4 ರಾಜ್ಯಗಳ 5 ವಿಧಾನಸಭೆಗಳಿಗೆ ಜೂ.19ರಂದು ಉಪಚುನಾವಣೆ

Date:

ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಜೂನ್ 19 ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

- Advertisement -

ಗುಜರಾತ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಜೂನ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗುಜರಾತ್‌ನಲ್ಲಿ ಹಾಲಿ ಶಾಸಕ ಕರ್ಸನ್‌ಭಾಯ್ ಪಂಜಾಬಿ ಸೋಲಂಕಿ ನಿಧನದ ಬಳಿಕ ಕಾಡಿ ಕ್ಷೇತ್ರದ ಸ್ಥಾನ ತೆರವಾಗಿತ್ತು. ಅಲ್ಲದೇ ವಿಶಾವದರ್ ಕ್ಷೇತ್ರದಲ್ಲಿ ಭಯಾನಿ ಭೂಪೇಂದ್ರಭಾಯ್ ಗಂಡುಭಾಯ್ ಅವರ ರಾಜೀನಾಮೆಯಿಂದಾಗಿ ಆ ಕ್ಷೇತ್ರದ ಸ್ಥಾನ ತೆರವಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಕೇರಳದ ನಿಲಂಬೂರ್ ಕ್ಷೇತ್ರದಲ್ಲಿ ಪಿ ವಿ ಅನ್ವರ್ ರಾಜೀನಾಮೆಯಿಂದ ಉಪಚುನಾವಣೆ ನಡೆಯಲಿದೆ. ಪಂಜಾಬ್‌ನ ಲುಧಿಯಾನ ಕ್ಷೇತ್ರದಲ್ಲಿ ಗುರುಪ್ರೀತ್ ಬಸ್ಸಿ ಗೋಗಿ ಅವರ ನಿಧನದಿಂದಾಗಿ ಸ್ಥಾನ ತೆರವಾಗಿತ್ತು.

ಪಶ್ಚಿಮ ಬಂಗಾಳದ ಕಾಳಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ನಾಸಿರುದ್ದೀನ್ ಅಹಮದ್ ಅವರ ನಿಧನದಿಂದ ಉಪಚುನಾವಣೆ ಅನಿವಾರ್ಯವಾಗಿದೆ. ಈ ಎಲ್ಲ ಕ್ಷೇತ್ರಗಳಲ್ಲೂ ಜೂ.19ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...