ಟ್ರದಲ್ಲಿ ಅಪರಾಧ ಕೃತ್ಯವೊಂದು ವರದಿಯಾಗಿದೆ.

- Advertisement -

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಸ್ನೇಹಿತನ ಸಹಾಯದಿಂದ ತನ್ನ ಗಂಡನನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಿಜಯ್‌ ಚವಾಣ್‌ – ಕೋಮಲ್‌ ಚವಾಣ್‌ ದಂಪತಿಗೆ 8 ವರ್ಷದ ಪುತ್ರನಿದ್ದಾನೆ. 35 ವರ್ಷದ ವಿಜಯ್ ಚವಾಣ್ ಕಳೆದ 15 ದಿನಗಳಿಂದ ಕಾಣೆಯಾಗಿದ್ದರು. ಅವರು ಮುಂಬೈನಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ನಲಸೋಪರ ಪೂರ್ವದ ಗದ್ಗಪದ ಪ್ರದೇಶದಲ್ಲಿ ತಮ್ಮ 28 ವರ್ಷದ ಪತ್ನಿ ಕೋಮಲ್ ಚವಾಣ್ ಅವರೊಂದಿಗೆ ವಾಸಿಸುತ್ತಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ವಿಜಯ್‌ ಕಾಣೆಯಾಗಿದ್ದಾರೆ ಎನ್ನುವುದನ್ನು ಅರಿತ ಅವರ ಸಹೋದರರು ಕಳೆದ ಕೆಲ ದಿನಗಳಿಂದ ಅವರಿಗಾಗಿ ಹುಡಕಾಟ ನಡೆಸುತ್ತಿದ್ದರು. ಸೋಮವಾರ (ಜು.21) ರಂದು ವಿಜಯ್‌ ಅವರ ಸಹೋದರ ಗದ್ಗಪದಲ್ಲಿರುವ ನಿವಾಸಕ್ಕೆ ಬಂದಿದ್ದಾರೆ. ಈ ವೇಳೆ ಮನೆಯ ನೆಲದ ಟೈಲ್ಸ್‌ಗಳ ಕೆಲ ಭಾಗವು ಹೊಸದಾಗಿ ಹಾಕಲ್ಪಟ್ಟಿದ್ದು ಮತ್ತು ಬಣ್ಣದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿರುವುದನ್ನು ಗಮನಿಸಿದ್ದಾರೆ. ಟೈಲ್ಸ್‌ ಎತ್ತಿ ಪರಿಶೀಲಿಸಿದಾಗ ಅಲ್ಲಿಂದ ಕೆಟ್ಟ ವಾಸನೆ ಬರಲು ಶುರುವಾಗಿದೆ. ಆ ಬಳಿಕ ಬಟ್ಟೆಯ ತುಂಡೊಂದು ಪತ್ತೆಯಾಗಿದೆ. ಇದರಿಂದ ಅನುಮಾನ ಇನ್ನಷ್ಟು ಹೆಚ್ಚಾಗಿದೆ. ಕೊನೆಗೆ ಇನ್ನಷ್ಟು ಅಳದಲ್ಲಿ ನೋಡಿದಾಗ ಅದರಲ್ಲಿ ವಿಜಯ್‌ ಅವರ ದೇಹ ಹೂತು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಜಯ್‌ ಅವರ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ, ತನಿಖೆ ಶುರುವಾಗಿದೆ. ಕೋಮಲ್‌ ಪಕ್ಕದ ಮನೆಯ ಮೋನು ಎಂಬಾತನ ಜತೆ ಕೆಲ ದಿನಗಳ ಹಿಂದೆ ಹೋಗಿದ್ದು ವಾಪಸ್‌ ಬಾರದ ಹಿನ್ನೆಲೆ ಈ ಕೃತ್ಯವನ್ನು ಅವರಿಬ್ಬರು ಸೇರಿಕೊಂಡು ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಶೌಚಾಲಯದ ಡ್ರೈನೇಜ್ ಮುಚ್ಚಿಹೋಗಿದೆ ಎಂದು ಕೋಮಲ್ ಹೇಳಿಕೊಂಡಿದ್ದರು ಮತ್ತು ಆ ಪ್ರದೇಶವನ್ನು ಅಗೆಯಲು ಕಾರ್ಮಿಕರನ್ನು ಕರೆದಿದ್ದರು ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಅನುಮಾನ ಮತ್ತಷ್ಟು ದೃಢವಾಗಿದೆ. ಸದ್ಯ ಕೋಮಲ್‌ – ಮೋನುಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...