ʼಅಪ್ಪಾ! ನನಗೇನು ಮಾಡಬೇಡಿʼ ಎಂದರೂ ಕೇಳದ ಕುಡುಕ ತಂದೆಯಿಂದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

Date:

Advertisements

ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಮದ್ಯ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜುಲೈ 25ರಂದು ನಡೆದಿದೆ.

11 ವರ್ಷದ ಬಾಲಕಿ 5ನೇ ತರಗತಿಯಲ್ಲಿ ಓದುತ್ತಿದ್ದಳು. ನಾಯಿ ಕಡಿತದ ಘಟನೆಯ ಹಿನ್ನೆಲೆ ಸರ್ಕಾರಿ ಹಾಸ್ಟೆಲ್‌ನಿಂದ ಇತ್ತೀಚೆಗೆ ಮನೆಗೆ ಬಂದಿದ್ದಳು. ಜುಲೈ 25ರಂದು ಮಧ್ಯಾಹ್ನ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಳು, ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಗಳ ಮೇಲೆ ಮದ್ಯ ಕುಡಿದ ಮತ್ತಿನಲ್ಲಿ ಬಂದ ತಂದೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ʼಅಪ್ಪಾ, ನನಗೆ ಏನೂ ಮಾಡಬೇಡಿʼ ಎಂದು ಮಗು ಅಂಗಲಾಚಿದರೂ ಕೇಳದ ತಂದೆ ಮಗಳ ಮೇಲೆ ಹಲ್ಲೆಗೆ ಮುಂದಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ತಿಳಿದು ಬಂದಿದೆ. ಮಗುವಿನ ಕಿರುಚಾಟ ಕೇಳಿದ ಸ್ಥಳೀಯರು ಮನೆಗೆ ಧಾವಿಸಿದರು, ಬಾಲಕಿಗೆ ರಕ್ತಸ್ರಾವ ಆಗುತ್ತಿರುವುದನ್ನು ಕಂಡು ಬಾಲಕಿಯ ತಾಯಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಬಾಲಕಿಯನ್ನು ಮಹೆಬೂಬ್‌ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ಚಿಕಿತ್ಸೆ ನೀಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮಾರಿಕಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ಮತ್ತು ನಂತರ ಮಹೆಬೂಬ್‌ನಗರ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ʼಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಾರಿಕಲ್‌ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕೃತ್ಯ ಎಸಗಿದ ತಂದೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ʼಈದಿನʼಕ್ಕೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ | ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ...

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಭಾರತದಲ್ಲಿ ಪ್ರತಿ ಗಂಟೆಗೆ ಓರ್ವ ರೈತ ಆತ್ಮಹತ್ಯೆ: NCRB ವರದಿ

ಭಾರತದಲ್ಲಿನ ಅಪರಾಧ ಪ್ರಕರಣಗಳ ಕುರಿತಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)...

Download Eedina App Android / iOS

X