ಪಬ್ಲಿಕ್ ಕಾರುಗಳಿಂದ ಪೆಟ್ರೋಲ್ ಕಳವು: E20 ಈಗ 420 ಎಂದು ಕೇಂದ್ರದ ವಿರುದ್ಧ ರಾಹುಲ್ ಕಿಡಿ

Date:

ಕೇಂದ್ರ ಸರ್ಕಾರದ E20 ಪೆಟ್ರೋಲ್ ವಿತರಣೆ ಯೋಜನೆಯ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಸಂಗ್ರಹಿಸಿದ ಪೆಟ್ರೋಲ್ ಮಾದರಿಗಳ ಪರೀಕ್ಷಾ ವರದಿಯನ್ನು ಉಲ್ಲೇಖಿಸಿರುವ ಅವರು, ದೇಶದಾದ್ಯಂತ ಮಾರಾಟವಾಗುತ್ತಿರುವ ಇಂಧನದಲ್ಲಿರುವ ಎಥೆನಾಲ್ ಪ್ರಮಾಣದ ಬಗ್ಗೆ ಕೇಂದ್ರ ಸರ್ಕಾರ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

ಶನಿವಾರ ‘ಎಕ್ಸ್’ (ಹಿಂದಿನ ಟ್ವಿಟರ್) ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “E20 ಈಗ 420 ಆಗಿದೆ – ಸಾರ್ವಜನಿಕರ ಕಾರುಗಳಿಂದ ಪೆಟ್ರೋಲ್ ಕದಿಯಲಾಗುತ್ತಿದೆ!” ಎಂದು ಆರೋಪಿಸಿದ್ದಾರೆ. ‘420’ ಎನ್ನುವುದು ವಂಚನೆಗೆ ಸಂಬಂಧಿಸಿದ ಹಳೆಯ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 420 ಅನ್ನು ಉಲ್ಲೇಖಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ಪೆಟ್ರೋಲ್‌ನಲ್ಲಿ ಶೇ 20ರಷ್ಟು ಎಥೆನಾಲ್ ಇದೆ ಎಂದು ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ, ಕರ್ನಾಟಕದ 7 ಜಿಲ್ಲೆಗಳಲ್ಲಿ ಸಂಗ್ರಹಿಸಿದ ಮಾದರಿಗಳನ್ನು ಮಾನ್ಯತೆ ಪಡೆದ ಲ್ಯಾಬ್‌ಗಳಲ್ಲಿ ಪರೀಕ್ಷಿಸಿದಾಗ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ ಎಂದು ಅವರು ತಿಳಿಸಿದ್ದಾರೆ.

“ಫಲಿತಾಂಶಗಳನ್ನು ಗಮನಿಸಿ – 14 ಮಾದರಿಗಳಲ್ಲಿ 11 ಮಾದರಿಗಳಲ್ಲಿ ಶೇ 20ಕ್ಕಿಂತ ಹೆಚ್ಚಿನ ಎಥೆನಾಲ್ ಪತ್ತೆಯಾಗಿದೆ. IOCL ನಲ್ಲಿ 31.2% ಮತ್ತು HPCL ನಲ್ಲಿ 30.5% ಎಥೆನಾಲ್ ಇರುವುದು ದೃಢಪಟ್ಟಿದೆ. ಸರ್ಕಾರಿ ಅಥವಾ ಖಾಸಗಿ ಕಂಪನಿಗಳಾದ IOCL, HPCL, BPCL, Nayara, Shell – ಎಲ್ಲವೂ ನಿಗದಿತ ಮಿತಿಯನ್ನು ಮೀರಿವೆ” ಎಂದು ರಾಹುಲ್ ದೂರಿದ್ದಾರೆ.

ಕಂಪನಿಗಳ ಸ್ವಂತ ಪ್ರಯೋಗಾಲಯಗಳು ಕೂಡ ತಮ್ಮ ವರದಿಗಳಲ್ಲಿ ಎಥೆನಾಲ್ ಪ್ರಮಾಣವನ್ನು ನಮೂದಿಸಿಲ್ಲ. ಇದರರ್ಥ ಸಾರ್ವಜನಿಕರು ದುಬಾರಿ ಪೆಟ್ರೋಲ್‌ಗೆ ಹಣ ಪಾವತಿಸುತ್ತಿದ್ದಾರೆ, ಆದರೆ ಅವರ ವಾಹನದ ಟ್ಯಾಂಕ್‌ಗಳಿಗೆ ಎಥೆನಾಲ್ ತುಂಬಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ನಷ್ಟವಾಗುತ್ತಿದ್ದು, ಹೆಚ್ಚಿನ ಎಥೆನಾಲ್ ಬಳಕೆಯಿಂದ ವಾಹನದ ಮೈಲೇಜ್ ಕಡಿಮೆಯಾಗಿ, ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಪೆಟ್ರೋಲ್ ಬಂಕ್‌ಗಳಲ್ಲಿ ಟ್ಯಾಂಕ್‌ಗೆ ಏನು ತುಂಬಲಾಗುತ್ತಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮೋದಿ ಜೀ, ದಯವಿಟ್ಟು ತಿಳಿಸಿ – ದೇಶದ ವಾಹನಗಳ ಟ್ಯಾಂಕ್‌ಗೆ ಏನು ತುಂಬಲಾಗುತ್ತಿದೆ? ಪೆಟ್ರೋಲ್‌ನಲ್ಲಿ ವಾಸ್ತವವಾಗಿ ಎಷ್ಟು ಎಥೆನಾಲ್ ಇದೆ? ಶೇ 20ಕ್ಕಿಂತ ಹೆಚ್ಚು ಎಥೆನಾಲ್ ಬೆರೆಸುತ್ತಿರುವ ಕಂಪನಿಗಳ ವಿರುದ್ಧ ಯಾವಾಗ ಕ್ರಮ ಕೈಗೊಳ್ಳುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರೊಂದಿಗಿನ ಬಹಿರಂಗ ಚರ್ಚೆಯ ಸವಾಲನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ಎಥೆನಾಲ್ ಮಿಶ್ರಣದ ವಿಷಯವನ್ನೂ ಆ ಚರ್ಚೆಯಲ್ಲಿ ಸೇರಿಸಿಕೊಳ್ಳಬಹುದು ಎಂದು ಸವಾಲು ಹಾಕಿದ್ದಾರೆ.

ಶುಕ್ರವಾರವಷ್ಟೇ ಕರ್ನಾಟಕ ಸರ್ಕಾರವು ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ನಿಗದಿತ ಶೇ 20ರ ಮಿತಿಯನ್ನು ಮೀರಿ, ಶೇ 31.2 ರಷ್ಟು ಎಥೆನಾಲ್ ಬೆರೆಸಿದ ಪೆಟ್ರೋಲ್ ಪೂರೈಸುತ್ತಿವೆ ಎಂದು ಆರೋಪಿಸಿ, ಈ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು.

ಆದರೆ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ IOC, BPCL ಮತ್ತು HPCL ಗಳು ಕರ್ನಾಟಕ ಸರ್ಕಾರದ ಈ ಆರೋಪಗಳನ್ನು ತಳ್ಳಿಹಾಕಿವೆ. ಪರೀಕ್ಷೆಗೆ ಬಳಸಿದ ಮಾದರಿ ಸಂಗ್ರಹಣೆ ಮತ್ತು ಪರೀಕ್ಷಾ ವಿಧಾನಗಳನ್ನು ಪ್ರಶ್ನಿಸಿರುವ ಕಂಪನಿಗಳು, ತೈಲವು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಿಯಮಾವಳಿಗಳಿಗೆ ಅನುಗುಣವಾಗಿಯೇ ಇದೆ ಎಂದು ಸ್ಪಷ್ಟಪಡಿಸಿವೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧ ಹಿನ್ನೆಲೆ ಜಾಮೀನು ನೀಡಲು ಸಕಾರಾತ್ಮಕ ಅಂಶವಲ್ಲ: ಸುಪ್ರೀಂ ಕೋರ್ಟ್

ಆರೋಪಿಯೋರ್ವನ ಅಪರಾಧ ಹಿನ್ನೆಲೆಯನ್ನು ಆತನಿಗೆ ಜಾಮೀನು ನೀಡಲು ಯಾವುದೇ ಕಾರಣಕ್ಕೂ 'ಸಕಾರಾತ್ಮಕ'...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ ಕಳ್ಳಾಟ ಬಯಲು!

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ ಪ್ರಯಾಣಿಕರಿಗಿಲ್ಲ ಮುಕ್ತಿ!

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ...

ಕೇರಳ- ಚುನಾವಣಾ ಆಯುಕ್ತ ಗ್ಯಾನೇಶ್ ವಿರುದ್ಧದ ತನಿಖೆಗೆ ವಿಶೇಷ ತಂಡ ರಚನೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್‌ ಅವರ ವಿರುದ್ಧ...