ಕೇಂದ್ರ ಸರ್ಕಾರದ ಸಬ್ಸಿಡಿ ಕಡಿತ; ಎಲೆಕ್ಟ್ರಿಕ್ ಸ್ಕೂಟರ್ ದುಬಾರಿ!

Date:

ಕೇಂದ್ರ  ಸರ್ಕಾರ ಸಬ್ಸಿಡಿಯನ್ನು ಕಡಿತಗೊಳಿಸಿದ ಪರಿಣಾಮ ಗುರುವಾರದಿಂದ (ಜೂನ್‌ 1) ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದೆ.  

- Advertisement -

ಕೇಂದ್ರದ ಭಾರೀ ಕೈಗಾರಿಕೆಗಳ ಸಚಿವಾಲಯವು ಎಲೆಕ್ಟ್ರಿಕ್ ಸ್ಕೂಟರ್​ಗಳಿಗೆ ನೀಡುತ್ತಿದ್ದ ಫೇಮ್​-2 (ಫಾಸ್ಟರ್ ಅಡಾಪ್ಷನ್, ಮ್ಯಾನುಫ್ಯಾಕ್ಚರಿಂಗ್ ಆಫ್ ಎಲೆಕ್ಟ್ರಿಕ್ & ಹೈಬ್ರಿಡ್ ವೆಹಿಕಲ್ಸ್ ಇನ್ ಇಂಡಿಯಾ ಸ್ಕೀಮ್) ಸಬ್ಸಿಡಿಯನ್ನು ಕಡಿತಗೊಳಿಸಿದೆ. ಈ ಮಹತ್ವದ ನಿರ್ಧಾರದಿಂದಾಗಿ ಎಲೆಕ್ಟ್ರಿಕ್ ವಾಹನಗಳ ದರದಲ್ಲಿ ಭಾರೀ ಬದಲಾವಣೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಕೇಂದ್ರವು ಗರಿಷ್ಠ ಸಬ್ಸಿಡಿ ಮಿತಿಯನ್ನು ಶೇ.40ರಿಂದ ಶೇ.15ಕ್ಕೆ ಇಳಿಸಿದೆ. ಫೇಮ್​-2 ಅಡಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ನೀಡಿರುವ 15,000 ರೂಪಾಯಿ ಸಬ್ಸಿಡಿಯನ್ನು ಇದೀಗ 10,000 ರೂಪಾಯಿಗೆ ಕಡಿತಗೊಳಿಸಲಾಗಿದೆ. ಹೀಗಾಗಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಗ್ರಾಹಕನಿಗೆ 5,000 ರೂಪಾಯಿ ಹೊರೆಯಾಗಲಿದೆ. ಎಕ್ಸ್ ಶೋ ರೂಂ ಬೆಲೆ ಮೇಲೆ ಗರಿಷ್ಠ 15 ಶೇಕಡಾ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಓಲಾ ಎಲೆಕ್ಟ್ರಿಕ್, ಏಥರ್ ಎನರ್ಜಿ, ಬಜಾಜ್ ಆಟೋ ಸೇರಿದಂತೆ ಪ್ರಮುಖ ಇವಿ ತಯಾರಕರು ತಮ್ಮ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಎಲೆಕ್ಟ್ರಿಕ್ ಸ್ಕೂಟರ್ ಗಳ ಬೆಲೆ ರೂ.25,000ದಿಂದ ರೂ.35,000ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ?: ಲೋಕಸಭೆಯಿಂದ ವಜಾಗೊಳ್ಳುವ ಕಲ್ಪನೆಯೂ ಇರಲಿಲ್ಲ : ರಾಹುಲ್‌ ಗಾಂಧಿ

ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪನಿಗಳು ಕೇಂದ್ರ ಸರ್ಕಾರದ ಸಬ್ಸಿಡಿ ಕಡಿತ ನಿರ್ಧಾರವನ್ನು ವಿರೋಧಿಸಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ನಿಧಾನವಾಗಿ ಹೆಚ್ಚಳವಾಗುತ್ತಿದೆ. ಇಂಧನ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಮಾರಾಟ ಅತೀ ಕಡಿಮೆ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಸಬ್ಸಿಡಿ ಕಡಿತಗೊಳಿಸಿದರೆ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಇದರಿಂದ ಎಲಕ್ಟ್ರಿಕ್ ವಾಹನ ಮಾರಾಟ ಮತ್ತಷ್ಟು ಕುಸಿತಗೊಳ್ಳಲಿದೆ ಎಂದು ಎಲೆಕ್ಟ್ರಿಕ್ ವಾಹನ ಕಂಪನಿಗಳು ಹೇಳಿವೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳ ಪ್ರಸ್ತುತ ಬೆಲೆಗಳು

ಪ್ರಸ್ತುತ ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ರೂ. 98,079 ರಿಂದ ರೂ. 1.28 ಲಕ್ಷದವರೆಗೆ ಇದೆ. ಬಜಾಜ್ ಚೇತಕ್ ಬೆಲೆ ರೂ. 1.22 ಲಕ್ಷದಿಂದ ರೂ. 1.52 ಲಕ್ಷ, ಟಿವಿಎಸ್ ಐಕ್ಯೂಬ್ ಬೆಲೆ ರೂ. 1.06 ಲಕ್ಷ, ಓಲಾ ಎಸ್1 ಏರ್ ಬೆಲೆ ರೂ. 1.06 ಲಕ್ಷ, ಓಲಾ ಎಸ್1 ಏರ್ ಮತ್ತು ಎಸ್ 1 ಗೆ 91 ಲಕ್ಷ ಮತ್ತು ರೂ. 1.25 ಲಕ್ಷ ಇದೆ. (ಎಕ್ಸ್ ಶೋ ರೂಂ ದೆಹಲಿ).

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಡಿಗೆ ಕಾರು, ಇನ್‌ಸ್ಟಾಗ್ರಾಮ್ ಬಿಲ್ಡಪ್: ಉದ್ಯಮಿ ಸೋಗಿನಲ್ಲಿ ಮಹಿಳಾ ಪೊಲೀಸರಿಗೆ 24 ಲಕ್ಷ ರೂ. ವಂಚನೆ

ಮದುವೆಯಾಗುವ ಆಮಿಷವೊಡ್ಡಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ಗಳಿಂದ ಬರೋಬ್ಬರಿ 24 ಲಕ್ಷ ರೂಪಾಯಿ...

ಶೇರುಪೇಟೆ- ಈ ವಾರದ ನಷ್ಟ 20 ಲಕ್ಷ ಕೋಟಿ! ತೈಲ ಬೆಲೆಗಳ ‘ಕರಡಿ ಕುಣಿತ’ವೇ ಕಾರಣ

ಹಬ್ಬದ ಸಂಭ್ರಮದ ಸಮಯದಲ್ಲಿ ಶೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿದವರು ತೀವ್ರ ನಿರಾಸೆಯನ್ನು...

ಅಮೆರಿಕದ ನಿರ್ಬಂಧ ಭೀತಿ: ಇರಾನ್‌ಗೆ ಔಷಧ ಸಾಗಿಸುವ ನೇರ ವಿಮಾನ ಹಾರಾಟಕ್ಕೆ ಭಾರತ ತಡೆ

ಅಮೆರಿಕ ವಿಧಿಸಬಹುದಾದ ಆರ್ಥಿಕ ನಿರ್ಬಂಧಗಳ ಭೀತಿಯಿಂದಾಗಿ, ಇರಾನ್ ಜತೆಗಿನ ನೇರ ವಿಮಾನಗಳ...