ಪಶ್ಚಿಮ ಬಂಗಾಳದಲ್ಲಿ ಒಂದು ಕ್ಷೇತ್ರದಲ್ಲಿ ನಾಳೆ ಮತ ಎಣಿಕೆ ನಡೆಯಲ್ಲ; ಕಾರಣವೇನು?

Date:

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ 293 ಕ್ಷೇತ್ರಗಳಿಗೆ ನಾಳೆ (ಮೇ 4, 2026) ಮತ ಎಣಿಕೆ ನಡೆಯಲಿದೆ. ಆದರೆ, ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ತಾ (Falta) ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ನಾಳೆ ಮತ ಎಣಿಕೆ ನಡೆಯುವುದಿಲ್ಲ.

- Advertisement -

ಫಾಲ್ತಾ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಎರಡನೇ ಹಂತದ ಮತದಾನದ ವೇಳೆ ಗಂಭೀರವಾದ ಚುನಾವಣಾ ಅಕ್ರಮಗಳು ನಡೆದಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಚುನಾವಣಾ ಆಯೋಗವು (ECI) ಆ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮತದಾನವನ್ನು ರದ್ದುಗೊಳಿಸಿದೆ. ಮೇ 21ರಂದು ಮರುಮತದಾನ ನಡೆಯಲಿದ್ದು, ಮೇ 24ರಂದು ಫಲಿತಾಂಶ ಹೊರಬೀಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ಮತ ಹಾಕಿದರೆ ಮತ ವಿಭಜನೆಯಾಗಿ ಬಿಜೆಪಿಗೆ ಲಾಭವಾಗುತ್ತದೆ: ಅಭಿಷೇಕ್ ಬ್ಯಾನರ್ಜಿ

ಮತಯಂತ್ರಗಳ (EVM) ಬಟನ್‌ಗಳ ಮೇಲೆ ಕಪ್ಪು ಬಣ್ಣದ ಟೇಪನ್ನು ಹಚ್ಚಲಾಗಿತ್ತು ಮತ್ತು ಸುಗಂಧ ದ್ರವ್ಯವನ್ನು ಸಿಂಪಡಿಸಿ ಮತದಾರರನ್ನು ದಿಕ್ಕು ತಪ್ಪಿಸಲಾಗಿತ್ತು ಎಂಬ ಆರೋಪಗಳಿವೆ. ಮತದಾರರಿಗೆ ಬೆದರಿಕೆ ಹಾಕಿದ್ದು, ಮತಗಟ್ಟೆಗಳ ಒಳಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದ್ದು ಮತ್ತು ಕೆಲವು ಕಡೆ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿಲ್ಲದ ಕಾರಣ ಇಡೀ ಕ್ಷೇತ್ರಕ್ಕೆ ಮರುಮತದಾನ ಘೋಷಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದ ಸೌಗತ ರಾಯ್, “ಮತದಾನದ ಪ್ರಮಾಣ ಕಡಿಮೆಯಾಗುವುದು ಸಹಜ” ಎಂದು ಹೇಳಿದ್ದಾರೆ. ಅಲ್ಲದೆ, ಸ್ಟ್ರಾಂಗ್ ರೂಮ್‌ಗಳಲ್ಲಿ ಸಿಸಿಟಿವಿ ಸ್ಥಗಿತಗೊಂಡಿದೆ ಮತ್ತು ತಮ್ಮ ಏಜೆಂಟ್‌ಗಳಿಲ್ಲದ ಸಮಯದಲ್ಲಿ ಕೊಠಡಿಗಳನ್ನು ತೆರೆಯಲಾಗಿದೆ ಎಂದು ಆರೋಪಿಸಿ ಟಿಎಂಸಿ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಇನ್ನೊಂದೆಡೆ ಬಿಜೆಪಿ ನಾಯಕರು ಟಿಎಂಸಿಯ ಆರೋಪಗಳನ್ನು “ಸೋಲಿನ ಭೀತಿಯಿಂದ ಮಾಡುತ್ತಿರುವ ನಾಟಕ” ಎಂದು ಟೀಕಿಸಿದ್ದಾರೆ. ಬಿಜೆಪಿ ನಾಯಕ ದೀಲಿಪ್ ಘೋಷ್, “ಟಿಎಂಸಿ ಸೋಲು ಖಚಿತವಾಗಿದ್ದರಿಂದ ಗಮನವನ್ನು ಬೇರೆಡೆ ಸೆಳೆಯಲು ಸ್ಟ್ರಾಂಗ್ ರೂಮ್‌ಗಳ ಬಗ್ಗೆ ಸುಳ್ಳು ದೂರುಗಳನ್ನು ನೀಡುತ್ತಿದೆ” ಎಂದು ಲೇವಡಿ ಮಾಡಿದ್ದಾರೆ.

ಅಸ್ಸಾಂ, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 9ಕ್ಕೆ ಚುನಾವಣೆ ನಡೆದಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳು ಹೊರಬಂದ ಒಂದು ದಿನದ ಬಳಿಕ ಮೇ 2ರಂದು 15 ಪೋಲಿಂಗ್ ಬೂತ್‌ಗಳಲ್ಲಿ ಮರು ಮತದಾನ ನಡೆದಿದೆ. ಇದೀಗ ಮತ್ತೊಂದು ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಈ ಒಂದು ಕ್ಷೇತ್ರ ಬಿಟ್ಟು ಉಳಿದೆಲ್ಲ ಕ್ಷೇತ್ರಗಳ ಚುನಾವಣಾ ಫಲಿತಾಂಶ ಮೇ4ರಂದು ಹೊರ ಬೀಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...