ಸತ್ಯ–ಅಹಿಂಸೆಯೊಂದಿಗೆ ಮೋದಿ, ಆರ್‌ಎಸ್‌ಎಸ್‌ ಸರ್ಕಾರದ ವಿರುದ್ಧ ಹೋರಾಟ: ರಾಹುಲ್ ಗಾಂಧಿ

Date:

‘ಸತ್ಯ’ ಮತ್ತು ‘ಅಹಿಂಸೆ’ಯ ತತ್ವಗಳನ್ನು ಆಧಾರವಾಗಿ ಮಾಡಿಕೊಂಡು ನರೇಂದ್ರ ಮೋದಿ–ಆರ್‌ಎಸ್‌ಎಸ್‌ ಸರ್ಕಾರವನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ನವದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ‘ವೋಟ್ ಚೋರ್, ಗಡ್ಡಿ ಛೋಡ್’ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಬಿಜೆಪಿಯ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ನಾವು ಸತ್ಯದ ಬೆಂಬಲದಲ್ಲಿದ್ದೇವೆ. ಅಧಿಕಾರದ ಮದದಲ್ಲಿ ಮೋದಿ–ಆರ್‌ಎಸ್‌ಎಸ್‌ ಸರ್ಕಾರ ಮತ ಕಳ್ಳತನಕ್ಕೆ ಇಳಿದಿದೆ. ಸತ್ಯ ಮತ್ತು ಅಸತ್ಯದ ನಡುವಿನ ಈ ಹೋರಾಟದಲ್ಲಿ ಚುನಾವಣಾ ಆಯೋಗವು ಬಿಜೆಪಿ ಸರ್ಕಾರದ ಜೊತೆಗೆ ನಿಂತಿದೆ,” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ವೇಳೆಯಲ್ಲಿ ಬಿಜೆಪಿ 10 ಸಾವಿರ ರೂ. ವರ್ಗಾಯಿಸಿದ್ದ ಆರೋಪದ ಕುರಿತು ಉಲ್ಲೇಖಿಸಿದ ಅವರು, ಈ ಕುರಿತು ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಚುನಾವಣಾ ಆಯುಕ್ತರಿಗೆ ವಿನಾಯಿತಿ ನೀಡುವ ಹೊಸ ಕಾನೂನನ್ನು ಕೇಂದ್ರ ಸರ್ಕಾರ ತಂದಿದೆ ಎಂದು ಹೇಳಿದ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆ ಕಾನೂನಿಗೆ ತಿದ್ದುಪಡಿ ಮಾಡಲಾಗುವುದು. ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು,” ಎಂದರು.

ವಿಳಂಬವಾದರೂ ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, “ಮೋದಿ ಮತ್ತು ಅಮಿತ್ ಶಾ ಅವರನ್ನು ಸೋಲಿಸಲು ಕಾಂಗ್ರೆಸ್ ಪಕ್ಷ ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ಹೋರಾಟ ಮುಂದುವರಿಸುತ್ತದೆ,” ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ದೇಶ ದ್ರೋಹಿಗಳು ಅಧಿಕಾರದಿಂದ ಕಿತ್ತೊಗೆಯಿರಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

​ಈ ಸಂದರ್ಭದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮತ ಕಳ್ಳತನ’ದಲ್ಲಿ ತೊಗಿರುವವರು ದ್ರೋಹಿಗಳಾಗಿದ್ದು, ಸಂವಿಧಾನ ಮತ್ತು ಮತದಾನದ ಹಕ್ಕನ್ನು ಉಳಿಸಲು ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೇಶವನ್ನು ಉಳಿಸಲು ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಹೀಗಾಗಿ ಭಾರತೀಯರೆಲ್ಲರೂ ಒಗ್ಗೂಡಿ ಕಾಂಗ್ರೆಸ್ ಸಿದ್ಧಾಂತವನ್ನು ಬಲಪಡಿಸುವುದು ಕರ್ತವ್ಯ ಎಂದು ಕರೆ ನೀಡಿದರು. ಇದೇ ವೇಳೆ, ಆರ್‌ಎಸ್‌ಎಸ್ ಸಿದ್ಧಾಂತವು ರಾಷ್ಟ್ರವನ್ನು ಸರ್ವನಾಶ ಮಾಡಲಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

​ಬಿಜೆಪಿ ವಿರುದ್ಧ ಹರಿಹಾಯ್ದ ಖರ್ಗೆ, “ಬಿಜೆಪಿಯವರು ‘ಗದ್ದಾರ್’ಗಳು ಮತ್ತು ‘ಡ್ರಾಮೇಬಾಜ್’ಗಳು (ನಾಟಕೀಯ ವರ್ತನೆಯವರು). ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಅನಿವಾರ್ಯವಾಗಿದೆ,” ಎಂದು ಗುಡುಗಿದರು.

ತಮ್ಮ ಬದ್ಧತೆಯನ್ನು ಪ್ರದರ್ಶಿಸುವ ಸಲುವಾಗಿ ವೈಯಕ್ತಿಕ ವಿಚಾರವೊಂದನ್ನು ಪ್ರಸ್ತಾಪಿಸಿದ ಖರ್ಗೆ, “ಬೆಂಗಳೂರಿನಲ್ಲಿ ನನ್ನ ಮಗನ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದರೂ ನಾನು ಅಲ್ಲಿಗೆ ಹೋಗಲಿಲ್ಲ. ‘140 ಕೋಟಿ ಜನರನ್ನು ಉಳಿಸುವುದು ಮುಖ್ಯ’ ಎಂದು ಭಾವಿಸಿ, ಶಸ್ತ್ರಚಿಕಿತ್ಸೆಗಿಂತ ಈ ರ‍್ಯಾಲಿಯಲ್ಲಿ ಭಾಗವಹಿಸುವುದೇ ಹೆಚ್ಚು ಆದ್ಯತೆಯ ವಿಷಯವೆಂದು ಪರಿಗಣಿಸಿ ಇಲ್ಲಿಗೆ ಬಂದಿದ್ದೇನೆ,” ಎಂದು ಹೇಳಿದರು.

ಬ್ಯಾಲೆಟ್ ಪೇಪರ್‌ ನಲ್ಲಿ ಚುನಾವಣೆ ಎದುರಿಸಿ: ಬಿಜೆಪಿಗೆ ಸವಾಲೆಸೆದ ಪ್ರಿಯಾಂಕಾ ಗಾಂಧಿ

“ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಎದುರಿಸಲು ಬಿಜೆಪಿಗೆ ನಾನು ಸವಾಲು ಹಾಕುತ್ತೇನೆ. ಬ್ಯಾಲೆಟ್‌ ಪೇಪರ್ ನಲ್ಲಿ ಸ್ಪರ್ಧಿಸಿದರೆ ಅವರು ಎಂದಿಗೂ ಗೆಲ್ಲಲಾರರು ಎಂಬುದು ಅವರಿಗೆ ತಿಳಿದಿದೆ” ಎಂದು ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿಗೆ ಸವಾಲೆಸಿದಿದ್ದಾರೆ.

ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತವೂ ಅನುಮಾನ ಹುಟ್ಟಿಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಜನರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ಹೇಗೆ ಪಿತೂರಿ ನಡೆಸಿದರು ಎಂಬುದಕ್ಕೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಚುನಾವಣೆಗಳು ನ್ಯಾಯಸಮ್ಮತವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದ ಅವರು, “ದೇಶದ ಸಂಸ್ಥೆಗಳನ್ನು ಸರ್ಕಾರದ ಮುಂದೆ ತಲೆ ಬಾಗಿಸಲಾಗುತ್ತಿದೆ. 10 ಸಾವಿರ ರೂ. ಪಾವತಿ ಪ್ರಕರಣದ ಮೇಲೆ ಚುನಾವಣಾ ಆಯೋಗ ಕಣ್ಣು ಮುಚ್ಚಿರುವುದು ಮತ ಕಳ್ಳತನಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...