ಮತದಾನದ ಅಂಕಿಅಂಶಗಳನ್ನು ತಕ್ಷಣ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

Date:

ಮತದಾನವಾದ 48 ಗಂಟೆಯೊಳಗೆ ಮತದಾನದ ಅಧಿಕೃತ ಅಂಕಿಅಂಶಗಳನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ದಿ ಅಸೋಷಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾಮ್ಸ್(ಎಡಿಆರ್‌) ಸಂಸ್ಥೆ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ.

- Advertisement -

ಲೋಕಸಭೆ ಚುನಾವಣೆ ನಡೆಯುತ್ತಿರುವಾಗ ಕೇಂದ್ರ ಚುನಾವಣಾ ಆಯೋಗವು ಮತದಾನದ ಅಂಕಿಅಂಶಗಳನ್ನು ಮತದಾನದ ಹಲವು ದಿನಗಳ ನಂತರ ಪ್ರಕಟಿಸಿದೆ. ಮೊದಲ ಹಂತದ ಮತದಾನ ಏ.19 ರಂದು ನಡೆದಿದ್ದು ಇದನ್ನು 11 ದಿನಗಳ ನಂತರ ಹಾಗೂ ಏ.26ರಂದು ನಡೆದ ಎರಡನೇ ಹಂತದ ಮತದಾನದ ಶೇಕಡಾವಾರು ಪ್ರಮಾಣವನ್ನು 4 ದಿನಗಳ ನಂತರ ಪ್ರಕಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಚುನಾವಣಾ ದಿನದಲ್ಲಿ ನಡೆದ ಶೇಕಡವಾರು ಪ್ರಮಾಣಕ್ಕೂ ಬಿಡುಗಡೆಗೊಳಿಸಿದ ಶೇಕಡವಾರು ಪ್ರಮಾಣಕ್ಕೂ ಶೇ.5 ರಷ್ಟು ವ್ಯತ್ಯಾಸ ಕಾಣುತ್ತಿದೆ ಎಂದು ಎಡಿಆರ್‌ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

“ಅಂಕಿಅಂಶವನ್ನು ಚುನಾವಣಾ ಆಯೋಗವು ಏ.30 ರಂದು ಪತ್ರಿಕಾ ಪ್ರಕಟಣೆ ಮೂಲಕ ಹೊರಡಿಸಿದ್ದು,ಚುನಾವಣೆ ದಿನದಂದು ಸಂಜೆ ನೀಡಿದ ಶೇಕಡವಾರು ಪ್ರಮಾಣಕ್ಕೆ ಹೋಲಿಸಿದರೆ ಶೇ. 5ರಿಂದ 6 ರಷ್ಟು ಮತ ಪ್ರಮಾಣ ಹೆಚ್ಚಾಗಿದೆ. ಎರಡು ಮತ ಪ್ರಮಾಣ ವ್ಯತ್ಯಾಸವಿರುವುದರಿಂದ ಹಲವು ಪ್ರಶ್ನೆಗಳನ್ನು ಮೂಡಿಸಿದ್ದು, ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ” ಎಂದು ಎಡಿಆರ್‌ ಪರ ವಕೀಲರಾದ ಪ್ರಶಾಂತ್ ಭೂಷಣ್‌ ತಿಳಿಸಿದ್ದಾರೆ.

“ಈ ಆತಂಕಗಳನ್ನು ನಿವಾರಿಸಿ, ವಾಸ್ತವಾಂಶಗಳನ್ನು ಒದಗಿಸಬೇಕು. ಮತದಾರರ ವಿಶ್ವಾಸವನ್ನು ಎತ್ತಿಹಿಡಿಯಲು ಮತದಾನದ ಅಧಿಕೃತ ಅಂಶಗಳನ್ನು ಒಳಗೊಂಡಿರುವ ಎಲ್ಲ ಮತಗಟ್ಟೆಗಳ ವಿವರಗಳನ್ನು ಫಾರ್ಮ್‌ 17ಸಿ ವಿಭಾಗ-1ರ ಪ್ರತಿಗಳಲ್ಲಿ ಮತದಾನವಾದ 48 ಗಂಟೆಯೊಳಗೆ ತಮ್ಮ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಫಲಿತಾಂಶ ಪ್ರಕಟಗೊಂಡ ನಂತರ ಅಭ್ಯರ್ಥಿವಾರು ಫಲಿತಾಂಶ ಒಳಗೊಂಡಿರುವ ಮಾಹಿತಿಯನ್ನು 17ಸಿ ವಿಭಾಗ-2ರ ಪ್ರತಿಗಳಲ್ಲಿ ವೆಬ್‌ಸೈಟ್‌ ಮೂಲಕ ಅಪ್‌ಲೋಡ್‌ ಮಾಡಬೇಕು ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...