E20 Petrol | ‘ಶುದ್ಧ ಪೆಟ್ರೋಲ್ ನಿಮ್ಮಪ್ಪನ ಮನೆಯಿಂದ ಬರುತ್ತದೆಯೇ’: ನಾಲಿಗೆ ಹರಿಬಿಟ್ಟ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ

Date:

ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣ ಮಾಡುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ದೇಶಾದ್ಯಂತ ವಿರೋಧಗಳು ಕೇಳಿಬರುತ್ತಿವೆ. ಆದರೆ, ಮೋದಿ ಸರ್ಕಾರವು ‘E20 ಪೆಟ್ರೋಲ್‌’ಅನ್ನು ಸಮರ್ಥಿಸಿಕೊಳ್ಳುತ್ತಿದೆ. ಸರ್ಕಾರದ ನಿರ್ಧಾರದ ಪರವಾಗಿ ಎನ್‌ಡಿಎ ಸಂಸದರು ಪ್ರಚಾರ ಮಾಡುತ್ತಿದ್ದಾರೆ. ಇ20 ಪೆಟ್ರೋಲ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವವರ ವಿರುದ್ಧ ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ನಾಲಿಗೆ ಹರಿಬಿಟ್ಟಿದ್ದಾರೆ. ‘ಶುದ್ಧ ಪೆಟ್ರೋಲ್ ಏನಾದರೂ ನಿಮ್ಮಪ್ಪನ ಮನೆಯಿಂದ ಬರುತ್ತದೆಯೇ’ ಎಂದು ಹೇಳಿದ್ದು, ಬಿಜೆಪಿ ವಾಚಾಳಿ ಧೋರಣೆಯನ್ನು ಪ್ರದರ್ಶಿಸಿದ್ದಾರೆ.

- Advertisement -

ರೇವಾದಿಂದ ಭೋಪಾಲ್ ಮತ್ತು ಕೋಲ್ಕತ್ತಾಗೆ ಹೊಸ ವಿಮಾನ ಸೇವೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಿಶ್ರಾ ಮಾತನಾಡಿದ್ದಾರೆ. “ಭಾರತವು ತನ್ನ ಕಚ್ಚಾ ತೈಲದ ಅಗತ್ಯತೆಯ 20%ರಷ್ಟನ್ನು ಮಾತ್ರ ದೇಶೀಯವಾಗಿ ಉತ್ಪಾದಿಸುತ್ತದೆ. ಉಳಿದ 80%ರಷ್ಟನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಪ್ರಸ್ತುತ ಜಾಗತಿಕ ರಾಜಕೀಯ ಉದ್ವಿಗ್ನತೆ ಮತ್ತು ಬಿಕ್ಕಟ್ಟುಗಳ ನಡುವೆ ಗಲ್ಫ್ ರಾಷ್ಟ್ರಗಳಿಂದ ತೈಲವನ್ನು ಭಾರತಕ್ಕೆ ತರಲು ಹಡಗುಗಳು ಹೆಚ್ಚುವರಿಯಾಗಿ ಸುಮಾರು 18,000 ಕಿಲೋಮೀಟರ್ ದೂರ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಇಂತಹ ಕಷ್ಟಕರ ಸನ್ನಿವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್‌ನಲ್ಲಿ 20%ರಷ್ಟು ಎಥನಾಲ್ ಬೆರೆಸುವ ಬಗ್ಗೆ ಮಾತನಾಡಿದರೆ, ಕೆಲವರು ಅದನ್ನು ವಿರೋಧಿಸಲು ಪ್ರಾರಂಭಿಸುತ್ತಾರೆ. ‘ಎಥನಾಲ್ ಕೆಲಸ ಮಾಡುವುದಿಲ್ಲ, ನಮಗೆ ಶುದ್ಧ ಪೆಟ್ರೋಲೇ ಬೇಕು’ ಎನ್ನುತ್ತಿದ್ದಾರೆ. ದೇಶದಲ್ಲಿ ಶುದ್ಧ ಪೆಟ್ರೋಲ್ ಲಭ್ಯವಿಲ್ಲದಿದ್ದಾಗ ಅದು ಎಲ್ಲಿಂದ ಬರಲು ಸಾಧ್ಯ. ಅವರ ಅಪ್ಪನ ಮನೆಯಿಂದ ಬರುತ್ತದೆಯೇ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಭಾರತದಲ್ಲಿರುವ ವಾಹನಗಳು ಎಥನಾಲ್ ಮಿಶ್ರಿತ ಪೆಟ್ರೋಲ್‌ನಲ್ಲಿ ಸುಲಭವಾಗಿ ಚಲಿಸಬಲ್ಲವು. ಆದರೆ, ಕೆಲವರು ಈ ವಿಷಯದಲ್ಲಿ ಸಾರ್ವಜನಿಕರ ಹಾದಿತಪ್ಪಿಸುತ್ತಿದ್ದಾರೆ. ಎಥನಾಲ್ ಉತ್ಪಾದನೆಯಾಗದಿದ್ದರೆ ಪೆಟ್ರೋಲ್ ಮತ್ತು ಡೀಸೆಲ್ ಎಲ್ಲಿಂದ ತರಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಪ್ರಸ್ತುತ, ದೇಶಾದ್ಯಂತ ಪರೀಕ್ಷಾ ಅಕ್ರಮಗಳು ಮತ್ತು ಎಥನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಕೇವಲ ಮೂರು ವರ್ಷಗಳ ಅಲ್ಪಾವಧಿಯಲ್ಲಿ ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣವನ್ನು 10%ನಿಂದ 20%ಗೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಾಹನ ಸವಾರರಿಂದ ತೀವ್ರವಾಗಿ ಖಂಡಿಸಿದ್ದಾರೆ. 20% ಎಥನಾಲ್ ಮಿಶ್ರಿತ ಪೆಟ್ರೋಲ್‌ನಿಂದಾಗಿ ವಾಹನದ ಬಿಡಿಭಾಗಗಳು, ರಬ್ಬರ್ ಉಪಕರಣಗಳು ತ್ವರಿತವಾಗಿ ಹಾನಿಗೊಳಗಾಗುತ್ತವೆ ಎಂಬುದನ್ನು ಸ್ವತಃ ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ.

ಈ ಲೇಖನ ಓದಿದ್ದೀರಾ?: FCRA ತಿದ್ದುಪಡಿ | ವಿದೇಶಿ ದೇಣಿಗೆ ನಿಯಂತ್ರಣವೋ, ಧಾರ್ಮಿಕ ಸಂಸ್ಥೆಗಳ ಮೇಲಿನ ಸರ್ಕಾರಿ ಹಿಡಿತವೋ?

E10 ಪ್ರಮಾಣೀಕೃತ ಅಥವಾ ಹಳೆಯ ವಾಹನಗಳು ಎಥನಾಲ್ ಮಿಶ್ರಣಕ್ಕಾಗಿ ವಿನ್ಯಾಸಗೊಳಿಸದ ಸಾಮಾನ್ಯ ಎಂಜಿನ್‌ಗಳನ್ನು ಹೊಂದಿವೆ. ಈ ವಾಹನಗಳಗೆ ಇ20 ಪೆಟ್ರೋಲ್ ಬಳಸುವುದರಿಂದ ಹಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಮುಖ್ಯವಾಗಿ, ಎಥನಾಲ್‌ನಲ್ಲಿ ನೀರಿನ ಪ್ರಮಾಣ ಹೆಚ್ಚಿರುವುದರಿಂದ ಅದು ಲೋಹಗಳನ್ನು ತುಕ್ಕು ಹಿಡಿಯುವಂತೆ ಮಾಡುತ್ತದೆ. ಇದರಿಂದಾಗಿ E20 ಅಥವಾ ಅದಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣವು ವಾಹನದ ಆಂತರಿಕ ದಹನಕಾರಿ ಎಂಜಿನ್ (ICE) ಬಿಡಿಭಾಗಗಳನ್ನು ಹಾಳುಮಾಡಬಹುದು. ಅಂತೆಯೇ, ವಾಹನಗಳ ಮೈಲೇಜ್‌ನಲ್ಲಿಯೂ 5ರಿಂದ 12%ರಷ್ಟು ಇಳಿಕೆಯಾಗುತ್ತಿದೆ.

ಜೊತೆಗೆ, ಚಳಿಗಾಲದ ಬೆಳಗಿನ ವೇಳೆಯಲ್ಲಿ ಹೆಚ್ಚಿನ ಎಥನಾಲ್ ಹೊಂದಿರುವ ಪೆಟ್ರೋಲ್ ಬಳಸುವ ಸಾಮಾನ್ಯ ಕಾರುಗಳನ್ನು ಸ್ಟಾರ್ಟ್ ಮಾಡುವುದು ಕಷ್ಟವಾಗುತ್ತದೆ. ಏಕೆಂದರೆ ಎಥನಾಲ್ ಉರಿಯಲು ಪೆಟ್ರೋಲ್‌ಗಿಂತ ಹೆಚ್ಚಿನ ತಾಪಮಾನದ ಅಗತ್ಯವಿರುತ್ತದೆ. ಅಂತೆಯೇ, ಎಥನಾಲ್ ಮಿಶ್ರಣ ಹೆಚ್ಚಾದಂತೆಲ್ಲಾ ಎಂಜಿನ್ ಕಾರ್ಯಕ್ಷಮತೆ ತೀವ್ರವಾಗಿ ಕುಸಿಯುತ್ತದೆ ಎಂದು ತಜ್ಞರು ಹೇಳಿದ್ದಾರೆ. ಇದನ್ನು, ಸ್ವತಃ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ ಒಪ್ಪಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...