ಎಎಪಿ ನಾಯಕರಿಗೆ 100 ಕೋಟಿ ಲಂಚ: ಕೆ ಕವಿತಾ ವಿರುದ್ಧ ಆರೋಪ ಪಟ್ಟಿ ದಾಖಲಿಸಿದ ಇ.ಡಿ

Date:

ಭಾರತ್‌ ರಾಷ್ಟ್ರ ಸಮಿತಿ(ಬಿಆರ್‌ಎಸ್‌) ನಾಯಕಿ ಕೆ ಕವಿತಾ ಅವರು ಈಗಾಗಲೇ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಭಾಗಿಯಾಗಿದ್ದಾರೆ. ದೊಡ್ಡ ಮಟ್ಟದಲ್ಲಿ ಅನುಕೂಲ ಪಡೆಯುವ ಸಲುವಾಗಿ ಎಎಪಿ ನಾಯಕರಿಗೆ 100 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಕವಿತಾ ವಿರುದ್ಧ ಸಲ್ಲಿಸಲಾಗಿರುವ ಆರೋಪಟ್ಟಿಯಲ್ಲಿ ದಾಖಲಿಸಿದೆ.

- Advertisement -

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಇಂಡೋ ಸ್ಪಿರಿಟ್ಸ್‌ ಎಂಬ ಸಂಸ್ಥೆಯನ್ನು ರಚಿಸಿ ಅದನ್ನು ಸ್ವಾಧೀನಪಡಿಸಿಕೊಳ್ಳುವ ಪಿತೂರಿಯ ಭಾಗವಾಗಿ 292.8 ಕೋಟಿ ರೂ. ಮೊತ್ತವನ್ನು ಬಳಸುವ ಪ್ರಕ್ರಿಯೆಯಾಗಿತ್ತು. ಇದಕ್ಕಾಗಿ ಲಂಚ ನೀಡಲಾಗಿತ್ತು ಎಂದು ತನಿಖಾ ಸಂಸ್ಥೆ ಆರೋಪಪಟ್ಟಿಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಇಂಡೋ ಸ್ಪಿರಿಟ್ಸ್‌ನಿಂದ ಸಹಾಯಕ ಅಭಿಷೇಕ್‌ ಬೋಯ್ನಪಲ್ಲಿ ಎಂಬುವವರ ಹೆಸರಿನಲ್ಲಿ ಬಿಆರ್‌ಎಸ್‌ ನಾಯಕಿ 5.5 ಕೋಟಿ ರೂ. ಆದಾಯವನ್ನು ಸ್ವೀಕರಿಸಿದ್ದಾರೆ ತನಿಖಾ ಸಂಸ್ಥೆ ಆರೋಪಿಸಿದೆ.

ಕೆ ಕವಿತಾ ಅವರು ಸರ್ಕಾರದಲ್ಲಿ ಇಂಡೋ ಸ್ಪಿರಿಟ್ಸ್‌ ಕಾರ್ಯ ಸ್ಥಾಪಿಸುವ ಸಲುವಾಗಿ 1100 ಕೋಟಿ ರೂ. ಲಾಭ ಪಡೆಯಲು ಮಧ್ಯವರ್ತಿಯ ಮೂಲಕ ಲಂಚ ನೀಡಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಪುರಾವೆಗಳು ಹಾಗೂ ತಮ್ಮ ಮೊಬೈಲ್‌ನಲ್ಲಿರುವ ದಾಖಲೆಗಳನ್ನು ಅಳಿಸಿದ್ದಾರೆ. ಪರಿಶೀಲನೆಗಾಗಿ ಇ.ಡಿ ಸಂಸ್ಥೆಗೆ ನೀಡಲಾಗಿರುವ 9 ಫೋನ್‌ಗಳಲ್ಲಿ ಯಾವುದೇ ಡಾಟಾ ಇಲ್ಲದಂತೆ ಫಾರ್ಮೆಟ್ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ವಿಚಾರಣೆಯ ಸಂದರ್ಭದಲ್ಲಿ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವ ಸಲುವಾಗಿ ಕವಿತಾ ಅವರು ಫಾರ್ಮೇಟ್‌ ಮಾಡಲಾದ ಫೋನ್‌ಗಳ ಬಗ್ಗೆ ಯಾವುದೇ ಮಾಹಿತಿಗಳನ್ನು ನೀಡುತ್ತಿರಲಿಲ್ಲ. ಅಲ್ಲದೆ ಪ್ರಕರಣದಲ್ಲಿ ಭಾಗಿಯಾಗಿರುವ ಸಾಕ್ಷಿಗಳ ಮೇಲೂ ಕವಿತಾ ಅವರು ಪ್ರಭಾವ ಬೀರಿದ್ದಾರೆ ಎಂದು ಇ.ಡಿ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

ಕೆ ಕವಿತಾ ಅವರ ಚಾರ್ಟೆಡ್‌ ಅಕೌಂಟೆಡ್‌ ಆಗಿರುವ ಬುಚಿ ಬಾಬು ಅವರು ಇ.ಡಿ ಮುಂದೆ ಕಳೆದ ಫೆ.23 ಹಾಗೂ ಫೆ.28ರಂದು ನೀಡಿರುವ ಹೇಳಿಕೆಗಳಲ್ಲಿ ಇದು ದಾಖಲಾಗಿದೆ. ಆತನು ತಾನು ನೀಡಿರುವ ಹೇಳಿಕೆ ಹಿಂತೆಗೆದುಕೊಳ್ಳುವಂತೆ ಕವಿತಾ ಅವರು ಪ್ರಭಾವ ಬೀರಿದ್ದರು ಎಂದು ತನಿಖಾ ಸಂಸ್ಥೆ ಮುಂದೆ ತಿಳಿಸಿದ್ದಾನೆ.

ನಿನ್ನೆಯಷ್ಟೆ ಕವಿತಾ ಅವರನ್ನು ದೆಹಲಿ ಕೋರ್ಟ್‌ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.3ರವರೆಗೂ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿತ್ತು. ಅಬಕಾರಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಹಾಗೂ ಇ.ಡಿ ಎರಡೂ ಸಂಸ್ಥೆಗಳು ತನಿಖೆ ನಡೆಸುತ್ತಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿಯಾದ ಕೆ ಚಂದ್ರಶೇಖರ್‌ ರಾವ್‌ ಅವರ ಪುತ್ರಿಯಾದ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಮಾ.15 ರಂದು ಹೈದರಾಬಾದ್‌ನಿಂದ ಬಂಧಿಸಿತ್ತು. ಸದ್ಯ ಅವರು ತಿಹಾರ್‌ ಜೈಲಿನಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...