ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಮತದಾರರನ್ನು ಓಲೈಸುವ ಉದ್ದೇಶದಿಂದ ಇದುವರೆಗೆ 1,760 ಕೋಟಿ ರೂಪಾಯಿ ಮೌಲ್ಯದ ಉಚಿತ ನೀಡಿಕೆ ವಸ್ತುಗಳು, ಡ್ರಗ್ಸ್, ನಗದು, ಮದ್ಯ ಮತ್ತು ಬೆಲೆಬಾಳುವ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.
ಅಕ್ಟೋಬರ್ 9 ರಂದು ಚುನಾವಣೆ ಘೋಷಣೆಯಾದ ದಿನದಿಂದ ಈ ರಾಜ್ಯಗಳಲ್ಲಿ ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ(2018) ವಶಪಡಿಸಿಕೊಳ್ಳಲಾದ ಏಳು ಪಟ್ಟು ಹೆಚ್ಚು (239.15 ಕೋಟಿ ರೂ.) ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’
ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದಿದ್ದರೆ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನವೆಂಬರ್ 25 ಮತ್ತು ನವೆಂಬರ್ 30 ರಂದು ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.