ಕರ್ನಾಟಕ ಸೇರಿ 22 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ಎಸ್‌ಐಆರ್’ ನಡೆಸಲು ಚುನಾವಣಾ ಆಯೋಗ ಮುಂದು

Date:

ಕರ್ನಾಟಕ ಸೇರಿದಂತೆ ಉಳಿದ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ಪ್ರಕ್ರಿಯೆಯು ಏಪ್ರಿಲ್‌ನಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ.

- Advertisement -

​ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪೂರ್ವ ಸಿದ್ಧತಾ ಕಾರ್ಯಗಳನ್ನು ಅತಿಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಪವನ್ ದಿವಾನ್ ಅವರು ತಮ್ಮ ಪತ್ರದಲ್ಲಿ ಎಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

​ದೇಶಾದ್ಯಂತ ಎಸ್‌ಐಆರ್‌ ಅನುಷ್ಠಾನಗೊಳಿಸಬೇಕು ಎಂದು ಕಳೆದ ವರ್ಷ ಜೂನ್ 24 ರಂದು ಆಯೋಗವು ಆದೇಶಿಸಿತ್ತು. ಜೂನ್ 2025 ರಲ್ಲಿಯೇ ಈ ಪ್ರಕ್ರಿಯೆ ಪ್ರಾರಂಭವಾದ ಬಿಹಾರವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಿಇಒಗಳಿಗೆ ಪೂರ್ವ-ಪರಿಷ್ಕರಣೆ ಕಾರ್ಯಗಳನ್ನು ಶುರು ಮಾಡಲು ನಿರ್ದೇಶಿಸಲಾಗಿತ್ತು ಎನ್ನುವುದನ್ನು ಪ್ರಸ್ತುತ ಪತ್ರದಲ್ಲಿ ನೆನಪಿಸಲಾಗಿದೆ.

ಇದನ್ನು ಓದಿದ್ದೀರಾ? ಬಂಗಾಳ SIR | ವಿಚಾರಣೆಗೆ ಒಳಗಾಗುತ್ತಿರುವ ಮತದಾರರಲ್ಲಿ ಅಲ್ಪಸಂಖ್ಯಾತರೇ ಹೆಚ್ಚು!

​ಬಿಹಾರದಲ್ಲಿ ಈ ಪ್ರಕ್ರಿಯೆ ಮುಗಿದ ನಂತರ, ಆಯೋಗವು ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಗುಜರಾತ್, ಉತ್ತರ ಪ್ರದೇಶ ಸೇರಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಘೋಷಿಸಿತ್ತು. ಆದರೆ, ಅಸ್ಸಾಂನಲ್ಲಿ ಅಪೂರ್ಣ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯಿಂದ ಎದುರಾದ ಕಾನೂನು ತೊಡಕುಗಳ ಹಿನ್ನೆಲೆಯಲ್ಲಿ, ಎಸ್‌ಐಆರ್‌ ಬದಲಾಗಿ ಕೇವಲ ‘ವಿಶೇಷ ಪರಿಷ್ಕರಣೆ’ಯನ್ನು ಮಾತ್ರ ನಡೆಸಲಾಯಿತು.

​ಇದೀಗ ಆಯೋಗವು ಕರ್ನಾಟಕ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ-ನಗರ್ ಹವೇಲಿ ಮತ್ತು ದಮನ್-ದಿಯು, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಲಡಾಖ್, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ದೆಹಲಿ, ಒಡಿಶಾ, ಪಂಜಾಬ್, ಸಿಕ್ಕಿಂ, ತ್ರಿಪುರ, ತೆಲಂಗಾಣ ಮತ್ತು ಉತ್ತರಾಖಂಡ ಸೇರಿದಂತೆ ಬಾಕಿ ಉಳಿದ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆಯನ್ನು ಕೈಗೊಳ್ಳಲು ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....