ಬಾಬರಿ ಮಸೀದಿ ಕುರಿತ ಹೇಳಿಕೆ ವಿವಾದ: ನಿವೃತ್ತ ಸಿಜೆಐ ಡಿ ವೈ ಚಂದ್ರಚೂಡ್ ಸ್ಪಷ್ಟೀಕರಣ

Date:

ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಗುರುವಾರ ಸುಪ್ರೀಂ ಕೋರ್ಟ್‌ನ ಅಯೋಧ್ಯೆ ತೀರ್ಪನ್ನು ಸಾಕ್ಷ್ಯ ಮತ್ತು ಕಾನೂನು ತತ್ವಗಳ ಆಧಾರದ ಮೇಲೆ ನೀಡಲಾಗಿದೆ ಹೊರತು ನಂಬಿಕೆಯ ಆಧಾರದ ಮೇಲೆ ಅಲ್ಲ ಎಂದು ಹೇಳಿದ್ದಾರೆ. ಅದೇ ಸಮಯದಲ್ಲಿ ವಿವಾದಕ್ಕೆ ಕಾರಣವಾದ ಬಾಬರಿ ಮಸೀದಿಯ ಕುರಿತು ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

- Advertisement -

ಮುಂಬೈನಲ್ಲಿ ಸುದ್ದಿ ಮಾಧ್ಯಮದೊಂದಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಚಂದ್ರಚೂಡ್, ʼಬಾಬರಿ ಮಸೀದಿ ನಿರ್ಮಾಣವು ಮೂಲಭೂತವಾಗಿ ಅಪವಿತ್ರ ಕ್ರಿಯೆʼ ಎಂಬ ತಮ್ಮ ಹೇಳಿಕೆ ಕುರಿತ ವಿವಾದವನ್ನು ಪ್ರಸ್ತಾಪಿಸಿದರು. ಅಯೋಧ್ಯೆ ವಿವಾದದ ಕುರಿತು ತಮ್ಮ ಅಭಿಪ್ರಾಯಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಉತ್ತರದ ಒಂದು ಭಾಗವನ್ನು ತೆಗೆದುಕೊಂಡು ಇನ್ನೊಂದು ಭಾಗದೊಂದಿಗೆ ಸೇರಿಸಿ ಸಂದರ್ಭವನ್ನು ಸಂಪೂರ್ಣವಾಗಿ ಬದಲಾಯಿಸುತ್ತಾರೆ” ಎಂದು ಚಂದ್ರಚೂಡ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ದ್ವೇಷ ರಾಜಕಾರಣವನ್ನು ಸದೆಬಡಿಯದಿದ್ದರೆ ಉಳಿಗಾಲವಿಲ್ಲ

ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ತೀರ್ಪು ನೀಡಿದ ಐವರು ನ್ಯಾಯಾಧೀಶರ ಪೀಠದ ಭಾಗವಾಗಿದ್ದ ಚಂದ್ರಚೂಡ್, ಈ ತೀರ್ಪು ಸಾಕ್ಷ್ಯಗಳ ಸಮಗ್ರ ಪರಿಶೀಲನೆಯ ನಂತರ ನೀಡಲಾಗಿದೆ. ಪ್ರಕರಣದ ದಾಖಲೆ 30,000 ಪುಟಗಳಿಗಿಂತ ಹೆಚ್ಚು ಇದ್ದ ಕಾರಣ ತೀರ್ಪು 1,045 ಪುಟಗಳಷ್ಟಿತ್ತು. ಇದನ್ನು ಟೀಕಿಸುವ ಹೆಚ್ಚಿನ ಜನರು ತೀರ್ಪನ್ನು ಓದಿಲ್ಲ. ಪೂರ್ಣ ದಾಖಲೆಯನ್ನು ಓದದೆ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯಗಳನ್ನು ಪೋಸ್ಟ್ ಮಾಡುವುದು ಸುಲಭ ಎಂದು ಹೇಳಿದರು.

ನ್ಯಾಯಾಂಗ ಸ್ವಾತಂತ್ರ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಚಂದ್ರಚೂಡ್ ಆತಂಕ ವ್ಯಕ್ತಪಡಿಸಿದರು. “ಓರ್ವ ನ್ಯಾಯಾಧೀಶನು ಪ್ರತಿಯೊಂದು ಪ್ರಕರಣವನ್ನೂ ಜನರ ತತ್ವಜ್ಞಾನಕ್ಕೆ ಅನುಸಾರವಾಗಿ ತೀರ್ಮಾನಿಸಬೇಕು ಎಂಬ ನಿರೀಕ್ಷೆ ಇದೆ. ಸರಕಾರದ ವಿರುದ್ಧ ತೀರ್ಪು ಕೊಟ್ಟರೆ ಮಾತ್ರ ಸ್ವತಂತ್ರ ಎಂದು ಹೇಳುತ್ತಾರೆ. ಆದರೆ ಒಂದು ಪ್ರಕರಣದಲ್ಲಾದರೂ ಸರಕಾರದ ಪರ ತೀರ್ಪು ಕೊಟ್ಟರೆ, ತಕ್ಷಣವೇ ಸರಕಾರದ ಪರ ಎಂದು ಟೀಕಿಸುತ್ತಾರೆ ಎಂದು ಹೇಳಿದ್ದಾರೆ. ಅವರು ಸರಕಾರದ ವಿರುದ್ಧ ನೀಡಿದ ಚುನಾವಣಾ ಬಾಂಡ್, ಅಲಿಗಢ್ ಮುಸ್ಲಿಂ ವಿವಿಗೆ ಸಂಬಂಧಿಸಿದ ಪ್ರಕರಣ, ಆಧಾರ್ ತೀರ್ಪು ಅನ್ನು ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...