ಅನಿಲ್ ಅಂಬಾನಿಗೆ ಮತ್ತೆ ಇಡಿ ಸಮನ್ಸ್; ವಿಚಾರಣೆ ಮುಂದೂಡಿಕೆಗೆ ಪತ್ನಿ ಟೀನಾ ಮನವಿ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ(ಇಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ. ಹಲವು ಬಾರಿ ಸಮನ್ಸ್ ನೀಡಿದರೂ ಅನಿಲ್ ವಿಚಾರಣೆಗೆ ಹಾಜರಾಗಿಲ್ಲ. ಈಗ ಮತ್ತೆ ಸಮನ್ಸ್ ನೀಡಲಾಗಿದೆ.

- Advertisement -

ಈ ನಡುವೆ ಅನಿಲ್ ಪತ್ನಿ, ಮಾಜಿ ನಟಿ ಟೀನಾ ಅಂಬಾನಿ ಕೂಡಾ ರಡು ಬಾರಿ ವಿಚಾರಣೆ ಮುಂದೂಡಿಕೆ ಕೋರಿದ್ದಾರೆ. ಫೆಬ್ರವರಿ 10 ಮತ್ತು ಫೆಬ್ರವರಿ 17ರಂದು ಹಾಜರಾಗುವಂತೆ ಇಡಿ ತಿಳಿಸಿದ್ದು, ಟೀನಾ ಇಡಿ ಮುಂದೆ ಹಾಜರಾಗಿಲ್ಲ. ಇದೀಗ ಅವರಿಗೂ ಇಡಿ ಹೊಸದಾಗಿ ವಿಚಾರಣೆಗೆ ದಿನಾಂಕ ನೀಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರತ್ಯೇಕ ಹೇಳಿಕೆಗಳನ್ನು ದಾಖಲಿಸಲು ಇಡಿ ದಂಪತಿಗೆ ತಿಳಿಸಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ 2025ರ ಆಗಸ್ಟ್‌ನಲ್ಲಿ ಅನಿಲ್ ಅಂಬಾನಿ ಒಮ್ಮೆ ಇಡಿ ಮುಂದೆ ಹಾಜರಾಗಿದ್ದಾರೆ. ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ನಲ್ಲಿ ಐಷಾರಾಮಿ ಕಾಂಡೋಮಿನಿಯಂ ಖರೀದಿಗೆ ಹಣದ ಮೂಲ ಎಲ್ಲಿಂದ ಬಂದಿದೆ ಎಂಬುದಕ್ಕೆ ಸಂಬಂಧಿಸಿದಂತೆ ಟೀನಾ ಅಂಬಾನಿ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಇಡಿ ಇತ್ತೀಚೆಗೆ ಮಾಜಿ ಆರ್‌ಕಾಮ್ (ರಿಲಯನ್ಸ್ ಕಮ್ಯುನಿಕೇಷನ್) ಅಧ್ಯಕ್ಷ ಪುನೀತ್ ಗಾರ್ಗ್ ಅವರನ್ನು ಬಂಧಿಸಿದೆ.

ಇನ್ನು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ವಿರುದ್ಧದ ಬ್ಯಾಂಕ್ ವಂಚನೆ ಮತ್ತು ಸಂಬಂಧಿತ ಹಣಕಾಸಿನ ಅಕ್ರಮಗಳ ಬಹು ಪ್ರಕರಣಗಳ ತನಿಖೆಗಾಗಿ ಇಡಿ ಇತ್ತೀಚೆಗೆ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ.

ತನಿಖೆಯ ಭಾಗವಾಗಿ ಅದು 12,000 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ರಿಲಯನ್ಸ್ ಗ್ರೂಪ್ ಕಂಪನಿಗಳ ವಿರುದ್ಧ ECIR ಗಳು (ಎನ್‌ಫೋರ್ಸ್‌ಮೆಂಟ್ ಕೇಸ್ ಇನ್ಫಾರ್ಮೇಶನ್ ರಿಪೋರ್ಟ್ಸ್) ಎಂಬ ಮೂರು ದೂರುಗಳನ್ನು ದಾಖಲಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....