ತಿರುಪತಿ ದೇಗುಲದ ಗೋಪುರ ಏರಿ ಮದ್ಯಕ್ಕಾಗಿ ಪಟ್ಟು ಹಿಡಿದ ಯುವಕ; ಪೊಲೀಸರಿಂದ 3 ಗಂಟೆ ಹರಸಾಹಸ

Date:

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾದ ರಾತ್ರಿ ಭದ್ರತಾ ಲೋಪ ಉಂಟಾದ ಘಟನೆಯೊಂದು ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ದೇಗುಲದ ರಾಜಗೋಪುರವನ್ನು ಏರಿ ಹೈಡ್ರಾಮಾ ಸೃಷ್ಟಿಸಿದ್ದಾನೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಒಳನುಗ್ಗಿದ ಈತ, ಗೋಪುರದ ಮೇಲಿದ್ದ ಕಳಶಗಳಿಗೆ ಹಾನಿ ಮಾಡಿದ್ದಲ್ಲದೆ, ತನಗೆ ಮದ್ಯ ತಂದುಕೊಟ್ಟರೆ ಮಾತ್ರ ಕೆಳಗೆ ಇಳಿಯುವುದಾಗಿ ಪಟ್ಟು ಹಿಡಿದಿದ್ದಾನೆ.

- Advertisement -

ಶುಕ್ರವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ, ದೇಗುಲದಲ್ಲಿ ‘ಏಕಾಂತ ಸೇವೆ’ ಮುಕ್ತಾಯಗೊಂಡ ಬೆನ್ನಲ್ಲೇ ಈ ಘಟನೆ ಸಂಭವಿಸಿದೆ. ಭದ್ರತಾ ವಲಯವನ್ನು ಭೇದಿಸಿ, ಕಾಂಪೌಂಡ್ ಗೋಡೆ ಹಾರಿದ ಆಗಂತುಕ, ಮಹಾದ್ವಾರದ ಸಮೀಪವಿರುವ ಗೋಪುರವನ್ನು ಸರಸರನೆ ಏರಿದ್ದಾನೆ. ಈ ವೇಳೆ ಆತ ಎರಡು ಕಳಶಗಳನ್ನು ಭಾಗಶಃ ಜಖಂಗೊಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ವಿಷಯ ತಿಳಿದು ಸ್ಥಳಕ್ಕೆ ದಾವಿಸಿದ ತಿರುಪತಿ ಪೂರ್ವ ವಿಭಾಗದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ವ್ಯಕ್ತಿಯನ್ನು ಕೆಳಗೆ ಇಳಿಯುವಂತೆ ಮನವೊಲಿಸಲು ಯತ್ನಿಸಿದರು. ಆದರೆ, ಇದಕ್ಕೆ ಜಗ್ಗದ ಆತ, “ನನಗೆ ಕುಡಿಯಲು ಮದ್ಯ ನೀಡಿದರೆ ಮಾತ್ರ ನಾನು ಕೆಳಗೆ ಬರುತ್ತೇನೆ, ಇಲ್ಲದಿದ್ದರೆ ಇಲ್ಲೇ ಇರುತ್ತೇನೆ,” ಎಂದು ಕೂಗಾಡುತ್ತಾ ಅವಾಂತರ ಸೃಷ್ಟಿಸಿದ್ದಾನೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್‌; ಕರ್ನಾಟಕದ ಕಳಂಕ!

​ಸುಮಾರು ಮೂರು ಗಂಟೆಗಳ ಕಾಲ ನಡೆದ ಹಗ್ಗ-ಜಗ್ಗಾಟದ ನಂತರ, ಅಗ್ನಿಶಾಮಕ ಸಿಬ್ಬಂದಿ ಕಬ್ಬಿಣದ ಏಣಿಗಳನ್ನು ಅಳವಡಿಸಿ ಗೋಪುರವನ್ನು ಏರಿದರು. ನಂತರ ಹಗ್ಗದ ಸಹಾಯದಿಂದ ಆತನನ್ನು ಬಂಧಿಸಿ, ಸುರಕ್ಷಿತವಾಗಿ ಕೆಳಗೆ ಕರೆತರುವಲ್ಲಿ ಯಶಸ್ವಿಯಾದರು.

ಬಂಧಿತ ವ್ಯಕ್ತಿಯನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕೂರ್ಮಾವಾಡಾ ನಿವಾಸಿ ‘ಕುಟ್ಟಾಡಿ ತಿರುಪತಿ’ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತಾನು ಮದ್ಯ ಸೇವಿಸಿರುವುದಾಗಿ ಹಾಗೂ ಅಮಲಿನಲ್ಲಿ ಈ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ತಿರುಪತಿ ಪೂರ್ವ ಡಿವೈಎಸ್‌ಪಿ ಭಕ್ತವತ್ಸಲಂ, “ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅತಿಸೂಕ್ಷ್ಮ ವಲಯದಲ್ಲಿ ಭದ್ರತಾ ಲೋಪ ಉಂಟಾಗಿದ್ದು ಹೇಗೆ ಎಂಬ ಬಗ್ಗೆಯೂ ಸಮಗ್ರ ತನಿಖೆ ನಡೆಸಲಾಗುವುದು,” ಎಂದು ತಿಳಿಸಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಕಳಶಗಳಿಗೆ ಆಗಿರುವ ಹಾನಿಯ ಬಗ್ಗೆ ದೇಗುಲದ ಅಧಿಕಾರಿಗಳು ಮೌಲ್ಯಮಾಪನ ನಡೆಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...