ಬೆಟ್ಟಿಂಗ್ ಆ್ಯಪ್‌ ಪ್ರಚಾರ ಆರೋಪ: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ 29 ಮಂದಿ ವಿರುದ್ಧ ಕೇಸ್‌ ದಾಖಲಿಸಿದ ಇಡಿ

Date:

ಆನ್‌ಲೈನ್‌ನಲ್ಲಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ನಟಿ ಪ್ರಣೀತಾ ಸುಭಾಷ್ ಸೇರಿದಂತೆ 29 ಮಂದಿ ತೆಲಂಗಾಣದ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ಯೂಟ್ಯೂಬರ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ. ಇವರೆಲ್ಲರ ಹಣ ವರ್ಗಾವಣೆ ಕುರಿತು ತನಿಖೆ ಆರಂಭಿಸಿದೆ ಎಂಧು ಪಿಐಟಿ ವರದಿ ಮಾಡಿದೆ.

- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸ್ಥಳೀಯ ಪಿಲೀಸರು ದಾಖಲಿಸಿರುವ ಸುಮಾರು ಐದು ಎಫ್‌ಐಆರ್‌ಗಳನ್ನು ಆಧರಿಸಿ ಇಡಿ ‘ಹಣ ವರ್ಗಾವಣೆ ತಡೆ ಕಾಯ್ದೆ’ (ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಿಸಿದೆ. ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳಲ್ಲಿ, ಅನಧಿಕೃತ ಜೂಜಾಟಗಳ ಮೂಲಕ ಕೋಟ್ಯಂತರ ರೂಪಾಯಿ ಅಕ್ರಮ ಆದಾಯ ಗಳಿಸಿದ ಆರೋಪ ಹೊತ್ತಿರುವ ಬೆಟ್ಟಿಂಗ್ ಆ್ಯಪ್‌ಗಳ ಜಾಲವನ್ನೂ ಉಲ್ಲೇಖಿಸಿದೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇಡಿ ದಾಖಲಿಸಿರುವ ಪ್ರಕರಣಗಳಲ್ಲಿ ನಟಿ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ ಹಾಗೂ ಟಿವಿ ನಿರೂಪಕಿ ಶ್ರೀಮುಖಿ ಸೇರಿದಂತೆ ಒಟ್ಟು 29 ಮಂದಿಯ ಹೆಸರನ್ನು ಉಲ್ಲೇಖಿಸಲಾಗಿದೆ.

ಈ ಸೆಲೆಬ್ರಿಟಿಗಳು ಜಂಗ್ಲಿ ರಮ್ಮಿ, ಜೀಟ್‌ವಿನ್ ಹಾಗೂ ಲೋಟಸ್365 ರೀತಿಯ ಬೆಟ್ಟಿಂಗ್ ಆ್ಯಪ್‌ಗಳು ಕಾನೂನಿನ ವ್ಯಾಪ್ತಿಯಲ್ಲಿ ಚಟುವಟಿಕೆ ನಡೆಸುತ್ತಿವೆಯೇ ಎಂಬುದನ್ನು ಪರಿಶೀಲಿಸದೆ, ಹಣ ಪಡೆದು ಅವುಗಳ ಪ್ರಚಾರ ಮಾಡಿದ್ದಾರೆ ಎಂದು ಪ್ರಕರಣದಲ್ಲಿ ವಿವರಿಸಲಾಗಿದೆ.

ಈ ಲೇಖನ ಓದಿದ್ದೀರಾ?:ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ಈ ಆ್ಯಪ್‌ಗಳ ನಿಜವಾದ ಸ್ವರೂಪಗಳ ಬಗ್ಗೆ ತಮಗೆ ತಿಳಿದಿಲ್ಲ ಎಂದು ಪ್ರಚಾರ ಮಾಡಿದವರಲ್ಲಿ ಕೆಲವರು ಹೇಳಿಕೊಂಡಿದ್ದಾರೆ. ಆದರೂ, ಆ್ಯಪ್‌ ಕಾರ್ಯಾಚರಣೆಯಲ್ಲಿ ಅವರ ಒಳಗೊಳ್ಳುವಿಕೆಯ ವ್ಯಾಪ್ತಿಯನ್ನು ನಿರ್ಧರಿಸಲು ಮುಂದಿನ ದಿನಗಳಲ್ಲಿ ಎಲ್ಲರ ಹೇಳಿಕೆಗಳನ್ನು ಇಡಿ ದಾಖಲಿಸುವ ಸಾಧ್ಯತೆ ಇದೆ.

ಇಡಿ ತನ್ನ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು ಹೆಚ್ಚುವರಿ ದೂರುಗಳು ಮತ್ತು FIRಗಳನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದೆ. ಅಪರಾಧದ ಆದಾಯವನ್ನು ಪತ್ತೆಹಚ್ಚುವುದು ಮತ್ತು ಪ್ರಚಾರದ ಒಪ್ಪಂದಗಳ ಮೂಲಕ ಎಷ್ಟು ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂಬುದನ್ನು ಶೋಧಿಸುವುದರ ಮೇಲೆ ತನಿಖೆಯು ಕೇಂದ್ರೀಕರಿಸುತ್ತದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...