‘insta’ ಫಾಲೋವರ್‍ಸ್ ಕುಸಿತ: ಮಿಶಾ ಅಗರ್ವಾಲ್ ಆತ್ಮಹತ್ಯೆ; ಯುವಜನರ ಗೀಳು ಕುರಿತು ಕಳವಳಗೊಂಡ ತಾಪ್ಸಿ ಪನ್ನು

Date:

ಸಾಮಾಜಿಕ ಜಾಲತಾಣ ವೇದಿಕೆ ‘ಇನ್‌ಸ್ಟಾಗ್ರಾಮ್‌’ನಲ್ಲಿ ತನ್ನ ಫಾಲೋವರ್‌ಗಳ ಸಂಖ್ಯೆ ಕುಸಿದಿದೆ ಎಂಬ ಕಾರಣಕ್ಕೆ ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್ ಮಿಶಾ ಅಗರ್ವಾಲ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ ತಾಪ್ಸಿ ಪನ್ನು, ‘ಇದು ನಾನು ಬಹಳ ದಿನಗಳಿಂದ ಆತಂಕ (ಭಯ) ಪಡುತ್ತಿರುವ ವಿಷಯವಾಗಿದೆ’ ಎಂದಿದ್ದಾರೆ.

- Advertisement -

25 ವರ್ಷ ಹರೆಯದ ಮಿಶಾ ಅಗರ್ವಾಲ್ ಅವರು ಈ ಡಿಜಿಟಲ್ ಯುಗದಲ್ಲಿ ಇನ್‌ಸ್ಟಾಗ್ರಾಮ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಂಟೆಂಟ್‌ ಕ್ರಿಯೇಟ್‌ ಮಾಡಿ, ವಿಡಿಯೋ ಮಾಡುವುದನ್ನೇ ವೃತ್ತಿಯಾಗಿ ಪರಿಗಣಿಸಿದ್ದರು. ಅದರಿಂದ, ಒಂದಷ್ಟು ಸಂಪಾದನೆಯನ್ನೂ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಮಿಲಿಯನ್ (10 ಲಕ್ಷ) ಅನುಯಾಯಿಗಳನ್ನು ಪಡೆಯಬೇಕು ಎಂಬುದು ಅವರ ಗುರಿಯಾಗಿತ್ತು. ಆದರೆ, ಇತ್ತೀಚೆಗೆ ಅವರು ಹಲವಾರು ಫಾಲೋವರ್‌ಗಳನ್ನು ಕಳೆದುಕೊಂಡಿದ್ದರು. ಅಂದರೆ, ಹಲವಾರು ಫಾಲೋವರ್‌ಗಳು ಅವರ ಖಾತೆಯನ್ನು ಅನ್‌ಲೈಕ್ ಮತ್ತು ಅನ್‌ಫಾಲೋ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ಫಾಲೋವರ್‍ಸ್ ಕಳೆದುಕೊಂಡ ಮಿಶಾ ಅಗರ್ವಾಲ್‌ ಅವರು ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟ್ ಮಾಡುವ ತಮ್ಮ ವೃತ್ತಿಜೀವನವು ಅಂತ್ಯಗೊಳ್ಳುತ್ತಿದೆ ಎಂದು ಆತಂಕಗೊಂಡಿದ್ದರು. ಅದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಂಬಂಧಿಗಳು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಶಾಮನೂರು ಹುನ್ನಾರವೇನು? ಕಾಂಗ್ರೆಸ್‌ನಲ್ಲಿ ಕ್ರಮ ಯಾಕಿಲ್ಲ?

ಮಿಶಾ ಅವರ ಸಾವಿನ ಬಗ್ಗೆ ನಟಿ ತಾಪ್ಸಿ ಪನ್ನು ಆತಂಕ ವ್ಯಕ್ತಪಡಿಸಿದ್ದಾರೆ. ಇದೊಂದು ಹೃದಯವಿದ್ರಾವಕ ಘಟನೆ ಎಂದಿದ್ದಾರೆ. ಅಲ್ಲದೆ, ಸಾಮಾಜಿಕ ಮಾಧ್ಯಮಗಳ ಕುರಿತಾಗಿ ಹೆಚ್ಚುತ್ತಿರುವ ಯುವಜನರ ಗೀಳಿನ ಬಗ್ಗೆ ಕಳವಳ ಹೊರಹಾಕಿದ್ದಾರೆ. ಸಾಮಾಜಿಕ ಮಾಧ್ಯಮವು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವಗಳ ಬಗ್ಗೆ ಗಮನ ಸೆಳೆದಿದ್ದಾರೆ.

“ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ಬಹಳಷ್ಟು ಜನರ ಗೀಳನ್ನು ನೋಡಿ ನಾನು ಬಹಳ ದಿನಗಳಿಂದ ಭಯಪಡುತ್ತಿದ್ದೇನೆ. ಇಂತಹದ್ದೊಂದು ದಿನ ಬರುತ್ತವೆ ಎಂಬ ಭಯ ಹಿಂದಿನಿಂದಲೂ ನನ್ನನ್ನು ಕಾಡುತ್ತಿತ್ತು” ಎಂದು ತಾಪ್ಸಿ ಪನ್ನು ಹೇಳಿದ್ದಾರೆ.

“ವರ್ಚುವಲ್ ಪ್ರೀತಿಯ ತೀವ್ರ ಅಗತ್ಯವು ನಿಮ್ಮ ಸುತ್ತಲಿನ ನಿಜವಾದ ಪ್ರೀತಿಯ ಕುರಿತು ನಿಮ್ಮನ್ನು ಕುರುಡಾಗಿಸುತ್ತದೆ ಎಂಬ ಭಯ ಕಾಡುತ್ತಲೇ ಇದೆ. ಈ ತ್ವರಿತ ತೃಪ್ತಿ, ಇಷ್ಟಗಳು ಹಾಗೂ ಕಾಮೆಂಟ್‌ಗಳು ನಿಮ್ಮನ್ನು ಹೆಚ್ಚು ಯೋಗ್ಯರನ್ನಾಗಿ ಮಾಡುವುದಿಲ್ಲ. ಬದಲಾಗಿ, ಮಾನಸಿಕ ರೋಗಿಯನ್ನಾಗಿಸುತ್ತದೆ. ಇಂತಹ ಘಟನೆಗಳನ್ನು ನೋಡುವುದು ಹೃದಯವನ್ನು ಹಿಂಡುತ್ತದೆ” ಎಂದಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...