ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಇಡಿಗೆ ಸಿಕ್ಕಿದು ಬರೀ 70,000 ರೂಪಾಯಿ: ಎಎಪಿ

Date:

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ. ಈ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, “ಜಾರಿ ನಿರ್ದೇಶನಾಲಯಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಬರೀ 70,000 ರೂಪಾಯಿ ಲಭಿಸಿದೆ” ಎಂದು ಹೇಳಿದರು.

- Advertisement -

“ಮುಖ್ಯಮಂತ್ರಿ ಕೇಜ್ರಿವಾಲ್ ಮನೆಯಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಅವರಿಗೆ ಬರೀ 70,000 ರೂಪಾಯಿ ಸಿಕ್ಕಿದ್ದು, ಅದನ್ನು ಹಿಂದಿರುಗಿಸಿದ್ದಾರೆ. ಬಳಿಕ ಮುಖ್ಯಮಂತ್ರಿಯ ಮೊಬೈಲ್ ಅನ್ನು ಪಡೆದು, ಬಂಧಿಸಿದ್ದಾರೆ. ಇಡಿ ಅಧಿಕಾರಿಗಳಿಗೆ ಯಾವುದೇ ಪುರಾವೆ ಅಥವಾ ಅಧಿಕ ಹಣ ದೊರೆತಿಲ್ಲ” ಎಂದು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಪ್ರಧಾನಿ ನರೇಂದ್ರ ಮೋದಿ ನಮ್ಮ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಂದ ಆತಂಕಕ್ಕೆ ಒಳಗಾಗಿದ್ದಾರೆ, ಅದಕ್ಕಾಗಿ ಕೇಜ್ರಿವಾಲ್‌ರನ್ನು ಬಂಧಿಸಿದ್ದಾರೆ. ಇಂದು ಅವರು ಅಧಿಕಾರದಲ್ಲಿರುವ ಕಾರಣ ತಮ್ಮ ಏಜೆನ್ಸಿಗಳ ಮೂಲಕ ಕೇಜ್ರಿವಾಲ್‌ರನ್ನು ಬಂಧಿಸಿದರು. ಈಗ ಮೋದಿ ಅವರನ್ನು ತಡೆಯಲು ಯಾರೂ ಇಲ್ಲ. ಅವರು ಈಗಾಗಲೇ ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿದ್ದಾರೆ. ಇನ್ನೂ ಹಲವಾರು ಮಂದಿಯನ್ನು ಬಂಧಿಸಬಹುದು” ಎಂದು ಭೂ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ ಅವರನ್ನು ಉಲ್ಲೇಖಿಸಿ ಹೇಳಿದರು.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಕೇಜ್ರಿವಾಲ್‌ ಅವರಿಗೆ ಇಡಿ ಒಂಬತ್ತು ಬಾರಿ ಸಮನ್ಸ್ ನೀಡಿದ್ದು, ಕೇಜ್ರಿವಾಲ್‌ ಹಾಜರಾಗಲಿರಲಿಲ್ಲ.

ಇದನ್ನು ಓದಿದ್ದೀರಾ?  ಅಬಕಾರಿ ಹಗರಣ | ದೆಹಲಿ ಸಿಎಂ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಂಧನ

ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಆಪ್

ತಡರಾತ್ರಿ ಪತ್ರಿಕಾಗೋಷ್ಠಿ ನಡೆಸಿದ ಎಎಪಿ ದೆಹಲಿ ಘಟಕದ ಸಂಚಾಲಕರು ಗೋಪಾಲ್ ರೈ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪ್ತಿ ಪ್ರತಿಭಟನೆಗೆ ಕರೆ ನೀಡಿದರು. ಈ ಬಂಧನವನ್ನು “ಪ್ರಜಾಪ್ರಭುತ್ವದ ಕಗ್ಗೊಲೆ” ಮತ್ತು “ಸರ್ವಾಧಿಕಾರದ ಘೋಷಣೆ” ಎಂದು ಗೋಪಾಲ್ ರೈ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...