ಸ್ವಯಂ ಘೋಷಿತ ದೇವಮಾನವನಿಂದ ಕಿರುಕುಳ; ವ್ಯಕ್ತಿ ಆತ್ಮಹತ್ಯೆ

Date:

ಸ್ವಯಂ ಘೋಷಿತ ದೇವಮಾನವನ ಕಿರುಕುಳದಿಂದ ಬೇಸತ್ತು 30 ವರ್ಷದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಭೋಕರ್ದನ್ ತಹಸಿಲ್‌ನ ವಾಲ್ಸಾ ವಡಾಲಾ ಗ್ರಾಮದಲ್ಲಿ ಸೋಮವಾರ ನಡೆದಿದೆ.

- Advertisement -

ಈ ಘಟನೆಗೆ ಸಂಬಂಧಿಸಿದಂತೆ ತನ್ನನ್ನು ತಾನು ದೇವಮಾನವ ಎಂದು ಕರೆದುಕೊಳ್ಳುವ 45 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಕಿರಣ್ ಬಿಡ್ವೆ ತಿಳಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವಮಾನವನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದನ್ನು ಓದಿದ್ದೀರಾ? ಜನ ಮರುಳೋ ಜಾತ್ರೆ ಮರುಳೋ; ಸ್ವಯಂಘೋಷಿತ ದೇವಮಾನವನ ಪಾದ ಮುಟ್ಟಲು ಪ್ರಾಣತೆತ್ತ ಜನರು

ಈ ಬಗ್ಗೆ ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಮತ್ತು ಆತನ ಪತ್ನಿ ನೆರೆಯ ಬುಲ್ದಾನಾ ಜಿಲ್ಲೆಯ ಧಮಂಗಾವ್‌ನಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಆರೋಪಿ ಸ್ವಯಂ ಘೋಷಿತ ದೇವಮಾನವನನ್ನು ಭೇಟಿಯಾಗಿದ್ದಾರೆ ಎಂದು ಹೇಳಲಾಗಿದೆ.

ಈ ಭೇಟಿಯ ಬಳಿಕ ಆರೋಪಿಯು ನಿರಂತರವಾಗಿ ದಂಪತಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಆಗಾಗ್ಗೆ ದಂಪತಿಗೆ ಕರೆ ಮಾಡಿ ಏನೇನೋ ಬೇಡಿಕೆ ಮುಂದಿಡುತ್ತಿದ್ದನು ಎಂದು ಹೇಳಲಾಗಿದೆ. ಈ ದಂಪತಿಯ ಪುತ್ರಿ ವಾಸ್ತವವಾಗಿ ತನಗೆ ಸೇರಿದವಳು, ತನ್ನವಳು. ಹಾಗಾಗಿ ಆಕೆಯನ್ನು ತನಗೆ ನೀಡಬೇಕು ಎಂದು ದಂಪತಿಗೆ ಒತ್ತಡ ಹೇರಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಹಸು ಕಳ್ಳಸಾಗಣೆ ಶಂಕೆ; ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋ ರಕ್ಷಕರು

ದಂಪತಿಗಳು ತಮ್ಮ ಮಗಳನ್ನು ಸ್ವಯಂ ಘೋಷಿತ ದೇವಮಾನವನಿಗೆ ನೀಡಲು ನಿರಾಕರಿಸಿದಾಗ ಆರೋಪಿಯು ದಂಪತಿಗೆ ಬೆದರಿಕೆ ಹಾಕಲು ಆರಂಭಿಸಿದ್ದಾನೆ. ಮೃತ ವ್ಯಕ್ತಿಯ ಪತ್ನಿಗೆ ಕಿರಕುಳ ನೀಡಲು ಪ್ರಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಿರಂತರ ಕಿರಕುಳವನ್ನು ಸಹಿಸಲಾಗದೆ ವ್ಯಕ್ತಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ಮಂಗಳವಾರ ಬುಲ್ಧಾನಾದ ಗುಮ್ಮಿ ಗ್ರಾಮದಲ್ಲಿ ಬಂಧಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...